
ಹಾವೇರಿ : ‘ವರ್ಡ್ ಪವರ್ ಈಸ್ ಅ ವರ್ಲ್ಡ್ ಪವರ್. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ನುಡಿದಂತೆ ನಡೆದರೆ ಮಾತ್ರ ನಾಯಕ. ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅದೇ ಜಗತ್ತಿನ ದೊಡ್ಡ ಶಕ್ತಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹಾವೇರಿಯಲ್ಲಿ ಬುಧವಾರ ನಡೆದ ನೂತನ ವೈದ್ಯಕೀಯ ಕಾಲೇಜು ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ, ಅಧಿಕಾರ ಹಸ್ತಾಂತರ ಚರ್ಚೆ ನಡುವೆ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಈ ರೀತಿ ಹೇಳಿದ್ದು ಸಾಕಷ್ಟು ಗಮನ ಸೆಳೆಯಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಸ್ತಾಪಿಸಿದರು. ‘ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ₹5,300 ಕೋಟಿ ಘೋಷಣೆ ಮಾಡಿದ್ದರು. ಆದರೆ, ಇದುವರೆಗೂ ಕೊಟ್ಟಿಲ್ಲ, ನಾಯಕರಾದವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು’ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯದಲ್ಲಿ ಸಿಎಂ ಹುದ್ದೆ ಕುರಿತಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಒಪ್ಪಂದವಾಗಿದೆ, ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆಂಬ ವಿಚಾರ ಬಹು ಚರ್ಚೆಯಲ್ಲಿರುವ ಸಂದರ್ಭದಲ್ಲೇ ಡಿಕೆಶಿ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.