ಮಡಿಕೇರಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿ: ಕಾಂಗ್ರೆಸ್-ಬಿಜೆಪಿ ಪಕ್ಷಗಳಿಂದ ಸಾವಿರಾರು ಬೆಂಬಲಿಗರಿಂದ ಶಕ್ತಿ ಪ್ರದರ್ಶನ

By Govindaraj S  |  First Published Apr 17, 2023, 9:42 PM IST

ವಿಧಾನಸಭಾ ಚುನಾವಣೆಗೆ ಮಡಿಕೇರಿ ಕ್ಷೇತ್ರದಲ್ಲಿ ಸೋಮವಾರ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸುವ ಮೂಲಕ ಜಿದ್ದಾಜಿದ್ದಿನ ಹೋರಾಟಕ್ಕೆ ಕಣಕ್ಕೆ ಧುಮುಕಿದ್ದಾರೆ.


ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಏ.17): ವಿಧಾನಸಭಾ ಚುನಾವಣೆಗೆ ಮಡಿಕೇರಿ ಕ್ಷೇತ್ರದಲ್ಲಿ ಸೋಮವಾರ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸುವ ಮೂಲಕ ಜಿದ್ದಾಜಿದ್ದಿನ ಹೋರಾಟಕ್ಕೆ ಕಣಕ್ಕೆ ಧುಮುಕಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಂ.ಪಿ. ಅಪ್ಪಚ್ಚು ರಂಜನ್ ಅವರು ಉಮೇದುವಾರಿಕೆ ಸಲ್ಲಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಡಾ. ಮಂತರ್ ಗೌಡ ಅವರು ನಾಮಪತ್ರ ಸಲ್ಲಿಸಿ ಚುನಾವಣಾ ರಣಾಂಗಣಕ್ಕೆ ಇಳಿದಿದ್ದಾರೆ. ಒಬ್ಬರಿಗಿಂತ ಒಬ್ಬರು ತಾವೇನೂ ಕಡಿಮೆ ಎಂದು ಸಾವಿರ, ಸಾವಿರ ಸಂಖ್ಯೆಯಲ್ಲಿ ಬೆಂಬಲಿಗರನ್ನು ಕರೆತರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಮಡಿಕೇರಿ ಶಾಸಕ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರು ನಾಲ್ಕು ಸಾವಿರಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿದರು. 

Latest Videos

undefined

ಇದಕ್ಕೂ ಮೊದಲು ನಗರದ ಚಾಮುಂಡೇಶ್ವರಿ ದೇವಾಲಯದ ಬಳಿಯಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಇಂದಿರಾಗಾಂಧಿ ವೃತ್ತದಲ್ಲಿ ಕೆಲಸ ಕಾಲ ಸಮಾವೇಶಗೊಂಡರು. ಬಳಿಕ ಮತ್ತೆ ಮೆರವಣಿಗೆ ಮುಂದುವರೆಸಿ ಖಾಸಗಿ ಹಳೇ ಬಸ್ಸು ನಿಲ್ದಾಣ, ಅಂಚೆಕಚೇರಿ, ನಗರಸಭೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಸಾಗಿದರು. ಮೆರವಣಿಗೆ ಉದ್ದಕ್ಕೂ ಬಿಜೆಪಿ ಮತ್ತು ಅಪ್ಪಚ್ಚು ರಂಜನ್ ಪರವಾಗಿ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ಕೂಡ ತಾನೇನು ಕಡಿಮೆ ಎನ್ನುವಂತೆ ಮೂರುವರೆಯಿಂದ ನಾಲ್ಕು ಸಾವಿರ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಮಡಿಕೇರಿ ನಗರದಲ್ಲಿ ಮೆರವಣಿಗೆ ನಡೆಸಿದರು. 

ಕನ​ಕ​ಪುರ ಕ್ಷೇತ್ರದವರ ಬದ​ಲಾ​ವ​ಣೆ ಆಸೆ ನನ​ಸಾ​ಗ​ಲಿದೆ: ಸಚಿ​ವ ಆರ್‌.ಅಶೋಕ್‌

ಕಾಂಗ್ರೆಸ್ ಕಾರ್ಯಕರ್ತರು ಕೂಡ ಚೌಡೇಶ್ವರಿ ದೇವಾಲಯದ ಬಳಿಯಿಂದಲೇ ಮೆರವಣಿಗೆ ಆರಂಭಿಸಿ ಗಾಂಧಿ ಮೈದಾನವದವರೆಗೆ ಸಾಗಿದರು. ಬಳಿಕ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಿತು. ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಕಳೆದ ಆರು ಚುನಾವಣೆಗಳಲ್ಲಿ ಸ್ಪರ್ಧಿಸಿ ಐದು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಇದು ಏಳನೇ ಚುನಾಣವಣೆಯಾಗಿದ್ದು ಕಳೆದ ಚುನಾವಣೆಯಲ್ಲಿ 16 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೆ. ಈ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ನಮಗೆ ಸಮರ್ಥವಾದ ಅಭ್ಯರ್ಥಿ ಅಲ್ಲ, ಜೊತೆಗೆ ಅವರು ಹೊರಗಿನ ಜಿಲ್ಲೆಯವರಾಗಿದ್ದಾರೆ. 

ಹೀಗಾಗಿ ಜಿಲ್ಲೆಯ ಜನರು ಅವರಿಗೆ ಮಣೆ ಹಾಕುವುದಿಲ್ಲ. ಕೊಡಗಿನಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಜೊತೆಗೆ ರಾಜ್ಯದಲ್ಲಿ 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಆ ಮೂಲಕ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಮಂತರ್ ಗೌಡ ಮಾತನಾಡಿ ಶಾಸಕ ಅಪ್ಪಚ್ಚು ರಂಜನ್ ಅವರು ವೈಯಕ್ತಿಕವಾಗಿ ದಾಳಿ ಮಾಡುವುದನ್ನು ನಿಲ್ಲಿಸಿ ತಾವೇನು ವೈಯಕ್ತಿಕವಾಗಿ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎನ್ನುವುದನ್ನು ಹೇಳಿ ಚುನಾವಣೆ ಮಾಡಲಿ ಎಂದು ತಿರುಗೇಟು ನೀಡಿದರು. ನನ್ನನ್ನು ಹೊರಗಿನ ಜಿಲ್ಲೆಯವನು ಎಂದು ಟೀಕಿಸುವುದನ್ನು ನಿಲ್ಲಿಸಲಿ. ನಾನು ಹೊರಗಿನವನಲ್ಲ ಬದಲಾಗಿ ಹಲವು ಶತಮಾನಗಳಿಂದಲೂ ನಮ್ಮ ಪೂರ್ವಜರು ಇದೇ ಜಿಲ್ಲೆಯ, ಇದೇ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವರು. 

ಅ​ಧಿಕಾರಕ್ಕೆ ಅಂಟಿಕೊಂಡು ಕೂರುವವ ನಾನಲ್ಲ: ಸಚಿವ ಎಂಟಿಬಿ ನಾಗರಾಜ್‌

ನನ್ನ ಮಡದಿ ಕೂಡ ಇದೇ ಜಿಲ್ಲೆಯವರಾಗಿದ್ದು, ನಾನು ಇಲ್ಲಿಯ ಅಳಿಯ. ಹೀಗಾಗಿ ಅಪ್ಪಚ್ಚು ರಂಜನ್ ಅವರಿಗೆ ಭಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಹೊರಗಿನವರು ಎಂಬ ವೈಯಕ್ತಿಕ ವಿಷಯಗಳನ್ನು ಹೇಳಿ ಜನರನ್ನು ಮತ್ತೆ ಮೋಸ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಒಟ್ಟಿನಲ್ಲಿ ಎರಡು ಪಕ್ಷಗಳು ಅಭ್ಯರ್ಥಿಗಳು ತಮ್ಮ ಬಲಾಬಲವನ್ನು ಪ್ರದರ್ಶಿಸುವ ಮೂಲಕ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!