ಚಿಕ್ಕಮಗಳೂರಲ್ಲಿ ಮತ್ತೆ ಬಿಜೆಪಿಗರಿಂದಲೇ ‘ಶೋಭಾ ಗೋ ಬ್ಯಾಕ್‌’ ಚಳವಳಿ..!

By Kannadaprabha News  |  First Published Feb 27, 2024, 5:22 AM IST

ಕಳೆದ ಬಾರಿ ಗೋ ಬ್ಯಾಕ್‌ ಶೋಭಾ ಚಳವಳಿ ಮಾಡಿದವರೇ ಈ ಬಾರಿಯೂ ಮಾಡುತ್ತಿದ್ದಾರೆ. ಈ ಕೆಲಸವನ್ನು ದುಡ್ಡಿನ ಮದದಿಂದ ಮಾಡಿಸುತ್ತಿದ್ದಾರೆ. ಯಾರೋ ಷಡ್ಯಂತ್ರ ಮಾಡಿದರೆ ಅದಕ್ಕೆ ನಾನು ಉತ್ತರ ಕೊಡುವುದಿಲ್ಲ, ಹಿರಿಯರು ಮತ್ತು ಹೈಕಮಾಂಡ್‌ನವರು ಕೊಡುತ್ತಾರೆ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 


ಚಿಕ್ಕಮಗಳೂರು(ಫೆ.27):  ಕೇಂದ್ರ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಬಿಜೆಪಿಗರಿಂದಲೇ ಗೋ ಬ್ಯಾಕ್ ಚಳವಳಿ ಮುಂದುವರಿದಿದ್ದು, ಇದೀಗ ‘ಶೋಭಾ ಸಾಕು, ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಅಭ್ಯರ್ಥಿಯಾಗಬೇಕು’ ಎಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ.

ಈ ಕುರಿತು ಸೋಮವಾರ ಸುದ್ದಿಗಾರರಿಗೆ ಮಾತನಾಡಿದ ಶೋಭಾ, ಕಳೆದ ಬಾರಿ ಗೋ ಬ್ಯಾಕ್‌ ಶೋಭಾ ಚಳವಳಿ ಮಾಡಿದವರೇ ಈ ಬಾರಿಯೂ ಮಾಡುತ್ತಿದ್ದಾರೆ. ಈ ಕೆಲಸವನ್ನು ದುಡ್ಡಿನ ಮದದಿಂದ ಮಾಡಿಸುತ್ತಿದ್ದಾರೆ. ಯಾರೋ ಷಡ್ಯಂತ್ರ ಮಾಡಿದರೆ ಅದಕ್ಕೆ ನಾನು ಉತ್ತರ ಕೊಡುವುದಿಲ್ಲ, ಹಿರಿಯರು ಮತ್ತು ಹೈಕಮಾಂಡ್‌ನವರು ಕೊಡುತ್ತಾರೆ ಎಂದರು.

Latest Videos

undefined

ಗೋ ಬ್ಯಾಕ್ ಶೋಭಾ, ರಾಜಕಾರಣದಲ್ಲಿ ಇದೆಲ್ಲ ಇರುವಂತದ್ದೆ, ಫೇಸ್ ಮಾಡ್ತೇನೆ: ಸಚಿವೆ ಕರಂದ್ಲಾಜೆ

ನನ್ನ ವಿರುದ್ಧ ಪತ್ರ ಯಾರು ಬರೆದರು, ಯಾವ ಹ್ಯಾಂಡ್‌ ರೈಟಿಂಗ್‌ನಲ್ಲಿ ಬರೆದರು, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು, ಈ ಎಲ್ಲ ವರದಿಯನ್ನು ಕೇಂದ್ರ ತರಿಸಿಕೊಂಡಿದೆ. ಯಾವುದೇ ಲೋಕಸಭೆ ಚುನಾವಣೆಯಲ್ಲಿ ಮಂತ್ರಿ ವಿರುದ್ಧ ಚಳವಳಿ ನಡೆದಾಗ ಸಹಜವಾಗಿಯೇ ಕೇಂದ್ರ ವರದಿ ತರಿಸಿಕೊಳ್ಳಲಿದೆ ಎಂದು ಹೇಳಿದರು.

ಬಿಜೆಪಿಯಿಂದಲೇ ಚಳವಳಿ:

ಕೆಲ ದಿನಗಳ ಹಿಂದೆ ಮಾಜಿ ಸಚಿವ ಸಿ.ಟಿ.ರವಿ ಅವರ ಹೆಸರು ಮುಂದಿಟ್ಟುಕೊಂಡು ಚಳವಳಿ ನಡೆಸಿದ್ದ ಬಿಜೆಪಿಗರು, ಇದೀಗ ಶೋಭಾ ಸಾಕು ಮಾಜಿ ಸಚಿವ ಡಿ.ಎನ್‌.ಜೀವರಾಜ್‌ ಬೇಕು ಎನ್ನುವ ಹೊಸ ದಾಳ ಪ್ರಯೋಗ ಮಾಡಿದ್ದಾರೆ. ನಾವು ಯಾರ ಪರವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪ್ರಚಾರಕ್ಕೂ ಬಾರದೆ ಜಿಲ್ಲೆಯ 5ಕ್ಕೆ 5 ಕ್ಷೇತ್ರ ಸೋತಾಗ ಕನಿಷ್ಟ ಸೌಜನ್ಯಕ್ಕಾದರೂ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬಲು ಬಾರದ ಶೋಭಾ ಕರಂದ್ಲಾಜೆಯವರಿಗೆ ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಟಿಕೆಟ್‌ ನೀಡಬಾರದು ಎಂಬುದಷ್ಟೆ ನಮ್ಮ ಆಗ್ರಹ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ.

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ..!

ಜೀವರಾಜ್‌ ಸ್ಪಷ್ಟನೆ:

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನನಗೆ ಟಿಕೆಟ್‌ ಕೊಡಿ ಎಂದು ಸಾಮಾಜಿಕ ಜಾಲ ತಾಣದಲ್ಲಿ ಪ್ರೀತಿಗೆ ಹಾಕುತ್ತಿದ್ದಾರೆ ಅಷ್ಟೆ. ಈ ರೀತಿ ಇನ್ನು ಮುಂದೆ ಮಾಡಬೇಡಿ ಎಂದು ಡಿ.ಎನ್‌.ಜೀವರಾಜ್‌ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಗಮನಿಸುತ್ತಿದೆ

ನನ್ನ ವಿರುದ್ಧ ಪತ್ರ ಯಾರು ಬರೆದರು, ಯಾವ ಹ್ಯಾಂಡ್‌ ರೈಟಿಂಗ್‌ನಲ್ಲಿ ಬರೆದರು, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು, ಈ ಎಲ್ಲ ವರದಿಯನ್ನು ಕೇಂದ್ರ ತರಿಸಿಕೊಂಡಿದೆ. ಈ ಕೆಲಸವನ್ನು ದುಡ್ಡಿನ ಮದದಿಂದ ಮಾಡಿಸುತ್ತಿದ್ದಾರೆ. ಯಾರೋ ಷಡ್ಯಂತ್ರ ಮಾಡಿದರೆ ನಾನು ಉತ್ತರ ಕೊಡುವುದಿಲ್ಲ, ಹಿರಿಯರು ಮತ್ತು ಹೈಕಮಾಂಡ್‌ನವರು ಕೊಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 

click me!