5 States Assembly Election Results 2026: ತಮಿಳುನಾಡು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು: ಬಿ. ಶ್ರೀರಾಮುಲು

Kannadaprabha News   | Kannada Prabha
Published : May 04, 2026, 09:14 AM IST
Ballari sriramulu on karnataka budget 2025

ಸಾರಾಂಶ

5 States Assembly Election Results 2026 ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ತಮಿಳುನಾಡು ಹೊರತುಪಡಿಸಿ ಉಳಿದೆಡೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಗಳ ಬಗ್ಗೆಯೂ ಪ್ರಸ್ತಾಪಿಸಿದರು.

ಕಂಪ್ಲಿ (ಮೇ.4): ತಮಿಳುನಾಡು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟವಾದ ಗೆಲುವು ಸಿಗಲಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ವಿವರವಾಗಿ ಅಭಿಪ್ರಾಯ ಹಂಚಿಕೊಂಡರು.

ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರೀ ಹಣ ವ್ಯಯ ಮಾಡಿದ್ದರೂ ಜನರಲ್ಲಿ ಬಿಜೆಪಿ ಪರ ಹವಾ ಇದೆ. ದಾವಣಗೆರೆಯಲ್ಲಿ ಎರಡರಿಂದ ಮೂರು ಸಾವಿರ ಮತಗಳ ಅಂತರದಲ್ಲಿ, ಬಾಗಲಕೋಟೆಯಲ್ಲಿ ಸುಮಾರು ಐದು ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಾಣಿಜ್ಯ ಅನಿಲದ ದರ ಏರಿಕೆ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. ಜಾಗತಿಕ ಪರಿಸ್ಥಿತಿಗಳ ಪರಿಣಾಮವಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಇರಾನ್, ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯ ಸಮಯದಲ್ಲೇ ದರ ಏರಿಕೆ ಮಾಡಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಅದು ತಡವಾಗಿದೆ ಎಂದರು.

ರಾಜ್ಯ ರಾಜಕೀಯದಲ್ಲಿ ವೇಗವಾದ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ವದಂತಿಗಳು ಕೇಳಿಬರುತ್ತಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಾಧ್ಯತೆಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.

ತುಂಗಭದ್ರಾ ಜಲಾಶಯದ ಗೇಟ್‌ಗಳ ದುರಸ್ತಿ ಕಾರ್ಯದಿಂದ ರೈತರು ಒಂದು ಹಂಗಾಮಿನ ಬೆಳೆ ಕಳೆದುಕೊಂಡಿದ್ದಾರೆ. ಹಾನಿಗೊಳಗಾದ ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಜಲಾಶಯದ ಗೇಟ್‌ಗಳಿಗೆ ಸಂಬಂಧಿಸಿದ ಹಳೆಯ ಚೈನ್‌ಗಳು ಇನ್ನು ಬದಲಾಯಿಸದಿರುವುದು ಆತಂಕಕಾರಿ ವಿಷಯ. ಅವು ನೀರಿನ ಒತ್ತಡ ತಾಳದೆ ಮುರಿದು ಬೀಳುವ ಸಾಧ್ಯತೆ ಇದ್ದು, ಇದರಿಂದ ಮತ್ತೊಂದು ಬೆಳೆ ಹಾನಿಯಾಗುವ ಭೀತಿ ಇದೆ. ತಕ್ಷಣವೇ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮೇ 9ರಂದು ಚಿತ್ರದುರ್ಗನಲ್ಲಿ ನಡೆಯಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಭಿನಂದನಾ ಸಮಾರಂಭಕ್ಕೆ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಇದು 2028ರ ವಿಧಾನಸಭಾ ಚುನಾವಣೆಗೆ ಒಗ್ಗಟ್ಟಿನ ವೇದಿಕೆಯಾಗಿ ಪರಿಣಮಿಸಲಿದೆ ಎಂದರು.

ಇದೇ ವೇಳೆ ಜಾತಿ ಸಮೀಕ್ಷೆಯ ನಂತರ ಕ್ಷೇತ್ರ ಪುನರ್ವಿಂಗಡಣೆ ಸಾಧ್ಯತೆ ಎದುರಾಗಬಹುದು ಎಂದರು.

ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಹಾಗೂ ಬಿಜೆಪಿ ಮುಖಂಡರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶೃಂಗೇರಿ ಅಂಚೆ ಮತ ವಿವಾದ: ಮೂವರ ವಿರುದ್ಧ FIR! ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಧಿಕಾರ ಸ್ವೀಕಾರ
‌Thalapathy Vijay ಭವಿಷ್ಯ ನಿರ್ಧಾರವಾಗೋ ದಿನವೇ ತಿರುಪತಿ ಮೊರೆ ಹೋದ ನಟಿ ತ್ರಿಶಾ; ಈಗಲೇ ಇಷ್ಟು ಬೆಂಬಲವೇ?