ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆ ಅಲಂಕರಿಸಿ ಒಂಬತ್ತು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಒಂದು ತಿಂಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಮುಂದಾಗಿದೆ.
ಬೆಂಗಳೂರು (ಮೇ.25): ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆ ಅಲಂಕರಿಸಿ ಒಂಬತ್ತು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಒಂದು ತಿಂಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಈ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ಚುನಾವಣೆಗೆ ಪರೋಕ್ಷವಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಭಿಯಾನದ ಅಂಗವಾಗಿ ಈ ಒಂದು ತಿಂಗಳಲ್ಲಿ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು. ಮೋದಿ ಸರ್ಕಾರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಗುವುದು. ಜತೆಗೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸುಮಾರು 200ರಿಂದ 250 ಮಂದಿ ಗಣ್ಯ ವ್ಯಕ್ತಿಗಳ ನಿವಾಸಕ್ಕೆ ಪಕ್ಷ ಮುಖಂಡರು ಭೇಟಿ ನೀಡಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೇಸರೀಕರಣಕ್ಕೆ ಬೊಮ್ಮಾಯಿ ಬೆಂಬಲ ನೀಡಿದ್ದರು: ಡಿ.ಕೆ.ಶಿವಕುಮಾರ್ ಆರೋಪ
ಮೋದಿ ಬೆಂಗಳೂರು ರೋಡ್ ಶೋ ವಿರುದ್ಧ ಎಫ್‌ಐಆರ್: ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಸಂಘಟಕರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೋದಿ ಅವರು ನಡೆಸಿದ್ದ ರೋಡ್ ಶೋ ಸಾಗಿದ ಹಾದಿಯಲ್ಲಿ ನಿಯಮ ಉಲ್ಲಂಘಿಸಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಹಾಕಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. ಮೇ 6ರಂದು ಪ್ರಧಾನ ಮಂತ್ರಿಗಳ ರೋಡ್ ಶೋ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಟ್ಟಕಲ್ಲಪ್ಪ ಸರ್ಕಲ್‌ನಿಂದ ಶೇಖರ್ ಆಸ್ಪತ್ರೆವರೆಗೆ ಸಾಗಿತ್ತು.
ಆಗ ಆಯೋಜಕರು ಬಿಜೆಪಿ ಪಕ್ಷದ ಚಿನ್ಹೆಯುಳ್ಳ ಸುಮಾರು 60 ಬಾವುಟಗಳು ಹಾಗೂ 20 ರಿಂದ 30 ಬಿಜೆಪಿ ಚಿನ್ಹೆ ಹಾಗೂ ಪ್ರಧಾನ ಮಂತ್ರಿಗಳ ಭಾವಚಿತ್ರವುಳ್ಳ ಸುಮಾರು 2*4 ಅಡಿ ಫ್ಲೆಕ್ಸ್‌ಗಳನ್ನು ಹಾಕಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಪೊಲೀಸ್ ಠಾಣೆಗೆ ಚುನಾವಣಾಧಿಕಾರಿ ಎಲ್.ಎ.ಉದಯಶಂಕರ್ ದೂರು ಸಲ್ಲಿಸಿದ್ದಾರೆ. ಈ ದೂರಿನ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರಲ್ಲಿ ಆಸ್ಪ್ರೇಲಿಯಾ ದೂತಾವಾಸ ಕಚೇರಿ: ಭಾರತದ ಐಟಿ ಸಿಟಿ ಬೆಂಗಳೂರಿನಲ್ಲಿ ನೂತನ ದೂತಾವಾಸ ಕಚೇರಿ ಆರಂಭಿಸಲಾಗುವುದು ಎಂದು ಆಸ್ಪ್ರೇಲಿಯಾದ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಸ್ಬೇನ್‌ನಲ್ಲಿ ಭಾರತೀಯ ದೂತಾವಾಸ ಆರಂಭಿಸುವ ಘೋಷಣೆ ಮಾಡಿದ ಬೆನ್ನಲ್ಲೇ, ಮಿತ್ರ ದೇಶದಿಂದಲೂ ಅದೇ ರೀತಿಯ ಘೋಷಣೆ ಮಾಡಲಾಗಿದೆ.
ರಾಜ್ಯದ ಕನಿಷ್ಠ 20 ಲೋಕಸಭೆ ಸೀಟು ಗೆಲ್ಲಲು ಕಾಂಗ್ರೆಸ್ ಗುರಿ: ಶಾಸಕಾಂಗ ಸಭೆಯಲ್ಲಿ ಸಿದ್ದು, ಡಿಕೆಶಿ ಸೂಚನೆ
ಈ ಕುರಿತು ಇಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅಲ್ಬನೀಸ್ ‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವಿಸ್ತರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇದೇ ತಿಂಗಳು ನೂತನ ದೂತಾವಾಸ ಕಚೇರಿ ಆರಂಭಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ದೆಹಲಿ, ಕೋಲ್ಕತಾ, ಮುಂಬೈ, ಚೆನ್ನೈ ಬಳಿಕ 5ನೇ ಕಚೇರಿ ಆರಂಭಗೊಂಡಂತೆ ಆಗಲಿದೆ. ಈ ಕಚೇರಿಯು ದೇಶದ ಉದ್ಯಮಗಳನ್ನು ಭಾರತದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವ ಡಿಜಿಟಲ್ ಮತ್ತು ನಾವೀನ್ಯತಾ ವಲಯದೊಂದಿಗೆ ಜೋಡಿಸಲು ನೆರವು ನೀಡಲಿದೆ’ ಎಂದು ಹೇಳಿದ್ದಾರೆ. ಭಾರತವು ಇದುವರೆಗೂ ಆಸ್ಪ್ರೇಲಿಯಾದಲ್ಲಿ ಸಿಡ್ನಿ, ಮೆಲ್ಬರ್ನ್ ಮತ್ತು ಪಥ್‌ರ್‍ನಲ್ಲಿ ದೂತಾವಾಸ ಕಚೇರಿ ಹೊಂದಿತ್ತು. ಇದೀಗ ಬ್ರಿಸ್ಬೇನ್‌ನಲ್ಲೂ ಹೊಸ ಕಚೇರಿ ಆರಂಭಕ್ಕೆ ನಿರ್ಧರಿಸಿದೆ.