ಬಿಜೆಪಿ ಬೆಂಬಲಿಗನ ಮನೆಯಲ್ಲಿ 80 ಮತದಾರರ ವಿಳಾಸ: ಸಚಿವ ಎಂ.ಬಿ.ಪಾಟೀಲ

Published : Aug 10, 2025, 07:25 AM ISTUpdated : Aug 11, 2025, 05:21 AM IST
MB Patil on honeytrap

ಸಾರಾಂಶ

10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಜಯಪುರ (ಆ.10): ಮತದಾರರ ಪಟ್ಟಿಯಲ್ಲಿನ ಗೋಲ್ಮಾಲ್ ಕುರಿತು ರಾಹುಲ್‌ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ನಡೆದ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. 10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ಗಾಂಧಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಮಹದೇವಪುರದಲ್ಲಿ ನಡೆದ ಅಕ್ರಮ ಮತದಾನ ಕುರಿತು ಮಾಹಿತಿ ನೀಡಲಾಗಿದೆ.

ಮತದಾರರ ಪಟ್ಟಿಯನ್ನು ಡಿಜಿಟಲ್ ಫಾರ್ಮೆಟ್‌ನಲ್ಲಿ ಕೊಡಿ ಎಂದು ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್ ಒತ್ತಾಯ ಮಾಡಿದೆ. ಮತದಾರ ಪಟ್ಟಿಯ ಮಾಹಿತಿಯನ್ನು 45 ದಿನಗಳಲ್ಲಿ ಅಳಿಸಿ ಹಾಕಲಾಗಿದೆ. ತರಾತುರಿಯಲ್ಲಿ ಯಾಕೆ ಡಿಲೀಟ್ ಮಾಡಲಾಗಿದೆ ಎಂದು ಪ್ರಶ್ನಿಸಿದರು. ಡಿಜಿಟಲ್ ರೂಪದಲ್ಲಿ ಕೊಟ್ಟರೆ ನಕಲಿ ಕುರಿತು ಎಲ್ಲವೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಹಾಗಾಗಿ ಡಿಜಿಟಲ್ ಫಾರ್ಮಾಟ್‌ನಲ್ಲಿ ಮಾಹಿತಿ ಕೊಡುತ್ತಿಲ್ಲ. ಮಹದೇವಪುರ ಒಂದು ಉದಾಹರಣೆ ಅಷ್ಟೇ. ಸೆಲ್ ಫಾರ್ಮೆಟ್‌ನಲ್ಲಿ ಮತದಾರರ ಮಾಹಿತಿ ಕೊಟ್ಟರೆ 524 ಲೋಕಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ಸಿಗಲಿದೆ.

ಇದರಿಂದ ಎಲ್ಲೆಲ್ಲಿ ಅಕ್ರಮವಾಗಿದೆ ಎಂದು ತಿಳಿಯುತ್ತದೆ. ಪಾರದರ್ಶಕವಾಗಿ ಚುನಾವಣೆ ನಡೆದಿದ್ದರೆ ಡಿಜಿಟಲ್ ಫಾರ್ಮೆಟ್‌ನಲ್ಲಿ ಕೊಡಲು ಯಾಕೆ ಹಿಂಜರಿಕೆ ಎಂದು ಪ್ರಶ್ನಿಸಿದರು. ಮತದಾರರ ಮಾಹಿತಿಯನ್ನು ಕನಿಷ್ಠ 5 ವರ್ಷವಾದರೂ ಸಂಗ್ರಹಿಸಿ ಇಡಬೇಕು. 10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ. ಹತ್ತು ಚದರಡಿ ಮನೆಯಲ್ಲಿ ಇಷ್ಟು ಜನರು ಇರೋಕೆ ಸಾಧ್ಯವೇ? ಸಾಧ್ಯವಿದ್ದರೆ ದೇಶದಲ್ಲಿ ವಸತಿ ಸಮಸ್ಯೆ ಬಗೆಹರಿದಂತೆ ಎಂದು ಹೇಳಿದರು.

ರಾಹುಲ್ ಗಾಂಧಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಸಾಂವಿಧಾನಿಕ ಹುದ್ದೆ ಹೊಂದಿದ್ದಾರೆ. ಅವರಿಗೆ ಅಫಿಡವಿಟ್ ಕೇಳುತ್ತೀರಿ, ಇದು‌ ಹಾಸ್ಯಾಸ್ಪದ. ಚುನಾವಣೆಯಲ್ಲಿ ನಿಗದಿತ ಮತಗಳ ಮಾರ್ಜಿನ್ ದಾಟಿದವರು ಗೆದ್ದಿದ್ದಾರೆ. ನ್ಯಾರೋ ಮಾರ್ಜಿನ್‌ನವರು ಸಿಕ್ಕಿ ಹಾಕಿಕೊಳ್ಳುತ್ತಾರೆ. ಇದನ್ನೆಲ್ಲ ಬುದ್ಧಿವಂತಿಕೆಯಿಂದ ಮಾಡುತ್ತಾರೆ. ಪಾರ್ಲಿಮೆಂಟ್‌ನಲ್ಲಿ 25 ರಿಂದ 30 ಸೀಟ್‌ಗಳು‌ ನ್ಯಾರೋ ಮಾರ್ಜಿನ್‌ನಲ್ಲಿ ಆಗಿವೆ. ಎಲ್ಲವೂ ಅಕ್ರಮ ಆಗಿರುವ ಸಾಧ್ಯತೆ ಇದೆ. ಕೆಲ ಪ್ರತಿಶತ ಮತಗಳನ್ನು ಕೇಂದ್ರೀಕರಿಸಿ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಒಳ ಮೀಸಲಾತಿ ಜಾರಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಒಳ ಮಿಸಲಾತಿ ವರದಿ ಕ್ಯಾಬಿನೆಟ್‌ನಲ್ಲಿ ಸಲ್ಲಿಕೆಯಾಗಿದೆ. 1300 ಪುಟಗಳ ವರದಿ ಸಲ್ಲಿಕೆಯಾಗಿದೆ. ಅದನ್ನು ನಾವ್ಯಾರು ಓದಿಲ್ಲ. ಓದಿ ತಿಳಿದುಕೊಂಡು ಮಾತನಾಡಬೇಕಿದೆ. ಮುಂದೆ ಆಗಸ್ಟ್ 16ರ ಸಂಜೆ ನಡೆಯುವ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ಬರಲಿದೆ ಎಂದು ತಿಳಿಸಿದರು. ವಿಜಯಪುರದಲ್ಲಿ ಸಚಿವ ಸಂಪುಟ ಸಭೆ ನಡೆಯುವ ವಿಚಾರದ ಬಗ್ಗೆ ಮಾಹಿತಿ ನೀಡಿದ ಅವರು, ಸಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ವಿಜಯಪುರ ನಗರದಲ್ಲಿ ಕ್ಯಾಬಿನೆಟ್ ನಡೆಯಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ