ಬಾಯ್ಮುಚ್ಚಿಕೊಂಡು ಇದ್ದರೆ ಸರಿ, ಇಲ್ಲದಿದ್ದರೆ ಹೈಕಮಾಂಡ್‌ ಶಕ್ತಿ ತೋರಿಸ್ಬೇಕಾಗುತ್ತೆ: ಖರ್ಗೆ ಗರಂ!

Published : Jan 18, 2025, 07:22 AM IST
ಬಾಯ್ಮುಚ್ಚಿಕೊಂಡು ಇದ್ದರೆ ಸರಿ, ಇಲ್ಲದಿದ್ದರೆ ಹೈಕಮಾಂಡ್‌ ಶಕ್ತಿ ತೋರಿಸ್ಬೇಕಾಗುತ್ತೆ: ಖರ್ಗೆ ಗರಂ!

ಸಾರಾಂಶ

ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಶತಮಾನಕ್ಕೂ ಹೆಚ್ಚು ಇತಿಹಾಸ ವಿರುವ ಪಕ್ಷ ಕಾಂಗ್ರೆಸ್. ಯಾರೋ ಒಬ್ಬರು ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ ಎಂದೂ ಎಚ್ಚರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 

ಬೆಂಗಳೂರು(ಜ.18):  ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ' ಎಂದು ಖಡಕ್ ಸೂಚನೆ ನೀಡಿದ್ದಾರೆ.  ಜತೆಗೆ, 'ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಶತಮಾನಕ್ಕೂ ಹೆಚ್ಚು ಇತಿಹಾಸ ವಿರುವ ಪಕ್ಷ ಕಾಂಗ್ರೆಸ್. ಯಾರೋ ಒಬ್ಬರು ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ' ಎಂದೂ ಎಚ್ಚರಿಸಿದ್ದಾರೆ. 

ಶುಕ್ರವಾರ ಸದಾಶಿವನಗರದ ನಿವಾಸದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿ ವಿವಿಧ ವಿಚಾರಗಳ ಕುರಿತು ಬಹಿರಂಗ ಹೇಳಿಕೆ ನೀಡುತ್ತಿರುವ ನಾಯಕರ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಕಾಂಗ್ರೆಸ್‌ ಕಾನೂನು ಹೋರಾಟ: ಖರ್ಗೆ

ಕೆಲ ನಾಯಕರು ಬಹಿರಂಗವಾಗಿ ಹೇಳಿಕೆ ಗಳನ್ನು ನೀಡುತ್ತಿದ್ದಾರೆ. ಒಬ್ಬರಿಗೊಬ್ಬರು ಹೇಳಿಕೆಗಳನ್ನು ಕೊಟ್ಟು ಹೈಕಮಾಂಡ್ ಸುಮ್ಮನೆ ಕುಳಿತಿದೆ ಎಂದು ದೂರುತ್ತಿದ್ದಾರೆ. ನೀವು ಯಾರಾದರೂ ಒಂದು ಹೇಳಿಕೆ ನೀಡಿದರೆ ಅದಕ್ಕೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕಾ? ನೀವೇ ಹೇಳಿಕೆ ನೀಡಿ ನೀವೇ ಗೊಂದಲ ಸೃಷ್ಟಿಸುತ್ತಿದ್ದೀರಿ ಮತ್ತೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಹೇಳುತ್ತೀರಿ. ನೀವು ಮಾತನಾಡಿರುವುದಕ್ಕೆಲ್ಲ ನಾವು ಸ್ಪಷ್ಟನೆ ಕೊಡಲು ಸಾಧ್ಯವೇ? ನೂರು ಜನ ನೂರು ರೀತಿ ಮಾತನಾಡಿದರೆ ಹೈಕಮಾಂಡ್ ಪ್ರತಿಕ್ರಿಯಿಸಬೇಕೇ? ಎಂದು ಸಚಿವರು ಹಾಗೂ ನಾಯಕರ ವಿರುದ್ಧ ಕಿಡಿಕಾರಿದರು. 

ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ: 

ಪ್ರಮುಖ ನಿರ್ಧಾರ ಮಾಡಲು ಹೈಕಮಾಂಡ್ ಇದೆ. ಸುಮ್ಮನೆ ಬದಲಾವಣೆ ಬದಲಾವಣೆ ಎನ್ನುತ್ತಿದ್ದರೆ ಹೇಗೆ? ಯಾವುದೇ ನಿರ್ಧಾರ ತೆಗೆದುಕೊಳ್ಳಲು ನಾನು, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಇದ್ದೇವೆ. ನಾವೆಲ್ಲ ಕೂತು ಸೂಕ್ತ ಕಾಲದಲ್ಲಿ ಅಗತ್ಯ ನಿರ್ಧಾರ ಮಾಡುತ್ತೇವೆ. ಅಲ್ಲಿಯವರೆಗೆ ಅನಗತ್ಯ ಹೇಳಿಕೆಗಳನ್ನು ನಿಲ್ಲಿಸಿ ಬಾಯುಚ್ಚಿಕೊಂಡು ನಿಮ್ಮ ಕೆಲಸ ನೀವು ಮಾಡಿ, ಯಾವುದೇ ಶಾಸಕರು, ಸಚಿವರು, ಸಂಸದರು ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದು ತಾಕೀತು ಮಾಡಿದರು. 

ಪಕ್ಷ, ಸರ್ಕಾರ ದುರ್ಬಲ ಮಾಡಬೇಡಿ: 

ಸ್ಥಿರ ಸರ್ಕಾರವನ್ನು ಇನ್ನೂ ಗಟ್ಟಿ ಮಾಡಬೇಕೇ ಹೊರತು ಅಲುಗಾಡಿಸುವ ಪ್ರಯತ್ನ ಮಾಡಬಾರದು ಉತ್ತಮವಾಗಿರುವ ಸಂಘಟನೆಯನ್ನು ದುರ್ಬಲಗೊಳಿಸುವ ಕೆಲಸಕ್ಕೆ ಕೈ ಹಾಕಬಾರದು. ಈಗ ಅನಗತ್ಯ ಹೇಳಿಕೆಗಳನ್ನು ನೀಡಿ ಗೊಂದಲ ಉಂಟು ಮಾಡಲಾಗುತ್ತಿದೆ. ನೇಮಕವೇ ಆಗಿರಲಿ, ಬದಲಾವಣೆಯೇ ಆಗಿರಲಿ ಎಲ್ಲಿಯವರೆಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೋ ಅಲ್ಲಿಯವರೆಗೆ ಯಾರೂ ಹೇಳಿಕೆ ಕೊಡುವ ಅಗತ್ಯವಿಲ್ಲ. ಏನು ಮಾಡಬೇಕು? ಯಾವಾಗ ಮಾಡಬೇಕು ಎಂಬುದು ಹೈಕಮಾಂಡ್‌ಗೆ ತಿಳಿದಿದೆ. ಹೈಕಮಾಂಡ್ ತನ್ನ ಕೆಲಸ ಮಾಡುತ್ತದೆ. ಬದಲಾವಣೆ ಮಾಡಲೇಬಾರದು ಎಂದು ನಿರ್ಧರಿಸಿದರೆ ಮಾಡುವುದೇ ಇಲ್ಲ. ಅದೆಲ್ಲ ಹೈಕಮಾಂಡ್‌ ಗೆ ಬಿಟ್ಟದ್ದು ಎಂದರು. 

ರಾಜ್ಯ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳನ್ನು ಬೇರೆ ರಾಜ್ಯಗಳಲ್ಲಿ ಎಲ್ಲಾ ಪಕ್ಷಗಳು ಅನುಕರಿಸಲು ಹೊರಟಿವೆ. ರಾಜ್ಯ ಹಾಗೂ ದೇಶದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳಿಂದ ಸರ್ಕಾರಕ್ಕೆ ಉತ್ತಮ ಹೆಸರು ಬಂದಿದೆ. ಆ ಬಗ್ಗೆ ಪ್ರಚಾರ ಮಾಡಿ ಇನ್ನೂ ಹೆಚ್ಚು ಕೆಲಸ ಮಾಡಬೇಕೇ ಹೊರತು ಅನಗತ್ಯ ವಿಚಾರಗಳ ಬಗ್ಗೆ ಹೇಳಿಕೆ ನೀಡಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಬಾರದು. ಮೊದಲು ಬಾಯುಚ್ಚಿಕೊಂಡು ಕೊಟ್ಟ ಕೆಲಸ ಮಾಡಿ ಪಕ್ಷ ಹಾಗೂ ಜನರಿಗೆ ಬಲ ತುಂಬುವ ಕೆಲಸ ಮಾಡಿ ಎಂದು ಹೇಳಿದರು. 

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಫೋಟಕ ಹೇಳಿಕೆ!

ನಿಮ್ಮ ಈ ಸೂಚನೆಯನ್ನು ನಾಯಕರು ಮೀರಿದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ, ಯಾರೂ ಅನಗತ್ಯವಾಗಿ ಮಾತನಾಡಬಾರದು ಎಂದು ಹೇಳಿದ್ದೇನೆ. ನಮ್ಮ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲವಿಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಯಾಕೆಂದರೆ ಇದು ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಪಕ್ಷ. ಯಾರೋ ಒಬ್ಬರು, ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಹೇಳಿಕೆಗಳನ್ನು ನಿಲ್ಲಿಸಿ 

ಸ್ಥಿರಸರ್ಕಾರವನ್ನು ಇನ್ನೂ ಗಟ್ಟಿ ಗಾಡಿಸುವ ಪ್ರಯತ್ನ ಮಾಡ ಬಾರದು. ಉತ್ತಮವಾಗಿರುವ ಸಂಘಟನೆಯನ್ನು ದುರ್ಬಲ ಗೊಳಿಸುವ ಕೆಲಸಕ್ಕೆ ಕೈ ಹಾಕಬಾರದು. ಈಗ ಅನಗತ್ಯ ಹೇಳಿಕೆಗಳನ್ನು ನೀಡಿ ಗೊಂದಲ ಉಂಟು ಮಾಡಲಾಗು ತ್ತಿದೆ. ನೇಮಕವೇ ಆಗಿರಲಿ, ಬದಲಾವಣೆಯೇ ಆಗಿರಲಿ ಎಲ್ಲಿಯವರೆಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೋ ಅಲ್ಲಿಯವರೆಗೆ ಯಾರೂ ಹೇಳಿಕೆ ಕೊಡುವ ಅಗತ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ