'ಸಿಎಂ ಬದಲಾವಣೆ ಚರ್ಚೆ ಹೈ ಕಮಾಂಡ್‌ನಲ್ಲಿ ನಡೆಯುತ್ತಿದೆ : ಶೀಘ್ರ ದುಷ್ಟ ಸಂಹಾರ '

By Suvarna NewsFirst Published Jul 5, 2021, 11:28 AM IST
Highlights
  • ಕೆಟ್ಟವರೊಂದಿಗೆ ಒಳ್ಳೆಯವರೂ ಸೇರಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ವಿಳಂಬ 
  • ಎಂದು ಮತ್ತೊಮ್ಮೆ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್  ಗುಡುಗು
  • ಮೈಸೂರಿನ ಚಾಮುಮಡಿ ಬೆಟ್ಟಕ್ಕೆ ಭೇಟಿ ನೀಡಿದ ಶಾಸಕ ಯತ್ನಾಳ್

  ಮೈಸೂರು (ಜು.05): ಕೆಟ್ಟವರೊಂದಿಗೆ ಒಳ್ಳೆಯವರೂ ಸೇರಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ವಿಳಂಬ ಆಗುತ್ತಿದೆ ಎಂದು ಮತ್ತೊಮ್ಮೆ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್  ಗುಡುಗಿದ್ದಾರೆ.

ಮೈಸೂರಿನ ಚಾಮುಮಡಿ ಬೆಟ್ಟಕ್ಕೆ ಭೇಟಿ ನೀಡಿದ ಶಾಸಕ ಯತ್ನಾಳ್, ಕುರುಕ್ಷೇತ್ರ ಯುದ್ಧದಲ್ಲಿ ಕೌರವರೊಂದಿಗೆ ಭೀಷ್ಮ, ದ್ರೋಣಾಚಾರ್ಯರಂತಹ ಒಳ್ಳೆಯವರೂ ಇದ್ದರು. 
ಒಮ್ಮೊಮ್ಮೆ ಹೀಗೆಲ್ಲ ಆಗುತ್ತದೆ. ಆದರೆ ದುಷ್ಟ ಸಂಹಾರ ಆಗಲೇಬೇಕಲ್ವ ? ಕೆಟ್ಟವರಿಗೆ ಕೊನೆಗಾಲ ಅಂತ ಇದ್ದೇ ಇರುತ್ತೆ. ಅಲ್ಲಿವರೆಗೂ ಕಾಯೋಣ. ಹೈಕಮಾಂಡ್ ಕೂಡ ಮುಖ್ಯಮಂತ್ರಿ ಬದಲಾವಣೆಗೆ ಪರಿಶೀಲನೆ ಮಾಡುತ್ತಿದೆ ಎಂದರು.

ಯತ್ನಾಳ್ ಭೇಟಿ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕನ ಭೇಟಿಯಾದ ಯೋಗೇಶ್ವರ್ ..

ಯಡಿಯೂರಪ್ಪ ವಿರುದ್ಧ ಗುಡುಗು :  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಯತ್ನಾಳ್ ಗುಡುಗಿದ್ದು, ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು. ರಾಜ್ಯದಲ್ಲಿ ಅನ್‌ಲಾಕ್ ಶುರುವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಬಂದಿದ್ದೇನೆ. ದುಷ್ಟರ ಸಂಹಾರ ಮಾಡು ಅಂತ ತಾಯಿ ಬಳಿ ಬೇಡಿಕೊಂಡಿದ್ದೇನೆ. 
ಯಾರು ಅಪಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು. 
ಅತಿ ಶೀಘ್ರದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸವೂ ಇದೆ ಎಂದರು.

 ಯಡಿಯೂರಪ್ಪ ಎಲ್ಲ ಸಮುದಾಯಗಳ ನಾಯಕತ್ವ ಮುಗಿಸುತ್ತಿದ್ದಾರೆ. ಲಿಂಗಾಯತ ಸಮುದಾಯದಲ್ಲಿ ಯಾವೊಬ್ಬ ನಾಯಕನನ್ನ ನೀವು ಬೆಳೆಯಲು ಬಿಡುತ್ತಿಲ್ಲ.
ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯ ಆಗಿದೆ‌. ಅವರ ಕೇಸ್‌ನಲ್ಲಿ ಬಿ ರಿಪೋರ್ಟ್ ಹಾಕುವ ಅವಕಾಶ ಇದ್ದರು ಬಿಡುತ್ತಿಲ್ಲ. ಬ್ಲಾಕ್ ಮೇಲ್ ಮಾಡುವ ಸಲುವಾಗಿಯೇ ಆ ಕೇಸನ್ನ ಇಟ್ಟುಕೊಳ್ಳಲಾಗಿದೆ.  ವಾಲ್ಮೀಕಿ ಸಮುದಾಯದ ಲೀಡರ್‌ಶಿಪ್‌ ಮುಗಿಸುವ ಹುನ್ನಾರ ನಡೆದಿದೆ ಎಂದರು.

ಕೆ.ಎಸ್ ಈಶ್ವರಪ್ಪ ಖಾತೆಗೆ ಸಂಬಂಧಪಟ್ಟ 2 ಸಾವಿರ ಕೋಟಿ ಕಾಮಗಾರಿಯನ್ನು ಮುಖ್ಯಮಂತ್ರಿ ತಮ್ಮ ಬೀಗನಿಗೆ ಕೊಡಿಸಿಕೊಂಡರು. ಹೀಗೆ ಲಿಂಗಾಯತ, ಕುರುಬ, ನಾಯಕ, ಎಲ್ಲ ನಾಯಕರಿಗೂ ಮೋಸ ಮಾಡುತ್ತಿದ್ದಾರೆ.  ರಾಜ್ಯದಲ್ಲಿ ಇವರು ಒಬ್ಬರೇ ಇರಬೇಕು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದರು. 

'ಹೊರಗಡೆ ಬಿಎಸ್‌ವೈ ನಮ್ಮ ನಾಯಕ ಅಂತಾರೆ..ಒಳಗಡೆ ಹೋಗಿ ಸಿಎಂ ಬದಲಾಯಿಸಿ ಅಂತಾರೆ' ..

ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ.  ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು.  ಅದನ್ನು ಬಿಟ್ಟು ಸಿಎಂ ಬದಲಾವಣೆ ಮಾಡಿದರೆ ಬೀದಿಗೆ ಬರ್ತೀವಿ ಅನ್ನೋದು ಸರಿಯಲ್ಲ. ಸಿಎಂ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ.

ಇದರ ಬಗ್ಗೆ ಮಾತನಾಡುವ ಬದಲು ಭ್ರಷ್ಟರ ಪರವಾಗಿ ಮಠಾಧೀಶರು ಮಾತನಾಡಬಾರದು‌. ನಿಮಗೆ ಅಷ್ಟೊಂದು ರಾಜಕೀಯ ಹುಚ್ಚು ಇದ್ದರೆ ಖಾವಿ ತೆಗೆದು ಖಾದಿ ಧರಿಸಿ ಬನ್ನಿ ಎಂದು  ಸಿಎಂ ಪರ ಬ್ಯಾಟ್ ಬೀಸುತ್ತಿರುವ ಮಠಾಧೀಶರ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದರು. 

ವಿಜಯೇಂದ್ರ ವಿರುದ್ಧ ಗರಂ : ಇನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ‌.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್ ಸಿಎಂ ನಿವಾಸ ಕಾವೇರಿ ಹಿಂಭಾಗದಲ್ಲಿ ಗೆಸ್ಟ್‌ಗೌಸ್‌ ಇದೆ. ಇವರ ಎಲ್ಲಾ ಡೀಲ್‌ಗಳೂ ಅಲ್ಲೇ ನಡೆಯೋದು. ಸಿಸಿಬಿ ಪೊಲೀಸರು ಅಲ್ಲಿಗೆ ಯಾಕೆ ರೈಡ್ ಮಾಡಲ್ಲ ಎಂದು ಆರೋಪಿಸಿದರು. 

ಆಗಸ್ಟ್ 15 ರಂದು ನೂತನ ಸಿಎಂ ಧ್ವಜಾರೋಹಣ ಚರ್ಚೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತ್ನಾಳ್ ಅಲ್ಲಿವರೆಗೂ ಯಾಕೆ ಮುಂದುವರಿಸಬೇಕು. ಶೀಘ್ರದಲ್ಲೇ ಸಿಎಂ ಬದಲಾವಣೆ ಮಾಡಬೇಕು‌.  ದಿನಕ್ಕೆ ನೂರು ಕೋಟಿ ರೂ. ಲೂಟಿ ಹೊಡೆಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. 

click me!