
ಚಿತ್ರದುರ್ಗ(ಏ.25): ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭೆ ಕ್ಷೇತ್ರದ ಶಾಸಕಿ, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಅವರಿಗೆ ಕಾರ್ಯಕರ್ತನೊಬ್ಬ ಮೇಕೆ ಮರಿ ನೀಡಿದ್ದಾರೆ. ಹೌದು, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆಂದು ತೆರಳಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ರಾಮಚಂದ್ರ ಎಂಬುವರು ಮೇಕೆ ಮರಿಯನ್ನ ಗಿಫ್ಟ್ ಆಗಿ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭೆ ಕ್ಷೇತ್ರದ ಶಾಸಕಿ, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಅವರಿಗೆ ಹಾಗೂ ಮೇಕೆ ಮರಿಗೂ ಬಿಜೆಪಿ ಶಾಲು ಹಾಕಿ ಸನ್ಮಾಸಿದ್ದಾರೆ ಬಿಜೆಪಿ ಕಾರ್ಯಕರ್ತರು.
KARNATAKA ELECTION 2023: ರಘುಮೂರ್ತಿ ಆಯ್ಕೆ ಮಾಡಿ ಅಭಿವೃದ್ಧಿಗೆ ಕೈಜೋಡಿಸಿ: ಕೆ ವೀರಭದ್ರಪ್ಪ
ಈ ವೇಳೆ ಮಾತನಾಡಿದ ಪೂರ್ಣಿಮಾ ಅವರು, ಪ್ರೀತಿಯಿಂದ ಕಾರ್ಯಕರ್ತರು ಅನೇಕ ಕಡೆ ಕುರಿ-ಮೇಕೆಗಳನ್ನ ನೀಡಿದ್ದಾರೆ. ಉಡುಗೊರೆ ಬಂದ ಮೇಕೆ ಮರಿಯನ್ನ ನಮ್ಮ ಫಾರಂನಲ್ಲಿ ಸಾಕುತ್ತೇನೆ ಅಂತ ತಿಳಿಸಿದ್ದಾರೆ. ಮೇಕೆ ಗಿಫ್ಟ್ ಪಡೆದ ವಿಚಾರವನ್ನ ಸಾಮಾಜಿಕ ಜಾಲತಾಣದಲ್ಲಿ ಪೂರ್ಣಿಮಾ ಅವರು ಶೇರ್ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.