ರಾಜಕಾರಣದಿಂದ ಹೊರಗೆ ಹೆಜ್ಜೆ ಇಟ್ಟಿಲ್ಲ, ಸಮಯ, ಸಂದರ್ಭ ಎಲ್ಲದಕ್ಕೂ ಉತ್ತರ ಕೊಡುತ್ತೆ: ನಿಖಿಲ್‌

By Kannadaprabha News  |  First Published Aug 31, 2023, 12:30 AM IST

ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ ಎಂದು ಜೆಡಿಎಸ್‌ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 


ಬೆಂಗಳೂರು (ಆ.31): ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ ಎಂದು ಜೆಡಿಎಸ್‌ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ.

ಜನರು ನನಗೆ ಸದಾಕಾಲ ಪ್ರೀತಿ, ವಿಶ್ವಾಸ, ಗೌರವ ತೋರುವುದರಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದಿದ್ದಾರೆ. ಮಾಜಿ ಪ್ರಧಾನಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋುಣಿ. 

Tap to resize

Latest Videos

ಯಾವುದೇ ವಿಚಾರಣೆಗೂ ಹೆದರುವುದಿಲ್ಲ: ಕಾಂಗ್ರೆಸ್‌ ವಿರುದ್ಧ ಸುಧಾಕರ್‌ ವಾಗ್ದಾಳಿ

ನನ್ನ ಮೊದಲ ಚಿತ್ರ ಜಾಗ್ವಾರ್‌ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನು ತಟ್ಟಿಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದೀರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟುಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ ಎಂದು ತಿಳಿಸಿದ್ದಾರೆ. ಈವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲೇ ನೆಲೆ ಕಾಣಲು ನಿಖಿಲ್‌ ಪ್ಲ್ಯಾನ್‌: ಸತತ ಎರಡು ಚುನಾವಣೆಗಳಲ್ಲಿ ಸೋಲಿನ ರುಚಿ ಕಂಡ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮುಂದಿನ ಲೋಕಸಭೆ ಚುನಾವಣೆಯ ಸ್ಪರ್ಧಿಸುವ ಬದಲು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಜ್ಯ ರಾಜಕೀಯದಲ್ಲೇ ನೆಲೆ ಕಂಡುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್‌ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ವಿರುದ್ಧ ಸೋಲನುಭವಿಸಿದ್ದರು. ಬಳಿಕ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅದೃಷ್ಟಪರೀಕ್ಷೆ ಸಲುವಾಗಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಇದಕ್ಕಾಗಿಯ ತಾಯಿ ಅನಿತಾ ಕುಮಾರಸ್ವಾಮಿ ಅವರೇ ಕ್ಷೇತ್ರ ತ್ಯಾಗ ಮಾಡಿದರು. ಹೇಳಿ ಕೇಳಿ ರಾಮನಗರ ಕ್ಷೇತ್ರ ಜೆಡಿಎಸ್‌ ಭದ್ರಕೋಟೆ. ಹೇಗಿದ್ದರೂ ಸುಲಭವಾಗಿ ಗೆಲ್ಲಬಹುದು ಎಂಬ ಎಣಿಕೆ ಹುಸಿಯಾಯಿತು. ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ವಿರುದ್ಧ ಸೋಲನುಭವಿಸಿದರು.

ಸತತ 2 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಸಕಲ ಸೌಲಭ್ಯ ಕಲ್ಪಿಸುವೆ: ಪ್ರದೀಪ್‌ ಈಶ್ವರ್‌

ಇದೀಗ ಮುಂದಿನ ವರ್ಷ ಮತ್ತೆ ಲೋಕಸಭಾ ಚುನಾವಣೆ ಎದುರಾಗುತ್ತಿದೆ. ಎರಡು ಸತತ ಸೋಲಿನ ಕಹಿ ಅನುಭವ ಹೊಂದಿರುವ ನಿಖಿಲ್‌ ಕುಮಾರಸ್ವಾಮಿ ಈ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಮೆ ಎನ್ನಲಾಗುತ್ತಿದೆ. ಒಂದು ವೇಳೆ ಮೂರನೇ ಬಾರಿಯೂ ಸೋಲುಂಟಾದಲ್ಲಿ ಅದು ಭವಿಷ್ಯ ರಾಜಕೀಯ ಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬ ಆತಂಕವೂ ಇದೆ.

click me!