ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ: ಡಿಕೆಶಿ ಮನೆಯಲ್ಲಿ ಮಹತ್ವದ ಬೆಳವಣಿಗೆ

By Suvarna NewsFirst Published Feb 29, 2020, 6:03 PM IST
Highlights

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆಯುತ್ತಲೇ ಇದೆ. ಡಿಕೆಶಿ ಹುದ್ದೆವಹಿಸಿಕೊಳ್ಳಲು ಆಸಕ್ತರಾಗಿದ್ದರೂ ಕೂಡ, ಸಿದ್ದರಾಮಯ್ಯರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವುದೇ ಸವಾಲಾಗಿದೆ. ಇದರ ಮಧ್ಯೆ ಡಿಕೆಶಿ ನಿವಾಸದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಬೆಂಗಳೂರು, (ಫೆ. 29): ಕೆಪಿಸಿಸಿ ಅಧ್ಯಕ್ಷ ಗಾದಿಗೆ ಡಿಕೆ ಶಿವಕುಮಾರ್ ಹೆಸರು ಫೈನಲ್ ಆಗಿದ್ದರೂ, ಅಧಿಕೃತವಾಗಿ ಘೋಷಣೆ ಮಾಡಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದ್ದಾರೆ.

ಇದರ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್  ಖುದ್ದು ಇಂದು (ಶನಿವಾರ) ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಯ್ಕೆ ಪ್ರಕ್ರಿಯೆ ಮತ್ತೆ ಗರಿಗೆದರಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆಗೆ ತೆರಳಿ ಡಿಕೆಶಿಯನ್ನು ಭೇಟಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಯ್ಕೆ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೊನೆಗೂ ಅಳೆದು ತೂಗಿ KPCC ಅಧ್ಯಕ್ಷರ ಆಯ್ಕೆ: ಅಧಿಕೃತ ಘೋಷಣೆಯೊಂದೇ ಬಾಕಿ

ಉಪಚುನಾವಣೆ ಮುಗಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಆದ್ರೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.

ಡಿಕೆಶಿ ಸೇರಿದಂತೆ ಹಲವು ಹಿರಿಯ ಮುಖಂಡರ ಹೆಸರು, ಅಧ್ಯಕ್ಷ ಹುದ್ದೆಗೆ ಕೇಳಿಬಂದಿತ್ತು.  ಅಂತಿಮವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ನಿರ್ಧರಿಸಲಾಗಿತ್ತು. ಆದ್ರೆ, ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಘೋಷಣೆಯಾಗುತ್ತೆ ಎನ್ನಲಾಗಿತ್ತು.

 ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಯಾರನ್ನಾದರೂ ಆಯ್ಕೆ ಮಾಡಿ ಎಂದು  ಹೈಕಮಾಂಡ್  ದಿನೇಶ್ ಗುಂಡೂರಾವ್ ಮನವಿ ಮಾಡಿದ್ದನ್ನ ಇಲ್ಲಿ ಸ್ಮರಿಸಬಹುದು.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

click me!