'ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರು (ಮಾ.27): 'ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರವನ್ನು ಗೌರವಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈಗೊಳ್ಳಬೇಕಿರುವ ಹೋರಾಟಗಳತ್ತ ಒಗ್ಗಟ್ಟಿನ ಸಂಕಲ್ಪ ತೊಟ್ಟು ಮುನ್ನಡೆಯೋಣ ಎಂದೂ ಅವರು ಹೇಳಿದ್ದಾರೆ.
ಯತ್ನಾಳ್ ಅವರ ಉಚ್ಚಾಟನೆ ಆದೇಶ ಹೊರಬಿದ್ದ ಬಳಿಕ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದ ಮೂಲಕ ವಿವರವಾದ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯು ಕಾರ್ಯಕರ್ತರನ್ನು ಲಕ್ಷಾಂತರ ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ದ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಸರ್ಕಾರವಿದ್ದಾಗ 17 ಮಂದಿ ಹನಿಟ್ರ್ಯಾಪ್: ಯತೀಂದ್ರ ಸಿದ್ದರಾಮಯ್ಯ
ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ, ಪೂಜ್ಯ ತಂದೆಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
ನಾನು ವರಿಷ್ಠರಿಗೆ ದೂರಿಲ್ಲ ಸತ್ಯವಂತರಿಗೆ ಕಾಲವಲ್ಲ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸತ್ಯವಂತರಿಗೆ ಕಾಲವಲ್ಲ ಪುರಂದರದಾಸರ ಕೀರ್ತನೆ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.
ಶಾಸಕರ ಅಮಾನತು ನನ್ನೊಬ್ಬನ ನಿರ್ಧಾರವಲ್ಲ: ಸ್ಪೀಕರ್ ಯು.ಟಿ.ಖಾದರ್ ಸಂದರ್ಶನ
ಇದ್ದಿದ್ದು ಇದ್ದ ಹಾಗೆ ನಾನು ಹೇಳಿರುವ ವಿಚಾರಕ್ಕೆ ಪಕ್ಷ ಈ ಪ್ರತಿಫಲ ನೀಡಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರ ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರ ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ. ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಯತ್ನಾಳ ತಿಳಿಸಿದ್ದಾರೆ.