ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಾಗಿರುವ ಸಮಾವೇಶವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದು, ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಮಾಚ್‌ರ್ 4 ರ ಶನಿವಾರ ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಚಿತ್ರದುರ್ಗ (ಮಾ.4) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಾಗಿರುವ ಸಮಾವೇಶವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದು, ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಮಾಚ್‌ರ್ 4 ರ ಶನಿವಾರ ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ(Central Department of Social Justice and Empowerment) ರಾಜ್ಯ ಸಚಿವ ಎ. ನಾರಾಯಣಸ್ವಾಮಿ(A Narayanaswamy), ಕೃಷಿ ಸಚಿವ ಬಿ.ಸಿ. ಪಾಟೀಲ್(BC Patil), ಸಾರಿಗೆ ಸಚಿವ ಬಿ.ಶ್ರೀರಾಮುಲು(B Sriramulu), ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಹಲವು ಸಚಿವರುಗಳು, ಶಾಸಕರುಗಳು, ನಿಗಮ, ಮಂಡಳಿಗಳ ಅಧ್ಯಕ್ಷರು, ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
undefined
ಕಾಡು ಜನರಿಗೆ ಜಮೀನು ನೀಡಲು ಕಾನೂನು ತಿದ್ದುಪಡಿ: ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 75 ಲಕ್ಷ ಜನರು ಸರ್ಕಾರದ ಒಂದಿಲ್ಲೊಂದು ಯೋಜನೆಗಳಡಿ ಸೌಲಭ್ಯ ಪಡೆದು ಫಲಾನುಭವಿಗಳಾಗಿದ್ದಾರೆ. ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ 12 ಲಕ್ಷ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರಲು ಅಧಿಕಾರಿಗಳು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.
ನಗರಾಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕೊಳಚೆ ನಿರ್ಮೂಲನಾ ಮಂಡಳಿ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳು ಸೇರಿದಂತೆ ಹಲವಾರು ಇಲಾಖೆಗಳ ಮೂಲಕ ನಾನಾ ಸೌಲಭ್ಯಗಳನ್ನು ಪಡೆದಿದ್ದಾರೆ.
ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಮುಖ್ಯಮಂತ್ರಿ ರೈತ ವಿದ್ಯಾನಿಧಿ(Chief minister is farmer Vidyanidhi), ರೈತ ಶಕ್ತಿ(Raita shakti), ಯಶಸ್ವಿನಿ, ಗಂಗಾಕಲ್ಯಾಣ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಕಿಸಾನ್ ಸಮ್ಮಾನ್, ಜಲಜೀವನ್ ಮಿಷನ್, ಮನೆ ಮನೆಗೆ ಗಂಗೆ, ನಮ್ಮ ಕ್ಲಿನಿಕ್, ಗ್ರಾಮ ಒನ್, ಬಡವರಿಗೆ ಹಲವು ವಸತಿ ಯೋಜನೆಗಳಡಿ ಮನೆಗಳು, ಕೊಳಚೆ ನಿರ್ಮೂಲನೆಯಡಿ ಬಡವರಿಗೆ ಮನೆಗಳು, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆ, ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳ ವಿತರಣೆ, ವಿಕಲಚೇತನರಿಗೆ ಸಾಧನ ಸಲಕರಣೆ , ಸೂರಿಲ್ಲದವರಿಗೆ ಹಕ್ಕುಪತ್ರಗಳ ವಿತರಣೆಯ ಫಲಾನುಭವಿಗಳು ಸೇರಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ, ಸಮಾವೇಶದಲ್ಲಿ ಒಗ್ಗೂಡಿಸುವುದು, ಇದರ ಜೊತೆಗೆ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಹಾಗೂ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳನ್ನು ಇನ್ನಷ್ಟು, ಮತ್ತಷ್ಟುಜನರಿಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕವಾಗಿ ತಲುಪಿಸುವ ಕಾರ್ಯಕ್ಕೆ ಮುನ್ನುಡಿ ಬರೆಯುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಿಲ್ಲಾಧಿಕಾರಿ ಪರಿಶೀಲನೆ:
ಫಲಾನುಭವಿಗಳ ಸಮ್ಮೇಳನಕ್ಕಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ತಯಾರಾಗುತ್ತಿದ್ದು, ಸಿದ್ಧತೆಗಳು ಬಹುತೇಕ ಅಂತಿಮ ಹಂತದಲ್ಲಿದೆ. ವೇದಿಕೆ ನಿರ್ಮಾಣಗೊಳ್ಳುವ ಇದೇ ಮೈದಾನದ ಆವರಣದಲ್ಲಿಯೇ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆಗಾಗಿ ಪೆಂಡಾಲ್ ಸಿದ್ಧಗೊಂಡಿದ್ದು, ಸುಮಾರು 40 ಕ್ಕೂ ಹೆಚ್ಚು ಊಟದ ವಿತರಣೆ ಕೌಂಟರ್‌ಗಳು ಸಿದ್ಧಗೊಳ್ಳುತ್ತಿದೆ. ಜಿಲ್ಲಾಧಿಕಾರಿ ದಿವ್ಯಾಪ್ರಭು ಶುಕ್ರವಾರ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ವೇದಿಕೆ ನಿರ್ಮಾಣ, ಊಟದ ಕೌಂಟರ್‌ಗಳ ನಿರ್ಮಾಣ, ಆಸನಗಳ ವ್ಯವಸ್ಥೆ ಕುರಿತಂತೆ ನಡೆಸಲಾಗುತ್ತಿದ್ದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ವ್ಯವಸ್ಥಿತವಾಗಿ ವೇದಿಕೆ, ವಿಐಪಿ, ಮಾಧ್ಯಮ ಗ್ಯಾಲರಿಗಳನ್ನು ಸಿದ್ಧಪಡಿಸಬೇಕು, ಸಾಕಷ್ಟುಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸಿ.ಎಸ್, ನಗರಸಭೆ ಪೌರಾಯುಕ್ತ ಕಾಂತರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.