ಮಂಡ್ಯ ಲೋಸಕಭಾ ಚುನಾವಣಾ ಪ್ರಚಾರಕ್ಕೆ ಈ ಬಾರಿ ಸ್ಟಾರ್ ನಟರಾದ ಯಶ್ ಮತ್ತು ದರ್ಶನ್ ಬಾರದಿದ್ದರೂ ಬೇಜಾರಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯ (ಮಾ.03): ಮಂಡ್ಯ ಲೋಸಕಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಟಿಕೆಟ್ ಶೇ.100ರಷ್ಟು ನನಗೆ ಸಿಗಲಿದೆ. ಇನ್ನು ಕಳೆದ ಬಾರಿ ಸ್ಟಾರ್ ನಟರಾದ ಯಶ್ ಮತ್ತು ದರ್ಶನ್ ನನ್ನ ಬೆಂಬಲಕ್ಕೆ ನಿಂತು ಪ್ರಚಾರ ಮಾಡಿದ್ದರು. ಈ ಬಾರಿ ಅವರು ಚುನಾವಣಾ ಪ್ರಚಾರಕ್ಕೆ ಬಾರದಿದ್ದರೂ ಬೇಜಾರಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತದೆ. ಕರ್ನಾಟಕದಲ್ಲಿ ಯಾವಾಗ ಅಭ್ಯರ್ಥಿ ಪಟ್ಟಿ ಬರುತ್ತೊ ಆವಾಗಲೇ ನಮ್ಮದು ಕೂಡ ಬರುತ್ತದೆ. ಶುಭ ಸಮಾರಂಭಕ್ಕೆ 5 ವರ್ಷದಲ್ಲಿ ಭಾಗವಹಿಸಿದ್ದೇನೆ. ಆದರೆ, ಈ ಸಂದರ್ಭದಲ್ಲಿ ಅದು ಹೈಲೆಟ್ ಆಗ್ತಿದೆ ಅಷ್ಟೇ. ಟಿಕೆಟ್‌ಗಾಗಿ ನಾನು ಡೆಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ. ನನ್ನನ್ನು ಬರಲು ಹೇಳಿದ್ರೆ ಮಾತ್ರ ಹೋಗ್ತೇನೆ. ಆ ತರಹದ ಪ್ಲಾನ್ ಆಗಿಲ್ಲ ಎಂದು ತಿಳಿಸಿದರು.
ಸದ್ಯಕ್ಕೆ ಮಂಡ್ಯದಲ್ಲಿ ಚುನಾವಣೆ ಎದುರಿಸಲು ಯಾವುದೇ ನಿರ್ಧಿಷ್ಟ ಪ್ಲಾನ್ ಮಾಡಿಲ್ಲ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆನು. ಆಗ ನನಗೆ ಯಾವುದೇ ಅನುಭವ ಇರಲಿಲ್ಲ. ನನಗೆ ಬೇಕಾದವರು ನಿಮ್ಮ ಜೊತೆ ಇರ್ತೇವೆ ಅಂತ ಗಟ್ಟಿಯಾಗಿ ನಿಂತಿದ್ದರು. ಇವಾಗ ಸಂದರ್ಭ ಬೇರೆ ಇರುತ್ತದೆ. ಜೊತೆಗೆ, ಒಂದು ಚಿಹ್ನೆಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಪಕ್ಷ ಹಾಗೂ ಪಕ್ಷದ ಲೀಡರ್ ಏನು ಹೇಳ್ತಾರೆ ನೋಡಬೇಕು. ಆದ್ದರಿಂದ ಈಗ ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಪ್ರಚಾರ, ಹೋರಾಟ, ಕ್ಯಾಂಪೇನ್ ಡಿಫೆರೆಂಟ್ ಇರುತ್ತದೆ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ
ಕಳೆದ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದಕ್ಕೆ ರಾಜ್ಯದ ಇಬ್ಬರು ಸ್ಟಾರ್ ನಟರಾದ ಯಶ್ ಮತ್ತು ದರ್ಶನ್ 25 ದಿನಗಳ ಕಾಲ ನನ್ನ ಜೊತೆಗಿದ್ದು ಪ್ರಚಾರ ಮಾಡಿದ್ದರು. ಅವರಿಬ್ಬರು ನನಗೋಸ್ಕರ ಬರಿ ಸಪೋರ್ಟ್ ಅಲ್ಲ, ತ್ಯಾಗವನ್ನೇ ಮಾಡಿದ್ದರು. ಯಾವುದೇ ಸ್ವಾರ್ಥ ಇಲ್ಲದೆ ನನ್ನ ಪರ ನಿಂತಿದ್ದರು. ಆದರೆ, ಪದೇ ಪದೇ ಎಲ್ಲ ಬಿಟ್ಟು ಬನ್ನಿ ಅನ್ನೋದು ಸರಿಯಲ್ಲ. ನನಗೆ ಮನಸ್ಸು ಒಪ್ಪಲ್ಲ. ಅವರು ಯಶ್, ದರ್ಶನ್ ಒಂದೊಂದು ಮೂವಿ ಮಾಡ್ತಿರುತ್ತಾರೆ. ಅದನ್ನೆಲ್ಲ ಬಿಟ್ಟು ಬನ್ನಿ ಅನ್ನೋದು ಸರಿಯಲ್ಲ. ಅವರು ಬಂದರೆ ಖಂಡಿತವಾಗಿಯೂ ಹಾರ್ಟ್ಲಿ ವೆಲ್ ಕಮ್ ಮಾಡ್ತೇನೆ. ದೊಡ್ಡ ಶಕ್ತಿಯಾಗಿ ನನಗೆ ಇರುತ್ತದೆ ಎಂದು ತಿಳಿಸಿದರು.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಚಾರಕ್ಕೆ ಬರಬೇಕೆಂಬ ನಿರೀಕ್ಷೆ ಸರಿಯಲ್ಲ: ಇನ್ನು ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ, ರಾಜಕಾರಣ ಗಲಿಜು ಅಂತ ಹೇಳಿದ್ದಾರೆ. ಇನ್ನು ರಾಜಕಾರಣದ ಬಗ್ಗೆ ಅವರು ಟೀಕೆ ಎದುರಿಸಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ ಅವರು ಚುನಾವಣಾ ಪ್ರಚಾರಕ್ಕೆ ಬರಲೇಬೇಕು ಎಂದು ನಿರೀಕ್ಷೆ ಮಾಡುವುದು ಸರಿಯಲ್ಲ. ಅವರು ಬರ್ತಿನಿ ಅಂದರೆ ಸಂತೋಷ ಪಡ್ತೇನೆ. ನನ್ನ ಮನೆಯ ಮಕ್ಕಳು ತರ ಓಡಾಡಿದ್ದಾರೆ. ಅವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಅವರು ಬರಲಿಲ್ಲ ಅಂದ್ರು ನಾನು ಬೇಜಾರ್ ಮಾಡ್ಕೋಳಲ್ಲ ಎಂದು ತಿಳಿಸಿದರು.
ಕೆಆರ್‌ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಟ್ರಯಲ್ ಬ್ಲಾಸ್ಟ್‌ಗೆ ಹೈಕೋರ್ಟ್ ಅನುಮತಿ; ರೈತರಲ್ಲಿ ಆತಂಕ
ಆದಿಚುಂಚನಗಿರಿ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ: ಆದಿಚುಂಚನಗಿರಿ ಶ್ರೀಗಳ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಭಾನುವಾರವಾದ್ದರಿಂದ ಶ್ರೀಗಳು ಮಠದಲ್ಲೇ ಇರ್ತಾರೆ ಎಂದು ಹೋಗಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಲೋಕಸಭಾ ಚುನಾವಣೆಗೆ ಆರಂಭಿಸಲು ಅಂತೇನು ಹೋಗಿಲ್ಲ. ಆದ್ರೆ ನಾಗಮಂಗಲದಲ್ಲಿ ಇಂದು ನನಗೆ ಒಂದಷ್ಟು ಕಾರ್ಯಕ್ರಮ ಇತ್ತು. ಕಳೆದ ಬಾರಿ ಚುನಾವಣೆಗೂ ಮೊದಲು ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೆ ಒಳ್ಳೆಯದಾಗಿತ್ತು. ಶುಭವಾಗಿತ್ತು ಹಾಗಾಗಿ ನಂಬಿಕೆ ವಿಶ್ವಾಸ ಇದೆ. ನಿನ್ನೆ ಬಿಜೆಪಿ ಮೊದಲ ಲಿಸ್ಟ್ ನೋಡಿದ್ರೆ ರಾಜ್ಯವಾರು ಬಿಡುಗಡೆ ಮಾಡಿದ್ದಾರೆ ಎನಿಸುತ್ತದೆ. ಅದೇ ರೀತಿ ಕರ್ನಾಟಕದ್ದು ಬಂದಾಗ ನಮ್ಮ ಎಲ್ಲರ ಹೆಸರು ಬರಬಹುದು. ನಾನು ಕಳೆದ 5 ವರ್ಷಗಳಿಂದಲೂ ಶುಭ ಸಮಾರಂಭಗಳಿಗೆ ಹೋಗ್ತಿದ್ದೀನಿ. ಈಗ ಹೋದಾಗ ಅದು ಹೈಲೈಟ್ ಆಗ್ತಿದೆ ಅಷ್ಟೆ. ಅಭ್ಯರ್ಥಿ ಪ್ರಕಟಕ್ಕೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ನನ್ನ ಬರಹೇಳಿದ್ರೆ ಹೋಗ್ತಿನಿ ಅಷ್ಟೆ ಎಂದು ಹೇಳಿದರು.