ಬಿಜೆಪಿಗೆ ಕಾಳ ಧನಿಕರಿಂದ 6 ಸಾವಿರ ಕೋಟಿ ಎಲೆಕ್ಷನ್‌ ಬಾಂಡ್: ಮಲ್ಲಿಕಾರ್ಜುನ ಖರ್ಗೆ

By Kannadaprabha NewsFirst Published Feb 18, 2024, 12:24 PM IST
Highlights

ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮದ್ದೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಆಕೌಂಟ್‌ಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ, ಬಿಜೆಪಿ 6 ಸಾವಿರ ಕೋಟಿ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ದಿ ಹೇಳೀರಾ ಎಂದು ಪ್ರಶ್ನಿಸಿದ ಖರ್ಗೆ 

ಮಂಗಳೂರು(ಫೆ.18): ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಗಳನ್ನು ಕಾಳಧನಿಕರಿಂದ ಪಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮದ್ದೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಆಕೌಂಟ್‌ಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್‌ ಮಾಡಿದರು. ಆದರೆ, ಬಿಜೆಪಿ 6 ಸಾವಿರ ಕೋಟಿ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ದಿ ಹೇಳೀರಾ ಎಂದು ಖರ್ಗೆ ಪ್ರಶ್ನಿಸಿದರು. 

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ₹5000 ಸಿಗ್ತಿದೆ: ಡಿ.ಕೆ.ಶಿವಕುಮಾರ್‌

ಬಿಜೆಪಿ ಇದ್ದಿದ್ರೆ ಮನುಸ್ಮೃತಿ ಬರ್ತಿತ್ತು: 

ಬಿಜೆಪಿಯವರು ಶ್ರೀಮಂತರ ಪರ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡೋರು. ಅವರು ಬಡವರು, ದಲಿತರನ್ನು ತುಳಿಯುವ ಗುರಿ ಇಟ್ಟುಕೊಂಡಿದ್ದಾರೆ. ಅಂಥವರ ಪಕ್ಷಕ್ಕೆ ಹೋಗ್ತಿರಾ ಎಂದು ಹೇಳಿದ ಅವರು, ಕಾಂಗ್ರೆಸ್ ಇದ್ದ ಕಾರಣ ಸಂವಿಧಾನ ಬಂದ ಮೇಲೆ ಮಹಿಳೆಯರಿಗೆ ಓಟಿನ ಅಧಿಕಾರ ಸಿಕ್ಕಿದೆ. ನಮ್ಮ ದೇಶದಲ್ಲಿ ಈ ಕಾನೂನು ಜಾರಿ ಮಾಡಿದ ಮೇಲೆ ಇತರ ದೇಶಗಳೂ ಮಹಿಳೆಯರಿಗೆ ಓಟಿನ ಅಧಿಕಾರ ನೀಡಿವೆ. ಅವರ ತತ್ವದ ಪ್ರಕಾರ ಆಗಿದ್ದರೆ ಎಲ್ಲೆಡೆ ಮನುಸ್ಮೃತಿ ಜಾರಿಯಾಗುತ್ತಿತ್ತು. ಹೆಣ್ಮಕ್ಕಳಿಗೆ ಯಾವುದೇ ಸ್ಥಾನಮಾನ ಸಿಗುತ್ತಿರಲಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಮಾತನಾಡಿದರು. ಗೃಹ ಸಚಿವ ಡಾ. ಪರಮೇಶ್ವರ್, ಎಂಎಲ್ಸಿ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷಸಲೀಂ ಅಹ್ಮದ್, ಸಚಿವರಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ, ಸುಧಾಕರ್, ಲಕ್ಷ್ಮೀ ಹೆಬ್ಬಾಳ್ವರ್, ಕೆ.ಜೆ. ಜಾರ್ಜ್, ಮಧು ಬಂಗಾರಪ್ಪ, ಕೆ. ವೆಂಕಟೇಶ್, ಶಾಸಕ ಆರ್.ವಿ. ದೇಶಪಾಂಡೆ, ಮಾಜಿ ಸಚಿವರಾದ ಮೋಟಮ್ಮ, ಟಿ.ಬಿ.ಜಯಚಂದ್ರ, ರಮಾನಾಥ ರೈ, ಅಂಜನೇಯ, ಮಾಜಿ ಎಂಪಿ ಉಗ್ರಪ್ಪ, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್,  ಅಶೋಕ್ ರೈ, ಮುಖಂಡರಾದ ಶಕುಂತಳಾ ಶೆಟ್ಟಿ, ಗಫೂರ್, ಐವನ್ ಡಿಸೋಜ, ವಿನಯ ಕುಮಾರ್ ಸೊರಕೆ, ಮಿಥುನ್ ರೈ, ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರು, ಜಿಲ್ಲೆ ರಾಜ್ಯದ ನಾಯಕರು ಇದ್ದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ವಾಗತಿಸಿದರು. ಡಾ. ಮಂಜುನಾಥ ಭಂಡಾರಿ ಮತ್ತು ಮಮತಾ ಗಟ್ಟಿ ನಿರೂಪಿಸಿದರು.

ಕಾಂಗ್ರೆಸ್‌ ಮುಗಿಸಲು ಬ್ಯಾಂಕ್‌ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ

ಕಡುಬಡವರಾಗಿದ್ದಜನರನ್ನು ಭೂಮಾಲೀಕರನ್ನಾಗಿ ಮಾಡಿದ್ದು ಯಾರು ಎಂದು ನೆನಪು ಮಾಡಿಕೊಳ್ಳದೆ ಇದ್ದರೆ ದೇಶಕ್ಕೆ ಭವಿಷ್ಯವಿಲ್ಲ, ಇನ್ನೂ ಕಾಲ ಮಿಂಚಿಲ್ಲ. ಕಾಂಗ್ರೆಸ್ ಸರ್ಕಾರ ಈಗ ನೀಡುತ್ತಿರುವ ಗ್ಯಾರಂಟಿಯನ್ನಾದರೂ ನೆನಪಿಟ್ಟುಕೊಳ್ಳಿ. ನಾವು ಎಲ್ಲ ಗ್ಯಾರಂಟಿಗಳಿಗೆ ಬಜೆಟ್‌ನಲ್ಲೇ ಹಣ ಇಟ್ಟಿದ್ದೇವೆ. ಏನೂ ನೀಡದ ಮನುಷ್ಯನಿಗೆ ಏಕೆ ಜೈಕಾರ ಹಾಕ್ತಿರಿ. ಅನ್ನ ನಮ್ಮದು, ಶಿಕ್ಷಣ ನಮ್ಮದು, ಜೈಕಾರ ಮಾತ್ರ ಮೋದಿಗೆ ಏಕೆ ಎಂದರು.

ಕರಾವಳಿ ಜನತೆ ಕಾಂಗ್ರೆಸ್‌ನ ಗ್ಯಾರಂಟಿ

ಯೋಜನೆಗಳಿಂದ ಮನೆ ಉರಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅದರ ಉಪಕಾರ ತೀರಿಸುತ್ತಾರೆ. ದ.ಕ., ಉಡುಪಿ. ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದಲ್ಲಿ ಕನಿಷ್ಠ 20 ಸೀಟ್‌ಗಳನ್ನಾದರೂ ಗೆದ್ದೇವೆ ಎಂದು ಖರ್ಗೆ ಹೇಳಿದರು.

ನಳಿನ್, ಶೋಭಾರನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ವಾಲನ್ನು ಕೊಡುವಂತೆ ರಾಜ್ಯದ 25 ಮಂದಿ ಎಂಪಿಗಳು ಕೋಲೆ ಬಸವನ ಹರ ಒಂದಿನ ಆದರೂ ಮಾತನಾಡಿದ್ದಾರಾ? ನನನ್ ಕುಮಾ‌ರ್ ಕಟೀಲು ಯಾವತ್ತಾದರೂ ಬಾಯಿ ಬಿಟ್ಟಿದ್ದೀಯೇನಪ್ಪ? ಶೋಭಾ ಕರಂದ್ಲಾಜೆ ಮಾತಾಡಿದ್ದೀಯೇನು? ಇಂಥವರನ್ನು ಮತ್ತೆ ಗೆಲ್ಲಿಸಬೇಕಾ? ಕರಾವಳಿ ಜನರಿಗೆ ಸ್ವಾಭಿಮಾನ ಇದ್ದರೆ ಈ ಇಬ್ಬರೂ ಎಂಪಿಗಳನ್ನು ಸೋಲಿಸಿ ಕಾಂಗ್ರೆಸ್‌ನ್ನು ಗೆಲ್ಲಿಸಿ, ಬಿಜೆಪಿ ಎಂಪಿಗಳು ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

click me!