ಡಿಕೆಶಿ ಮನೆಗೆ ಶಿವಣ್ಣ: ಮಹತ್ವದ ಭೇಟಿ, ಕುತೂಹಲ

Kannadaprabha News   | Asianet News
Published : Mar 16, 2021, 08:07 AM IST
ಡಿಕೆಶಿ ಮನೆಗೆ ಶಿವಣ್ಣ:   ಮಹತ್ವದ ಭೇಟಿ, ಕುತೂಹಲ

ಸಾರಾಂಶ

kpcc ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ನಿವಾಸಕ್ಕೆ ಸ್ಯಾಂಡಲ್‌ವುಡ್ ನಟ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದರು. ರಾಜಕೀಯ ಬದಲಾವಣೆ ಬೆನ್ನಲ್ಲೇ ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

 ಬೆಂಗಳೂರು (ಮಾ.16):  ಗೀತಾ ಶಿವರಾಜ್‌ಕುಮಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆಗಳು ಆರಂಭವಾದ ಬೆನ್ನಲ್ಲೇ ಅವರ ಪತಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಗೀತಾ ಅವರ ಸಹೋದರ ಹಾಗೂ ಜೆಡಿಎಸ್‌ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಗೀತಾ ಸಹ ಕಾಂಗ್ರೆಸ್‌ ಸೇರ್ಪಡೆಯಾಗುವ ಆಸಕ್ತಿ ಹೊಂದಿದ್ದಾರೆ ಎಂದಿದ್ದರು.

ಇದರ ಬೆನ್ನಲ್ಲೇ ಸದಾಶಿವನಗರದ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿರುವ ಶಿವರಾಜ್‌ಕುಮಾರ್‌, ಇದೊಂದು ಖಾಸಗಿ ಭೇಟಿ. ವೈಯಕ್ತಿಕ ವಿಚಾರಗಳನ್ನು ಮಾತ್ರವೇ ಚರ್ಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರ್ತಾರೆ? ಸುಳಿವು ಕೊಟ್ಟ ಡಿಕೆಶಿ!

ಕಾಂಗ್ರೆಸ್‌ ಸೇರುವ ಬಗ್ಗೆ ಕಾದು ನೋಡಿ:  ಶಿವರಾಜ್‌ಕುಮಾರ್‌ ಭೇಟಿ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ಗೀತಾ ಶಿವರಾಜ್‌ ಕುಮಾರ್‌ ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಕಾದು ನೋಡಿ’ ಎಂದರು.

ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿರುವುದರಿಂದ ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಅವರೇ ಮಾತನಾಡುತ್ತಾರೆ. ಅವರು ಕಾಂಗ್ರೆಸ್‌ ಸೇರುವ ಕುರಿತು ಕಾದು ನೋಡಿ ಎಂದು ಹೇಳಿದರು.

ಶಿವರಾಜ್‌ ಕುಮಾರ್‌ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ