ಕೊನೆಗೂ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ, 3 ವರ್ಷಗಳ ಬಳಿಕ ಡಿಕೆಶಿ ಲಿಸ್ಟ್‌ಗೆ AICC ಮುದ್ರೆ

Published : Apr 09, 2022, 07:20 PM IST
ಕೊನೆಗೂ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ, 3 ವರ್ಷಗಳ ಬಳಿಕ ಡಿಕೆಶಿ ಲಿಸ್ಟ್‌ಗೆ AICC ಮುದ್ರೆ

ಸಾರಾಂಶ

* ಕೊನೆಗೂ ಕಾಂಗ್ರೆಸ್ ಪದಾಧಿಕಾರಿಗಳ ನೇಮಕಕ್ಕೆ ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ * ಕಳೆದ ಮೂರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ನೇಮಕ * ಕೊನೆಗೂ ಪಟ್ಟಿಗೆ ಅಂಕಿತ ಹಾಕಿದ ಕಾಂಗ್ರೆಸ್ ಹೈಕಮಾಂಡ್  

ಬೆಂಗಳೂರು, (ಏ.09):  ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಪ್ರದೇಶ  ಕಾಂಗ್ರೆಸ್‌(Congress) ಪದಾಧಿಕಾರಗಳ ನೇಮಕಕ್ಕೆ ಕಡೆಗೂ ಕಾಲ ಕೂಡಿ ಬಂದಿದೆ. 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ಸಿದ್ಧಪಡಿಸಲಾಗಿದ್ದ ಪಟ್ಟಿಗೆ ಅಂತಿಮ ಮುದ್ರೆ ಬಿದ್ದಿದ್ದು, ಅದನ್ನು ಇಂದು (ಶನಿವಾರ)  ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ)  ಬಿಡುಗಡೆ ಮಾಡಿದೆ.

Karnataka Congress: ಡಿಕೆಶಿ ದಿಲ್ಲಿಗೆ: ಪದಾಧಿಕಾರಿಗಳ ನೇಮಕ ಫೈನಲ್‌?

ರಾಜ್ಯಕ್ಕೆ ಒಟ್ಟು 40 ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಆ ಪೈಕಿ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದುಳಿದ ವರ್ಗದ 53, ಪರಿಶಿಷ್ಟ ಜಾತಿಯ 25, ಪರಿಶಿಷ್ಟ ಪಂಗಡದ 4, ಅಲ್ಪಸಂಖ್ಯಾತ ಸಮುದಾಯದ 22, ಲಿಂಗಾಯತ-19, ರೆಡ್ಡಿ ಲಿಂಗಾಯತ-5, ಒಕ್ಕಲಿಗ-16, ಲೈಂಗಿಕ ಅಲ್ಪಸಂಖ್ಯಾತ-1 ಮತ್ತು ಇತರ ನಾಲ್ವರಲ್ಲದೆ, 23 ಮಹಿಳೆಯರನ್ನು ಪದಾಧಿಕಾರಿಗಳನ್ನಾಗಿ ಮಾಡಲಾಗಿದೆ.

ಕಳೆದ ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿಯನ್ನು ವಿಸರ್ಜಿಸಲಾಗಿತ್ತು. ಆ ಬಳಿಕ ಪದಾಧಿಕಾರಿಗಳನ್ನು ನೇಮಕ ಮಾಡಿರಲಿಲ್ಲ. ಈಗ ಕಾಂಗ್ರೆಸ್ ಹೈಕಮಾಂಡ್ ಪದಾಧಿಕಾರಿಗಳ ನೇಮಕಕ್ಕೆ ಅಸ್ತು ಎಂದಿದೆ. ಮೊದಲ ಹಂತದಲ್ಲಿ 40 ಉಪಾಧ್ಯಕ್ಷರು ಮತ್ತು 109 ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಪದಾಧಿಕಾರಿಗಳನ್ನು ನೇಮಕ ಮಾಡಿದೆ.

ರಾಜ್ಯ ಕಾಂಗ್ರೆಸ್‌ 2019ರಿಂದ ಪದಾಧಿಕಾರಿಗಳಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ಪದಾಧಿಕಾರಿಗಳ ನೇಮಕಕ್ಕೆ ಹಲವು ಬಾರಿ ಪ್ರಯತ್ನ ನಡೆದರೂ ಆಕಾಂಕ್ಷಿಗಳ ಸಂಖ್ಯೆಯ ಕಾರಣಕ್ಕೆ ನೇಮಕ ಮುಂದಕ್ಕೆ ಹಾಕಲಾಗುತ್ತಿತ್ತು. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಅವರು ನೇಮಕಗೊಂಡ ನಂತರ ಹೊಸ ಟೀಮ್‌ ರಚಿಸಿಕೊಳ್ಳಲು ಮುಂದಾಗಿದ್ದರು. ಹೀಗಾಗಿ ಕಳೆದ ಆರು ತಿಂಗಳಿನಿಂದ ಪದಾಧಿಕಾರಿಗಳ ಆಯ್ಕೆ ಕಸರತ್ತು ನಡೆದಿತ್ತು.

ಹೊಸ ಟೀಮ್‌ ರಚನೆಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಹೈಕಮಾಂಡ್‌ಗೆ ಪಟ್ಟಿಯೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ತಮ್ಮದೇ ಆದ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ಅವಗಾಹನೆಗೆ ಕಳುಹಿಸಿದ್ದರು. ಈ ಬೆಳವಣಿಗೆ ನಡೆದ ನಂತರ ಪಕ್ಷದ ಇತರ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್‌, ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಲವು ನಾಯಕರು ತಮ್ಮ ಶಿಫಾರಸುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು.

ಹೊಸ ಟೀಮ್‌ ರಚನೆಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಹೈಕಮಾಂಡ್‌ಗೆ ಪಟ್ಟಿಯೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ತಮ್ಮದೇ ಆದ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ಅವಗಾಹನೆಗೆ ಕಳುಹಿಸಿದ್ದರು. ಈ ಬೆಳವಣಿಗೆ ನಡೆದ ನಂತರ ಪಕ್ಷದ ಇತರ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್‌, ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಲವು ನಾಯಕರು ತಮ್ಮ ಶಿಫಾರಸುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು.

ಹೊಸ ಟೀಮ್‌ ರಚನೆಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಹೈಕಮಾಂಡ್‌ಗೆ ಪಟ್ಟಿಯೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಇತರ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್‌, ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಲವು ನಾಯಕರು ತಮ್ಮ ಶಿಫಾರಸುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು. ಹೀಗಾಗಿ ಗೊಂದಲ ಉಂಟಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ