ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹ 50 ಸಾವಿರ!

Kannadaprabha News   | Kannada Prabha
Published : Dec 29, 2025, 07:01 AM IST
Greater bengaluru

ಸಾರಾಂಶ

ಜಿಬಿಎ ಚುನಾವಣೆ ಆಕಾಂಕ್ಷಿಗಳಿಗೆ ಭಾನುವಾರದಿಂದಲೇ ಅರ್ಜಿ ಬಿಡುಗಡೆ ಮಾಡಲಾಗುತ್ತಿದೆ. ತಡವಾದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ನಾನು ಗುರುತಿಸುವುದಿಲ್ಲ. ಬೂತ್‌ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಮಾತ್ರ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು : ಜಿಬಿಎ ಚುನಾವಣೆ ಆಕಾಂಕ್ಷಿಗಳಿಗೆ ಭಾನುವಾರದಿಂದಲೇ ಅರ್ಜಿ ಬಿಡುಗಡೆ ಮಾಡಲಾಗುತ್ತಿದೆ. ತಡವಾದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ನಾನು ಗುರುತಿಸುವುದಿಲ್ಲ. ಬೂತ್‌ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಮಾತ್ರ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವು ಗೆಲ್ಲಲು ಸಾಧ್ಯವಿಲ್ಲ. ‌ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ, ಮಹಿಳಾ ಅಭ್ಯರ್ಥಿಗಳಿಗೆ 25 ಸಾವಿರ ರು. ನಿಗದಿ ಮಾಡಲಾಗಿದ್ದು, ಅರ್ಜಿ ಬೇಕಿದ್ದವರು ಹಣ ನೀಡಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ನೀವು ಅರ್ಜಿಗೆ ನೀಡುವ ಹಣ ಕಟ್ಟಡ ನಿಧಿಗೆ ಹೋಗಲಿದೆ. ಏಕೆಂದರೆ ಜಿಲ್ಲಾ ಕಚೇರಿ ನಿರ್ಮಾಣಕ್ಕೆ 20 ಕೋಟಿ ರು., ರಾಜ್ಯ ಕಚೇರಿ ನಿರ್ಮಾಣಕ್ಕೆ 60 ಕೋಟಿ ರು. ಖರ್ಚಾಗಲಿದೆ. ತಾಲೂಕು ಕಚೇರಿಗಳ ನಿರ್ಮಾಣಕ್ಕೂ ಕೆಪಿಸಿಸಿಯಿಂದ ಹಣ ನೀಡಬೇಕಲ್ಲವೇ? ಎಂಎಲ್ಎ ಚುನಾವಣೆ ವೇಳೆ 2 ಲಕ್ಷ ಹಣ ನಿಗದಿ ಮಾಡಲಾಗಿತ್ತು. ಇದರಿಂದ 20 ಕೋಟಿ ಹಣ ಸಂಗ್ರಹವಾಯಿತು.‌ ಇದರಿಂದ ಪಕ್ಷದ ಪರವಾಗಿ ಜಾಹಿರಾತು ನೀಡಲು ಸಾಧ್ಯವಾಯಿತು ಎಂದು ಹೇಳಿದರು.

ಸಿಎಂ ಸೂಚನೆ ಮೇರೆಗೆ ಮಹಿಳೆಯರಿಗೆ ರಿಯಾಯ್ತಿ

ಈ ವೇಳೆ ಮಹಿಳೆಯರಿಗೆ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ರಿಯಾಯಿತಿ ನೀಡಿ ಎಂದು ಸಭಿಕರು ಕೂಗಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್‌, ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ, ಉಚಿತ ‌ಬಸ್ ನೀಡಲಾಗುತ್ತಿದೆ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಹ ಓಬಿಸಿ, ಒಕ್ಕಲಿಗರು ಓಬಿಸಿ ಎಂದು ತಿಳಿದಿದೆಯೇ? ಲಿಂಗಾಯತರು ಓಬಿಸಿ, ಆದಾಯ ಇಲ್ಲದ ಬ್ರಾಹ್ಮಣರು ಓಬಿಸಿ ಎಂದು ಹೇಳಿದರು.

ಈ ವೇಳೆ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು, ಮಹಿಳೆಯರಿಗೆ 25 ಸಾವಿರ ಇರಲಿ ಎಂದರು.

ಆಗ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ ನಿಗದಿ ಮಾಡಲಾಗುತ್ತಿದೆ. ನಿಮ್ಮ ದುಡ್ಡು ನನಗೆ ಬೇಡ ಮುಂದಿನ ಜನವರಿ 15 ನೇ ತಾರೀಕಿನ ಒಳಗೆ ಅರ್ಜಿ ಹಾಕಬೇಕು. 369 ವಾರ್ಡ್ ಗಳಿಂದ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದ 10 ಮಂದಿ‌‌ ಮಹಿಳೆಯರಾದರೂ ಅರ್ಜಿ ಸಲ್ಲಿಕೆ ಮಾಡಬೇಕು. ಯಾರೇ ಆದರೂ ಚೆನ್ನಾಗಿ ಕೆಲಸ ಮಾಡಿರಬೇಕು. ಅಂತಹವರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ಹೇಳಿದರು.

ಯಾರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೋ ಅವರಿಗೆ ಅವಕಾಶ. ಸಿದ್ದರಾಮಯ್ಯ ಹಿಂಗೆ, ನನ್ನ ಹಿಂದೆ ತಿರುಗಿದರೆ ಅವಕಾಶವಿಲ್ಲ‌. ಕೆಲಸ ಮಾಡಿದವರಿಗೆ ಹೆಚ್ಚು ಆದ್ಯತೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹ 50 ಸಾವಿರ!
ಕೈ - ಬಿಜೆಪಿ ಬುಲ್ಡೋಜರ್‌ ಜಟಾಪಟಿ