
ನವದೆಹಲಿ(ಡಿ.08): ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್ ಸಿಂಗ್ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಆ ಮೂಲಕ ಸುಮಾರು ಎರಡು ದಶಕಗಳ ಬಳಿಕ ಮತ್ತೆ ತಮ್ಮ ಮಾತೃ ಪಕ್ಷವನ್ನು ಮತ್ತೆ ಸೇರಿದ್ದಾರೆ. ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು, ತೆಲಂಗಾಣದ ಜನರ ಆಶೋತ್ತರಗಳನ್ನು ಪೂರೈಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಟಿ.ಆರ್.ಎಸ್ ಜನರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.
1997ರಲ್ಲಿ ಬಿಜೆಪಿ ಮೂಲಕವೇ ರಾಜಕೀಯ ಪ್ರವೇಶಿಸಿದ್ದ ಅವರು, ಪ್ರತ್ಯೇಕ ತೆಲಂಗಾಣ ಹೋರಾಟದ ವೇಳೆ ಕೆ. ಚಂದ್ರಶೇಖರ್ ರಾವ್ ಅವರೊಂದಿಗೆ ಕಾಣಿಸಿಕೊಂಡಿದ್ದರು. 2009-2014ರ ವರೆಗೆ ಟಿಆರ್‌ಎಸ್‌ನಿಂದ ಮೇದಕ್ ಕ್ಷೇತ್ರದ ಸಂಸದೆಯಾಗಿದ್ದ ಅವರು, 2014ರಲ್ಲಿ ಕಾಂಗ್ರೆಸ್ ಸೇರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.