ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.62 ಮತದಾನ

Published : Apr 20, 2024, 07:28 AM IST
ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.62 ಮತದಾನ

ಸಾರಾಂಶ

ಅರುಣಾಚಲ ಪ್ರದೇಶ, ಅಸ್ಸಾಂ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಣಿಪುರ, ಬಿಹಾರ, ಛತ್ತೀಸ್‌ಗಢ, ಮೇಘಾಲಯ, ಮಹಾರಾಷ್ಟ್ರ, ಮಧ್ಯಪ್ರದೇಶ, ಮಣಿಪುರ, ಮಿಜೋರಂ, ನಾಗಾಲ್ಯಾಂಡ್, ರಾಜಸ್ಥಾನ , ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ , ತಮಿಳುನಾಡು, ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪುದುಚೇರಿ.

ನವದೆಹಲಿ(ಏ.20):  7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಕ್ಕಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು ಶೇ.60ರಷ್ಟು ಮತದಾನವಾಗಿದೆ. ಮಣಿಪುರ, ಪಶ್ಚಿಮ ಬಂಗಾಳದ ಕೆಲವು ಕಡೆ ವ್ಯಾಪಕ ಹಿಂಸಾಚಾರ ನಡೆದಿದ್ದು, ಛತ್ತೀಸ್‌ಗಢದಲ್ಲಿ ನಕ್ಸಲರ ದಾಳಿಗೆ ಒಬ್ಬ ಸಿಅರ್‌ಪಿಎಫ್‌ ಯೋಧ ಸಾವನ್ನಪ್ಪಿದ್ದಾನೆ. ಉಳಿದ ಕಡೆ ಬಹುತೇಕ ಶಾಂತಿಯುತ ಚುನಾವಣೆ ನಡೆದಿದೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ 91 ಲೋಕಸಭೆ ಕ್ಷೇತ್ರಗಳಿಗೆ ಶೇ.69.58ರಷ್ಟು ಮತದಾನ ನಡೆದಿತ್ತು. ಅದಕ್ಕಿಂತ ಈ ಸಲ ಕಡಿಮೆ ಮತದಾನ ನಡೆದಿದೆ ಎಂದು ವಿಶ್ಲೇಷಿಸಲಾಗಿದೆ. ಆದರೆ ಚುನಾವಣಾ ಆಯೋಗಕ್ಕೆ ನಿಖರ ಅಂಕಿ-ಅಂಶಗಳು ಇಂದು(ಶನಿವಾರ) ಬೆಳಗ್ಗೆ ಲಭ್ಯ ಆಗಲಿದ್ದು, ಆಗ ನೈಜ ಮತದಾನದ ಪ್ರಮಾಣ ಲಭ್ಯವಾಗಲಿದೆ.

ಕಾಂಗ್ರೆಸ್ ಗೆದ್ದರೆ ವಿದೇಶದಿಂದಲೇ ಮತದಾನ ವ್ಯವಸ್ಥೆ: ಡಾ. ಆರತಿ ಕೃಷ್ಣ

ಇದೇ ವೇಳೆ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಗಳೂ ಬಹುತೇಕ ಶಾಂತಿಯುತವಾಗಿ ಮುಗಿದಿವೆ. ಎಲ್ಲ ಕಡೆ ಜೂ.4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಇಂಡಿಯಾ ಕೂಟದ ಅಂಗಪಕ್ಷಗಳ ನಡುವೆ ನೇರಾನೇರ ಸ್ಪರ್ಧೆ ಬಹುತೇಕ ಕಡೆ ಏರ್ಪಟ್ಟಿದೆ. ನಿತಿನ್‌ ಗಡ್ಕರಿ ಸೇರಿ 9 ಕೇಂದ್ರ ಮಂತ್ರಿಗಳು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಓರ್ವ ಮಾಜಿ ರಾಜ್ಯಪಾಲೆ ಕಣದಲ್ಲಿದ್ದರು. ಡಿಎಂಕೆಯ ಕನಿಮೋಳಿ, ದಯಾನಿಧಿ ಮಾರನ್‌, ಬಿಜೆಪಿಯ ಕೆ. ಅಣ್ಣಾಮಲೈ ಸೇರಿ ಅನೇಕರ ಭವಿಷ್ಯವು ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಶುಕ್ರವಾರ ಮತದಾನ ನಡೆದ 102 ಕ್ಷೇತ್ರಗಳ ಪೈಕಿ 2019ರಲ್ಲಿ ಯುಪಿಎ 45, ಎನ್‌ಡಿಎ 41 ಸ್ಥಾನ ಗೆದ್ದಿದ್ದವು. ಎರಡನೇ ಹಂತದ ಚುನಾವಣೆ ಏ.26ರಂದು ನಡೆಯಲಿದೆ.

ಅತಿ ಹೆಚ್ಚು ಮತದಾನ
1 ತ್ರಿಪುರಾ 79.90 
2 ಪಶ್ಚಿಮ ಬಂಗಾಳ 77.57 
3 ಪುದುಚೆರಿ 73.25
ಅಡಿ ಕಡಿಮೆ ಮತದಾನ
1 ಬಿಹಾರ 47.49 
2 ರಾಜಸ್ಥಾನ 50.95 
3 ಉತ್ತರಾಖಂಡ 53.64

ಚುನಾವಣೆ ನಡೆದ ರಾಜ್ಯಗಳು:

ಅರುಣಾಚಲ ಪ್ರದೇಶ, ಅಸ್ಸಾಂ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಣಿಪುರ, ಬಿಹಾರ, ಛತ್ತೀಸ್‌ಗಢ, ಮೇಘಾಲಯ, ಮಹಾರಾಷ್ಟ್ರ, ಮಧ್ಯಪ್ರದೇಶ, ಮಣಿಪುರ, ಮಿಜೋರಂ, ನಾಗಾಲ್ಯಾಂಡ್, ರಾಜಸ್ಥಾನ , ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ , ತಮಿಳುನಾಡು, ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪುದುಚೇರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ