ಜನರ ಜೇಬಿಗೆ ದುಡ್ಡು ಹಾಕುವ ಸರ್ಕಾರ ದಿವಾಳಿಯಾಗಲ್ಲ: ಸಚಿವ ಮಧು ಬಂಗಾರಪ್ಪ

By Kannadaprabha News  |  First Published Jun 20, 2023, 3:40 AM IST

ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನು ಬಡವರಿಗೆ ತಲುಪಿಸಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ತಾಪಂ, ಜಿಪಂ, ಲೋಕಸಭೆ ಎಲ್ಲವನ್ನು ಗೆಲ್ಲಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.


ಶಿವಮೊಗ್ಗ (ಜೂ.20): ಜನರ ಜೇಬಿಗೆ ದುಡ್ಡು ಹಾಕಿದರೆ ಆ ಸರ್ಕಾರ ದಿವಾಳಿ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿ, 2024ರ ಸಂಸತ್‌ ಚುನಾ​ವ​ಣೆ​ಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಕಾಂಗ್ರೆಸ್‌ ಅಭ್ಯ​ರ್ಥಿ​ಗಳನ್ನು ಸಂಸದರಾಗಿಸ​ಬೇ​ಕಿ​ದೆ. ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನು ಬಡವರಿಗೆ ತಲುಪಿಸಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ತಾಪಂ, ಜಿಪಂ, ಲೋಕಸಭೆ ಎಲ್ಲವನ್ನು ಗೆಲ್ಲಬಹುದು ಎಂದರು.

ಸಮ​ಸ್ಯೆ​ಗ​ಳಿಗೆ ಪರಿ​ಹಾರ ಅಗ​ತ್ಯ: ಕಾಂಗ್ರೆಸ್‌ ಪಕ್ಷದ ‘ಭಾರತ್‌ ಜೋಡೋ’ ಕಾರ್ಯಕ್ರಮ ಮತದಾರರು ಮತ್ತು ನಮ್ಮ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿತ್ತು. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿ ಸೋಲನ್ನು ಕಂಡಿದ್ದಾರೆ. ಆದರೆ, ನಮಗೆ ಸಿಕ್ಕ ಅಧಿಕಾರವನ್ನು ಜನರ ಸೇವೆಗೆ ಮೀಸಲಿಟ್ಟು ಮುಂದಿನ ಚುನಾವಣೆಗಳಲ್ಲಿ ಗೆಲ್ಲಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಆರಂಭ ಮಾಡಲಾಗಿದೆ. ಈ ಕಾರ್ಯಾಲಯದಲ್ಲಿ ಜನಪ್ರತಿನಿಧಿಗಳಾದವರೂ ಕುಳಿತು, ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ವಾರ್ಡ್‌ ಮಟ್ಟದಲ್ಲಿ ಕೆಲಸ ಮಾಡಿ ಚುನಾವಣೆಗೆ ಸಿದ್ಧರಾಗಬೇಕಿದೆ ಎಂದು ಕರೆ ನೀಡಿದರು.

Tap to resize

Latest Videos

ಕೇಂದ್ರಕ್ಕೆ ಬಿಜೆಪಿ ನಾಯಕರು ರಾಜ್ಯದ ಪಾಲು ಕೇಳಲಿ: ಸಚಿವ ಮಧು ಬಂಗಾರಪ್ಪ

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಒಂದು ವರ್ಷದ ಅವಧಿ ಇದೆ. ಸರ್ಕಾರಿ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಣೆ ಮಾಡಬೇಕಿದೆ. 1.20 ಕೋಟಿ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ನನ್ನ ಮೇಲಿದೆ. ತಾವೆಲ್ಲ ತಂದೆ ಬಂಗಾರಪ್ಪ ಅವರ ಮೇಲೆ ಇಟ್ಟಿರುವ ಗೌರವ ಗೊತ್ತಿದೆ. ಇದನ್ನು ನಾನು ಉಳಿಸಿಕೊಳ್ಳುತ್ತೇನೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ತಜ್ಞರ ಜೊತೆ ಮಾತನಾಡಲು ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ವಿಧಾನ ಪರಿಷತ್‌ ಮಾಜಿ ಸದಸ ಆರ್‌.ಪ್ರಸನ್ನಕುಮಾರ್‌, ಮಹಾನಗರ ಪಾಲಿಕೆ ಸದಸ್ಯ ಎಚ್‌.ಸಿ. ಯೋಗೇಶ್‌, ಜೆ.ಡಿ.ಮಂಜುನಾಥ್‌ ಸೇರಿದಂತೆ ಹಲವರು ಇದ್ದರು.

ಕುಡಿವ ನೀರು ಪೂರೈಸಲು ತುರ್ತು ಕ್ರಮ​ಗಳ ಕೈಗೊ​ಳ್ಳಿ: ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಇಂದಿನವರೆಗೆ ವಾಡಿಕೆ ಪ್ರಮಾಣದ ಮಳೆ ಬಾರದ ಹಿನ್ನೆಲೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಭಾಗಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯವಿರುವ ಎಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿ​ಸಿದ ಅಧಿ​ಕಾ​ರಿ​ಗ​ಳಿ​ಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿ​ಸಿ​ದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಬರ, ಪ್ರಕೃತಿ ವಿಕೋಪ, ಕೃಷಿ ಚಟುವಟಿಕೆ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವ​ರು, ವಿವಿಧ ಕ್ಷೇತ್ರಗಳ ಸ್ಥಿತಿಗಳ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇನ್ನೂ 20 ದಿನಗಳಿಂದ 1 ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಈ ಅವಧಿಯಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಈಗಾಗಲೇ ಜಿಲ್ಲೆಯ 80-90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವುದನ್ನು ಗುರುತಿಸಲಾಗಿದೆ. ಪ್ರಸ್ತುತ 25 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ ಎಂದರು.

ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದೇ ಬಿಜೆಪಿ ಜಾಯಮಾನ: ಸಚಿವ ಜಾರ್ಜ್‌

ಪ್ರತಿ ಬಾರಿಯೂ ಮಳೆ ಬಾರದಿದ್ದರೆ ಉಂಟಾಗುವ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವ ತುರ್ತು ಅನಿವಾರ್ಯತೆ ಇದೆ. ಜಿಲ್ಲೆಯ ಸೊರಬ ಹೊರತುಪಡಿಸಿ, ಬಹುತೇಕ ಎಲ್ಲ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಅನುಷ್ಠಾನಗೊಂಡಿವೆ. ಈವರೆಗೆ ಈ ಯೋಜನೆಯ ಮಂಜೂರಾತಿಗೊಂಡು ಅಪೂರ್ಣಗೊಂಡಿದ್ದಲ್ಲಿ ಅವುಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಈ ಯೋಜನೆಯ ವ್ಯವಸ್ಥಿತ ಅನುಷ್ಠಾನದಿಂದಾಗಿ ಹಣಕಾಸಿನ ಅಪವ್ಯಯ ಹಾಗೂ ಸಮಸ್ಯೆಯಿಂದ ಮುಕ್ತಿ ಕಂಡುಕೊಳ್ಳಬಹುದು. ಈ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿ ಅವ​ರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

click me!