ವಿದೇಶಿ ಪೌರತ್ವ ವಿವಾದ ಬಳಿಕ ಈಗ ರಾಗಾಗೆ ಇ.ಡಿ. ಬಿಸಿ

Kannadaprabha News   | Kannada Prabha
Published : Sep 10, 2025, 04:43 AM IST
Rahul Gandhi

ಸಾರಾಂಶ

ರಾಹುಲ್‌ ಗಾಂಧಿ ಅವರೊಬ್ಬ ಬ್ರಿಟಿಷ್‌ ಪ್ರಜೆ’ ಎಂದು ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್‌.ವಿಘ್ನೇಶ್‌ ಶಿಶಿರ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ವಿಚಾರಣೆ ನಡೆಸಿದೆ. ಈ ವೇಳೆ ರಾಹುಲ್‌ರ ವಿದೇಶಿ ವಹಿವಾಟಿನ ಬಗ್ಗೆ ಮಾಹಿತಿ ಪಡೆದಿದೆ.

ನವದೆಹಲಿ: ‘ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೊಬ್ಬ ಬ್ರಿಟಿಷ್‌ ಪ್ರಜೆ’ ಎಂದು ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್‌.ವಿಘ್ನೇಶ್‌ ಶಿಶಿರ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ವಿಚಾರಣೆ ನಡೆಸಿದೆ. ಈ ವೇಳೆ ರಾಹುಲ್‌ರ ವಿದೇಶಿ ವಹಿವಾಟಿನ ಬಗ್ಗೆ ಮಾಹಿತಿ ಪಡೆದಿದೆ.

ವಿದೇಶಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಸೆಕ್ಷನ್‌ 37ರಡಿ ಇ.ಡಿ. ಶಿಶಿರ್‌ ಅವರನ್ನು ವಿಚಾರಣೆ ನಡೆಸಿತು. ಈ ವೇಳೆ ರಾಹುಲ್‌ ವಿದೇಶಿ ವಹಿವಾಟಿನ ದಾಖಲೆಗಳನ್ನು ನೀಡುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದು, ಫೆಮಾ ಅಡಿ ಶಿಶಿರ್‌ ಹೇಳಿಕೆ ದಾಖಲಿಸಿಕೊಕೊಂಡರು ಎಂದು ಏಜೆನ್ಸಿ ಮೂಲಗಳು ತಿಳಿಸಿವೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಿಶಿರ್, ‘ರಾಹುಲ್‌ ಕುರಿತ ಕೆಲ ಸಾಕ್ಷ್ಯ, ದಾಖಲೆ, ವಿಡಿಯೋಗಳಿವೆ’ ಎಂದು ಹೇಳಿಕೊಂಡಿದ್ದಾರೆ.

ಈ ಮುನ್ನ ಅಲಹಾಬಾದ್‌ ಕೋರ್ಟ್‌ಗೆ ಸಲ್ಲಿಸಿದ್ದ ಪಿಐಎಲ್‌ನಲ್ಲಿ ಶಿಶಿರ್‌ ಅ‍ವರು, ‘ರಾಹುಲ್‌ ಗಾಂಧಿ ಬ್ರಿಟಿಷ್‌ ನಾಗರಿಕ ಎಂಬುದಕ್ಕೆ ನನ್ನ ಬಳಿಕ ದಾಖಲೆಗಳಿವೆ. ಬ್ರಿಟನ್‌ ಸರ್ಕಾರದ ಇಮೇಲ್‌ಗಳು ಗಾಂಧಿ ಅವರು ಬ್ರಿಟಿಷ್‌ ಪ್ರಜೆ ಎಂಬುದನ್ನು ಸಾಬೀತುಪಡಿಸುತ್ತವೆ. ಈ ಕಾರಣಕ್ಕೆ ಅವರು ಭಾರತದಲ್ಲಿ ಚುನಾವಣೆ ಎದುರಿಸಲು ಅನರ್ಹರು’ ಎಂದು ಆರೋಪಿಸಿದ್ದರು. ಇದನ್ನು ಆಧರಿಸಿ, ಇ.ಡಿ. ರಾಹುಲ್‌ರ ವಿದೇಶಿ ವಹಿವಾಟು ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ