50 ಕೋಟಿ ಆಮಿಷ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

By Kannadaprabha NewsFirst Published Mar 25, 2024, 4:43 AM IST
Highlights

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಶಾಸಕ ಸುರೇಶ್ ಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಸೇರಿದಂತೆ ಇತರೆ ನಾಯಕರ ಬಿಜೆಪಿ ನಿಯೋಗವು ದೂರು ಸಲ್ಲಿಸಿದೆ. 
 

ಬೆಂಗಳೂರು (ಮಾ.25): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಶಾಸಕ ಸುರೇಶ್ ಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಸೇರಿದಂತೆ ಇತರೆ ನಾಯಕರ ಬಿಜೆಪಿ ನಿಯೋಗವು ದೂರು ಸಲ್ಲಿಸಿದೆ. ರಾಜ್ಯದಲ್ಲಿ ಆಪರೇಷನ್ ಕಮಲದ ಪ್ರಯತ್ನ ಬಿಜೆಪಿ ಮುಂದುವರೆಸಿದ್ದು, ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರು. ಬೇಡಿಕೆ ಇಟ್ಟು ಅಮಿಷವೊಡ್ಡಲಾಗಿದೆ ಎಂದು ಸುಳ್ಳು ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. 

ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಬೇಕು ಎಂದು ಆಗ್ರಹಿಸಲಾಗಿದೆ. ಮುಖ್ಯಮಂತ್ರಿಯೊಬ್ಬರು ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದ ತೇಜೋವಧೆ ಮಾಡುವ ದುರುದ್ದೇಶದಿಂದ ಯಾವುದೇ ಪುರಾವೆ ಒದಗಿಸದೆ ಮಾಡಿದ ಆರೋಪ ಖಂಡನೀಯ. ಸಿದ್ದರಾಮಯ್ಯ ಅವರ ಬೇಜವಾಬ್ದಾರಿ ಆರೋಪದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇದೆ. ಅವರು ಪಕ್ಷದ ಕ್ಷಮೆ ಯಾಚಿಸಿ ತಮ್ಮ ಆರೋಪವನ್ನು ಹಿಂದಕ್ಕೆ ಪಡೆಯಬೇಕು ಮತ್ತು ಮುಖ್ಯ ಚುನಾವಣಾಧಿಕಾರಿಗಳು ಹೇಳಿಕೆಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಪ್ರಧಾನಿ ಮೋದಿ ಹಿಟ್ಲರ್ ರೀತಿ ಸರ್ವಾಧಿಕಾರಿ: ಸಿಎಂ ಸಿದ್ದರಾಮಯ್ಯ

ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾವಹಿಸಿ: ನಗರಸಭೆ ವ್ಯಾಪ್ತಿ ವಾರ್ಡ್‌ಗಳಲ್ಲಿ ಕೆಟ್ಟು ನಿಂತಿರುವ ಕೊಳವೆಬಾವಿಗಳನ್ನು ದುರಸ್ತಿಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪೌರಾಯುಕ್ತರು ಐಗೂರು ಬಸವರಾಜ ಅವರು ಸೂಕ್ತ ನಿಗಾ ವಹಿಸಬೇಕು ಎಂದು ಶಾಸಕ ಬಿ.ಪಿ.ಹರೀಶ್ ತಾಕೀತು ಮಾಡಿದರು. ನೀರಿನ ಸಮಸ್ಯೆ ನಿವಾರಣೆಗಾಗಿ ನಗರಸಭೆ ಅಧಿಕಾರಿಗಳೊಂದಿಗೆ ನಗರದ ವಿವಿಧ ವಾರ್ಡುಗಳಿಗೆ ಶನಿವಾರ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆ ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ದಿನಗಳಿಂದ ನದಿಯಲ್ಲಿ ನೀರಿನ ಹರಿವು ಸ್ಥಗಿತವಾಗಿದೆ. ಇದರಿಂದಾಗಿ ನಗರದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರು.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಫರ್‌: ಸಿಎಂ ಸಿದ್ದರಾಮಯ್ಯ

ನಗರಸಭೆ ಅಧಿಕಾರಿಗಳು ಕೊಳವೆಬಾವಿ, ಕಿರುನೀರು ಸರಬರಾಜು ಕೇಂದ್ರಗಳ ರಿಪೇರಿ ಹಾಗೂ ಪೈಪ್ ಅಳವಡಿಕೆಯಂಥ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು. ಮೂರು ದಿನಗಳಲ್ಲಿ ಯಾವುದೇ ವಾರ್ಡಿನಲ್ಲೂ ನೀರಿನ ಸಮಸ್ಯೆ ಇರದಂತೆ ನೋಡಿಕೊಳ್ಳುವಂತೆ ಪೌರಾಯುಕ್ತರಿಗೆ ಸೂಚಿಸಿದರು. ಗುತ್ತೂರಿನಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲಿರುವ ಕೊಳವೆಬಾವಿ, ಕಿರುನೀರು ಸರಬರಾಜು ಕೇಂದ್ರಗಳನ್ನು ದುರಸ್ತಿ ಮಾಡಬೇಕಿದೆ. ನೀರಿನ ಸಮಸ್ಯೆ ಬಗೆಹರಿಸಲು ನಗರಸಭೆ ನಿಧಿಯ ಹಣವನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಂಡು ಕೊಳವೆಬಾವಿಗಳ ದುರಸ್ತಿ ಕೈಗೊಳ್ಳಬೇಕಾಗಿದೆ ಎಂದರು.

click me!