ಕರ್ನಾಟಕದಲ್ಲಿ ಭ್ರಷ್ಟಾಚಾರ ಗರಿಷ್ಠ ಮಟ್ಟ ತಲುಪಿದೆ: ಮುಖ್ಯಮಂತ್ರಿ ಚಂದ್ರು

By Kannadaprabha NewsFirst Published Nov 19, 2023, 10:00 PM IST
Highlights

ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು ಇದಕ್ಕೆ ಸರ್ಕಾರವು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿದೆ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲತ್ತುಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು 

ಮಾಲೂರು(ನ.19):  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೬ ತಿಂಗಳಾಗಿದ್ದು ಈ ಅವಧಿಯಲ್ಲಿ ಆಡಳಿತದಲ್ಲಿ ಬಿಗಿ ತಪ್ಪಿ ಭ್ರಷ್ಟಾಚಾರ ಹಿಂದೆಂದೂ ಕಂಡರಿಯದಂತಹ ಗರಿಷ್ಠ ಮಟ್ಟದಲ್ಲಿದೆ. ಎಲ್ಲ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಜಗಳಗಳು ಮುಕ್ತವಾಗಿಯೇ ನಡೆಯುತ್ತಿವೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಆಗುತ್ತಿಲ್ಲ ಎಂದರು.

ವಿಜಯೇಂದ್ರರಿಗೆ ರಾಜ್ಯಾಧ್ಯಕ್ಷ ಪಟ್ಟ ಹಾಸ್ಯಾಸ್ಪದ: ಶಾಸಕ ನಾರಾಯಣಸ್ವಾಮಿ

ಬರ ನಿರ್ವಹಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ

ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು ಇದಕ್ಕೆ ಸರ್ಕಾರವು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿದೆ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲತ್ತುಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಜನರನ್ನು ನೇರವಾಗಿ ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಚರ್ಚಿಸಲು ಅರಳಿಕಟ್ಟೆ ಸಂವಾದ ಎಂಬ ಅಭಿಯಾನ ಹಮ್ಮಿಕೊಂಡಿದೆ.

ಎಎಪಿ ಸರ್ಕಾರಕ್ಕೆ ಕೇಂದ್ರದ ಕಿರಿಕಿರಿ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಗ್ಯ ಶಿಕ್ಷಣ ಹಾಗೂ ಮೂಲಭೂತ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಸಹ ಕೇಂದ್ರ ಸರ್ಕಾರವು ರಾಜ್ಯಪಾಲರಿಗೆ ಸುಗ್ರೀವಾಜ್ಞೆಯ ಮೂಲಕ ಹೆಚ್ಚಿನ ಅಧಿಕಾರ ನೀಡುವ ಮೂಲಕ ಅಮ್ಮ ಆದ್ಮಿ ಪಕ್ಷದ ಸರ್ಕಾರಕ್ಕೆ ವಿನಾಕಾರಣ ತೊಂದರೆ ನೀಡುತ್ತಿದೆ, ಆದರೂ ಸಹ ದೆಹಲಿಯ ಜನರು ಅಮ್ ಆದ್ಮಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಕೇಜ್ರಿವಾಲ್ ಅವರ ಸರ್ಕಾರದ ಅಭಿವೃದ್ಧಿಯನ್ನೂ ಸ್ಪೂರ್ತಿಯಾಗಿ ತೆಗೆದುಕೊಂಡು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಪಕ್ಷಗಳು ಜನಸಾಮಾನ್ಯರಿಗೆ ಉತ್ತಮ ಆಡಳಿತವನ್ನು ನೀಡುವಲ್ಲಿ ವಿಫಲವಾಗಿದೆ, ರಾಜ್ಯವು ಅಭಿವೃದ್ಧಿಯಲ್ಲಿ ೨೦ ವರ್ಷಗಳ ಹಿಂದೆ ಹೋಗಿದೆ ಎಂದ ಅವರು ಮುಂಬರುವ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಸೇರಿದಂತೆ ಉತ್ತಮ ಆಡಳಿತಕ್ಕಾಗಿ ಅಮ್ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ.

ಸಚಿವ ರಾಜಣ್ಣ ಒಬ್ಬ ಬಫೂನ್: ಸಂಸದ ಮುನಿಸ್ವಾಮಿ

ಪ್ರಧಾನಿ ಸರ್ವಾಧಿಕಾರಿ ಧೋರಣೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆ ತೋರುವ ಮೂಲಕ ದೇಶದ ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಟರಮಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಚಿಕ್ಕತಿರುಪತಿ-ಲಕ್ಕೂರು ರಸ್ತೆಯ ಪರಿಶೀಲಿಸಿ ಸರ್ಕಾರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸಂಜೆ ಸಂತೆಹಳ್ಳಿ ಗ್ರಾಮದಲ್ಲಿ ಅರಳಿಕಟ್ಟೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಅರಳಿಕಟ್ಟೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಜನರಿಂದ ಸಮಸ್ಯೆಗಳನ್ನು ಆಲಿಸಿ ಚರ್ಚಿಸಿದರು.
ಎಎಪಿ ಪಕ್ಷದ ಪೃಥ್ವಿ ರೆಡ್ಡಿ ವೆಂಕಟೇಶ್, ನಾಗಣ್ಣ, ಜಿಲ್ಲಾಧ್ಯಕ್ಷ ರವಿಶಂಕರ್, ತಾಲೂಕು ಅಧ್ಯಕ್ಷ ರೇವಣ್ಣ ಇದ್ದರು.

click me!