ಚುನಾವಣೆ ನಂತರ ರಾಜ್ಯದಲ್ಲೂ ಕಾಂಗ್ರೆಸ್ ಹೆಸರಿರಲ್ಲ; ಬಿ.ವೈ.ರಾಘವೇಂದ್ರ

By Kannadaprabha News  |  First Published Oct 16, 2022, 7:54 AM IST
  • ಚುನಾವಣೆ ನಂತರ ರಾಜ್ಯದಲ್ಲೂ ಕಾಂಗ್ರೆಸ್‌ ಹೆಸರಿರಲ್ಲ
  • ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ ಬಿ.ವೈ.ರಾಘವೆಂದ್ರ ಭವಿಷ್ಯ

ಶಿವಮೊಗ್ಗ (ಅ.16) : ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಸಂಘಟನಾಕಾರರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳನ್ನು ಮತದಾರರಿಗೆ ತಲುಪಿಸುವ ಜವಬ್ದಾರಿ ಅವರ ಮೇಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಮತ್ತು ಸಂಘಟನೆಯನ್ನು ಜೊತೆ ಜೊತೆಗೆ ಕೊಂಡೊಯ್ಯಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Shivamogga Airport; ನವೆಂಬರ್ ಮಾಸಾಂತ್ಯಕ್ಕೆ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆ

Tap to resize

Latest Videos

ಕಾಂಗ್ರೆಸ್‌ನವರು ಹಲವು ವರ್ಷ ಅಧಿಕಾರದಲ್ಲಿದ್ದರೂ ದೇಶದಲ್ಲಿ ಯಾವ ಅಭಿವೃದ್ಧಿ ಕಾರ್ಯಗಳು ನಡೆಯಲಿಲ್ಲ. ಕಾಂಗ್ರೆಸ್‌ ಪಕ್ಷ ಕ್ಯಾನ್ಸರ್‌ನಂತೆ ದೇಶದಲ್ಲಿ ಆಡಳಿತ ನಡೆಸಿದೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ನಂತರ ಇಡೀ ದೇಶದಲ್ಲಿಯೇ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇವತ್ತು ದೇಶದ ಅಭಿವೃದ್ಧಿ ಕಂಡು ವಿದೇಶಗಳು ಭಾರತದತ್ತ ತಿರುಗಿ ನೋಡುವಂತಾಗಿದೆ. ಕಾಶ್ಮೀರ ಸಮಸ್ಯೆ, ಮೀಸಲಾತಿ ಘೋಷಣೆ, ಹಿಜಾಬ್‌, ಮತಾಂತರ ಮುಂತಾದ ಸವಾಲುಗಳನ್ನು ಮಧ್ಯೆಯೂ ಮೋದಿ ಸರ್ಕಾರ ಅಭಿವೃದ್ಧಿಯಲ್ಲಿ ದಾಪುಗಾಲು ಇಟ್ಟಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಐತಿಹಾಸಿಕ ಬದಲಾವಣೆಗಳಾಗಿವೆ. ಸ್ವಾತಂತ್ರ್ಯದ ಹಿಂದೆಂದೂ ಕಾಣದ ಅಭಿವೃದ್ಧಿ ಕೆಲಸಗಳು ಇಲ್ಲಿ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಅನೇಕ ಯೋಜನೆ ಜಾರಿಯಾಗಿವೆ. ಕೃಷಿ, ಬ್ಯಾಂಕ್‌, ಶೈಕ್ಷಣಿಕ, ರೈಲ್ವೆ, ಆರ್ಥಿಕ ಕ್ಷೇತ್ರಗಳಲ್ಲಿ ಜಿಲ್ಲೆ ಕೂಡ ಮುಂಚೂಣಿಯಲ್ಲಿದೆ. ರೈಲ್ವೆ ಕ್ಷೇತ್ರದಲ್ಲೂ ಸಾಕಷ್ಟುಕೆಲಸಗಳಾಗಿವೆ ಎಂದರು.

ಹಲವು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಇಂದು ದೇಶದಲ್ಲಿ ಹೇಳಲು ಹೆಸರಿಲ್ಲದಂತೆ ಆಗಿದೆ. ರಾಜ್ಯದಲ್ಲಿ ಮಾತ್ರ ಕೆಲವು ನಾಯತಕರಿಂದ ಉಸಿರಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್‌ ಉಸಿರಾಡು ಸಾಧ್ಯವಾಗದ ಸ್ಥಿತಿಗೆ ಹೋಗಲಿದೆ ಎಂದು ಭವಿಷ್ಯ ನುಡಿದರು.

ಪರಿಶಿಷ್ಟ ಜಾತಿಗೆ ಮಡಿವಾಳ ಸೇರಿಸಲು ಪ್ರಾಮಾಣಿಕ ಪ್ರಯತ್ನ: ಸಂಸದ ಬಿ.ವೈ.ರಾಘವೇಂದ್ರ

ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಹರತಾಳು ಹಾಲಪ್ಪ, ಕುಮಾರ್‌ ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಎಸ್‌. ರುದ್ರೇಗೌಡ, ಡಿ.ಎಸ್‌. ಅರುಣ್‌, ಭಾರತಿಶೆಟ್ಟಿ, ಶಾಂತಾರಾಂ ಸಿದ್ಧಿ, ಪ್ರಮುಖರಾದ ಆರ್‌.ಕೆ. ಸಿದ್ಧರಾಮಣ್ಣ, ಎಂ.ಬಿ. ಭಾನುಪ್ರಕಾಶ್‌, ಮೋನಪ್ಪ ಭಂಡಾರಿ, ಸುನಿತಾ ಅಣ್ಣಪ್ಪ ಮತ್ತಿತರರು ಇದ್ದರು.

click me!