
ಬೆಂಗಳೂರು (ನ.4): ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ)ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು (ಇಂಡಿಯಾ ಒಕ್ಕೂಟ), ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನ.5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಂಡಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಕೂಟದ ಮಿತ್ರ ಪಕ್ಷಗಳ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ಜ್ಞಾನೇಶ್ ರಾಜೀನಾಮೆವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಮುಂದೆ ತಾಲೂಕು ಮತ್ತು ಬ್ಲಾಕ್ ಮಟ್ಟದಲ್ಲೂ ಪ್ರತಿಭಟನೆ ನಡೆಸುತ್ತೇವೆ ಎಂದರು.
ನ.1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಮುಂದುವರಿದ ಭಾಗವಾಗಿ ಈ ಬೃಹತ್ ಪ್ರತಿಭನಾ ಸಭೆ ಹಮ್ಮಿಕೊಳ್ಳಲಾಗಿದೆ. ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡಲು ಬಿಜೆಪಿ ಹಾಗೂ ಆರ್‌ಎಸ್ಎಸ್ ಪ್ರಯತ್ನ ನಡೆಸುತ್ತಿವೆ. ಇದರ ವಿರುದ್ಧ ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದರು.
ದೇಶದಾದ್ಯಂತ ತಾಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಬೇಕು ಎಂದು ಇಂಡಿ ಒಕ್ಕೂಟದ ನಾಯಕರು ದೆಹಲಿಯಲ್ಲಿ ತೀರ್ಮಾನಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಮೈತ್ರಿಕೂಟದ ನಾಯಕರು ತೀರ್ಮಾನಿಸಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.