2023ರ ಚುನಾವಣೆಯಲ್ಲಿ ಮತ್ತೆ ಅರಳುತ್ತೆ ಕಮಲ: ಬಿ.ವೈ.ರಾಘವೇಂದ್ರ

By Kannadaprabha News  |  First Published Nov 15, 2022, 11:00 PM IST

ಹಿಮಾಚಲ ಪ್ರದೇಶ, ಗುಜರಾತ್‌ನಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸ್ತೇವೆ: ಶಿವಮೊಗ್ಗ ಸಂಸದ ರಾಘವೇಂದ್ರ ವಿಶ್ವಾಸ


ದೇವದುರ್ಗ(ನ.15):  ಮುಂಬರುವ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳು ಜನರ ಮನಗೆದ್ದಿದ್ದು, ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಉತ್ತಮ ಸ್ಥಾನಮಾನ ನೀಡಿ ಗೌರವಿಸಿದೆ ಎಂದರು.

Tap to resize

Latest Videos

ಯಾವುದೇ ಕ್ಷೇತ್ರದಲ್ಲಿ ನಿಂತರೂ ಸಿದ್ದು ಸೋಲು ಖಚಿತ: ಸಚಿವ ಕಾರಜೋಳ

ಶ್ರೀಶೈಲ ಜಗದ್ಗುರುಗಳ ಜನಜಾಗೃತಿ ಸಮಾವೇಶ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನ.20 ರಂದು ಬಳ್ಳಾರಿಯಲ್ಲಿ ಎಸ್ಟಿಸಮಾವೇಶ ಆಯೋಜಿಸಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಮುದಾಯಗಳ ಹೆಸರಿನಲ್ಲಿ 20ಸಮಾವೇಶ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಆಡಳಿತ ಜನ ಮೆಚ್ಚುಗೆ ಪಡೆದಿದ್ದು, ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಹಲವು ಸಮಾಜದ ಸಮಾವೇಶಗಳು ಮೂಡುವ ಮೂಲಕ ಜನರಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳು ಎತ್ತಿ ಹಿಡಿಯುವ ಕೆಲಸ ಮಾಡಲಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುವ ಜತೆ ಜನರ ವಿಶ್ವಾಸ ಗಳಿಸಿದೆ ಎಂದು ಹೇಳಿದರು.

ಧರ್ಮ ರಕ್ಷಣೆಗಾಗಿ ಪದಾಯಾತ್ರೆ ನಡೆಯುತಿದ್ದು, ಇದರಲ್ಲಿ ಸಾವಿರಾರು ಜನರು ಭಕ್ತಿಯಿಂದ ಪಾಲ್ಗೊಳುತ್ತಿದ್ದಾರೆ. ಬಿಜೆಪಿ ಮೋರ್ಚಾ ಸಮಾವೇಶಗಳು ಆರಂಭಿಸಿ, ವಿವಿಧ ಸಮಾವೇಶಗಳು ನಡೆಸಲಾಗುತ್ತಿದೆ. ಪ್ರಂಪಚದಲ್ಲೇ 20ಕೋಟಿ ಸದಸ್ಯರ ಹೊಂದಿದ ಪಕ್ಷ ಬಿಜೆಪಿ ಪಕ್ಷವಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ಜನಪರ ಯೋಜನೆಗಳು ಜಾರಿಗೆ ತರುವ ನಿಟ್ಟಿನಲ್ಲಿ ಶೋಷಿತ ಸಮುದಾಯಗಳ ಪರ ನಿಂತಿದೆ ಎಂದರು. ಇಂತಹ ಉತ್ತಮ ಆಡಳಿತ ನೀಡಿದ್ದಿರಂದ ರಾಜ್ಯದಲ್ಲು ಮೊತ್ತಮ್ಮೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಕೆ.ಶಿವನಗೌಡ ನಾಯಕ, ಮಾನಪ್ಪ ವಜ್ಜಲ್‌, ಶಿವರಾಜ ಪಾಟೀಲ್‌ ಸೇರಿದಂತೆ ಇತರರು ಇದ್ದರು.
 

click me!