ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸಿ.ಟಿ.ರವಿಗೆ ಕಾರ್ಯಕರ್ತರ ಆಗ್ರಹ!

By Kannadaprabha News  |  First Published Dec 12, 2023, 6:19 AM IST

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಬಿಜೆಪಿ ಪಕ್ಷದ ಮುಖಂಡರು ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಆಗ್ರಹಿಸಿದ್ದಾರೆ. ಆದರೆ ಸಿ.ಟಿ.ರವಿ ಮಾತ್ರ ಯಾರಿಗೇ ಟಿಕೆಟ್‌ ಕೊಟ್ಟರೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸೋಮವಾರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು


ಚಿಕ್ಕಮಗಳೂರು (ಡಿ.12): ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಬಿಜೆಪಿ ಪಕ್ಷದ ಮುಖಂಡರು ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಆಗ್ರಹಿಸಿದ್ದಾರೆ. ಆದರೆ ಸಿ.ಟಿ.ರವಿ ಮಾತ್ರ ಯಾರಿಗೇ ಟಿಕೆಟ್‌ ಕೊಟ್ಟರೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸೋಮವಾರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು.

ಮುಖಂಡರು ಸಿ.ಟಿ.ರವಿ ಸಮ್ಮುಖದಲ್ಲೇ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸೋತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಬಂದರೆ ಪಕ್ಷಕ್ಕೆ ತುಂಬಾ ಹಾನಿಯಾಗಲಿದೆ. ಅಂಥ ಪರಿಸ್ಥಿತಿ ಬರಬಾರದು, ಪಕ್ಷ ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಯಬೇಕಾದರೆ ತಾವೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದರು.

Tap to resize

Latest Videos

undefined

‘ಕಾಂಗ್ರೆಸ್‌ ಈಸ್‌ ರಿಯಲ್‌ ಕಮ್ಯುನಲ್‌ ಪಾರ್ಟಿ’: ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ.ರವಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಪಕ್ಷದ ವರಿಷ್ಠರಿಗೆ ಆಗ್ರಹಿಸಲು ಜಿಲ್ಲೆಯಿಂದ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದ ಮುಖಂಡರು, ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ, ನೀವು ಇಲ್ಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿ.ಟಿ.ರವಿ ಮಾತನಾಡಿ ಪಕ್ಷದ ಮುಖಂಡರು, ಕಾರ್ಯಕರ್ತರು ಶಿಸ್ತುಬದ್ಧವಾಗಿ ನಡೆದುಕೊಳ್ಳಬೇಕು. ನಿಯೋಗ ಹೋಗುವಂಥ ಕೆಲಸಕ್ಕೆ ಕೈ ಹಾಕಬೇಡಿ, ಯಾರಿಗೆ ಟಿಕೆಟ್‌ ಕೊಟ್ಟರೂ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಯಾರೂ ಪಕ್ಷ ವಿರೋಧ ಚಟುವಟಿಕೆ ಮಾಡಬಾರದು. ಮುಂದಿನ ದಿನಗಳಲ್ಲಿ ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧ ಎಂದು ಹೇಳಿದರು.

ಪ್ರಧಾನಿ ಮೋದಿ ತುಂಬಾ ಎತ್ತರದ, ಜಗತ್ತು ಗೌರವಿಸುವ ನಾಯಕ: ಸಿ.ಟಿ.ರವಿ

click me!