ಕಾಂಗ್ರೆಸ್‌ಗೆ ಅಧಿಕಾರ ದೊರೆಯುವ ಮುನ್ಸೂಚನೆ: ಮಯೂರ್‌ ಜಯಕುಮಾರ್‌

By Govindaraj SFirst Published Nov 3, 2022, 11:02 PM IST
Highlights

ರಾಜ್ಯದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ ದೊರೆಯಲಿರುವ ಮುನ್ಸೂಚನೆ ನೀಡಿದ್ದು, ಇದನ್ನು ಸಾಕಾರಗೊಳಿಸಲು ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್‌ ತಿಳಿಸಿದ್ದಾರೆ. 

ತುಮಕೂರು (ನ.03): ರಾಜ್ಯದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ ದೊರೆಯಲಿರುವ ಮುನ್ಸೂಚನೆ ನೀಡಿದ್ದು, ಇದನ್ನು ಸಾಕಾರಗೊಳಿಸಲು ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್‌ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಡಿಸಿಸಿ ಅಧ್ಯಕ್ಷ ಆರ್‌.ರಾಮಕೃಷ್ಣರ ಅಧ್ಯಕ್ಷತೆಯಲ್ಲಿ ನವೆಂಬರ್‌ 6ರಂದು ನಡೆಯುವ ಸರ್ವೋದಯ ಸಮಾವೇಶದ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 

ಭಾರತ್‌ ಜೋಡೋ ಯಾತ್ರೆಯಲ್ಲಿ ಜಿಲ್ಲೆಯ ಎಲ್ಲಾ ನಾಯಕರು, ಕಾರ್ಯಕರ್ತರು ಸಹ ಒಗ್ಗೂಡಿ ಕಾರ್ಯಕ್ರಮ ಯಶಸ್ವಿಯಾಗಲು ಕೈಜೋಡಿಸಿದ್ದೀರಿ, ಇದರ ಭಾಗವಾಗಿ ನೆರೆಯ ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿಯೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿ ಬೆಂಬಲ ಸೂಚಿಸಿದ್ದರು. ಇದು ಪಕ್ಷಕ್ಕೆ ಮತ್ತಷ್ಟುಹುಮ್ಮಸ್ಸು ನೀಡಿದೆ. ಇದೇ ಹುಮ್ಮಸ್ಸನ್ನು ನವೆಂಬರ್‌ 6ರಂದು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಸ್ವಾಗತ ಸಮಾರಂಭವಾದ ಸರ್ವೋದಯ ಸಮಾವೇಶದಲ್ಲಿ ನಾವೆಲ್ಲರೂ ತೋರಿಸಬೇಕಿದೆ ಎಂದರು.

Tumakuru: ಪ್ರವಾಸಿ ಸ್ಥಳಗಳನ್ನು ತಂಬಾಕು ಮುಕ್ತವನ್ನಾಗಿಸಿ: ಡೀಸಿ

ಎಐಸಿಸಿ ಅಧ್ಯಕ್ಷರಾಗಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ 52 ವರ್ಷದ ರಾಜಕೀಯ ಜೀವನವೇ ನಮ್ಮೆಲ್ಲರಿಗೂ ಮಾದರಿ. ಕಾರ್ಮಿಕ ಮುಖಂಡರಾಗಿದ್ದ ಖರ್ಗೆ, ಇಂದು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಪಕ್ಷ ನಿಷ್ಠೆ, ತತ್ವ ಸಿದ್ದಾಂತಗಳು, ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ನಾವುಗಳ ಸಹ ಅವರ ರೀತಿಯಲ್ಲಿ ಪಕ್ಷಕ್ಕೆ ನಿಷ್ಠರಾಗಿದ್ದರೆ ಒಂದಿಲ್ಲೊಂದು ದಿನ ಅಧಿಕಾರ ಸಿಗುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ನಾವೆಲ್ಲರೂ ಪಕ್ಷದ ಗೆಲುವಿಗಾಗಿ ದುಡಿದರೆ ಪಕ್ಷ ನಮಗೆ ಅಧಿಕಾರ ನೀಡಲಿದೆ ಎಂದು ಕಿವಿ ಮಾತು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ನವೆಂಬರ್‌ 6ರಂದು ನಡೆಯುವ ಕಾರ್ಯಕ್ರಮದ ಸಲುವಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಈಗಾಗಲೇ ಜಿಲ್ಲೆಯ ನಾಯಕರೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಹೆಚ್ಚು ಜನರನ್ನು ಕರೆತರಲು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು. ಮಾಜಿ ಶಾಸಕ ಡಾ.ರಫೀಕ್‌ಅಹಮದ್‌ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಇದರಿಂದ ಕೆಪಿಸಿಸಿಗೆ ಬಲ ಬಂದಂತಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಬಿಜೆಪಿಯ ಮುಂದೆ ದೊಡ್ಡ ಸವಾಲು ತಂದಿಟ್ಟಿದೆ. 

ಮುಂದಿನ ಒಂದುವರೆ ವರ್ಷ ಚುನಾವಣೆ ನಡೆಯಲಿದ್ದು, ಪಕ್ಷವನ್ನು ಬಲಪಡಿಸುವ ಕೆಲಸವನ್ನು ನಾವೆಲ್ಲರೂ ಮಾಡೋಣ ಎಂದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ, ಮುರುಳೀಧರ ಹಾಲಪ್ಪ, ಪ್ರಸನ್ನ ಗುಬ್ಬಿ, ಮುಖಂಡರಾದ ಹೊನ್ನಗಿರಿಗೌಡ, ಮಹಿಳಾ ಘಟಕದ ಅಧ್ಯಕ್ಷೆ ಗೀತಾರಾಜಣ್ಣ ಸರ್ವೋದಯ ಸಮಾವೇಶದ ಕುರಿತಂತೆ ಸಲಹೆ ನೀಡಿದರು. ವೇದಿಕೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮರಿಚನ್ನಮ್ಮ, ಅಪ್ತಾಬ್‌ ಅಹಮದ್‌, ಮೇಯರ್‌ ಪ್ರಭಾವತಿ, ಸೈಯದ್‌ ನಯಾಜ್‌, ಮಹೇಶ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tumakuru ಅವಳಿ ಶಿಶು ಧಾರುಣ ಸಾವು ಪ್ರಕರಣ: ಸಚಿವರ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

ನವೆಂಬರ್‌ 6ರಂದು ಬೆಂಗಳೂರಿನಲ್ಲಿ ನಡೆಯುವ ಸರ್ವೋದಯ ಸಮಾವೇಶದ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸುವ ಮೂಲಕ, ರಾಹುಲ್‌ಗಾಂಧಿ ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 2 ಸಾವಿರ ಜನರಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮುಖಂಡರು, ಸ್ಥಳೀಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಂಪರ್ಕ ನಡೆಸಿ, ಹೆಚ್ಚು ಜನರನ್ನು ಕರೆತರಲು ಪ್ರಯತ್ನಿಸಬೇಕು.
-ಮಯೂರ ಜಯಕುಮಾರ್‌ ಎಐಸಿಸಿ ಪ್ರಧಾನ ಕಾರ್ಯದರ್ಶಿ

click me!