
ಲಖನೌ(ಏ.25): ಅಚ್ಚರಿಯ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧೆ ಘೋಷಿಸಿದ್ದಾರೆ.
2 ದಿನದ ಹಿಂದೆ ಎಸ್‌ಪಿ ತೇಜ್ ಪ್ರತಾಪ್ ಯಾದವ್ ಅವರನ್ನು ಕನೌಜ್ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಈಗ ನಿರ್ಧಾರ ಬದಲಿಸಿ ಅಖಿಲೇಶ್ ಹೆಸರು ಘೋಷಿಸಲಾಗಿದೆ. ಅವರ ಚಿಕ್ಕಪ್ಪ ರಾಮ್‌ಗೋಪಾಲ್ ಯಾದವ್ ಅವರು, ‘ಅಖಿಲೇಶ್ ಯಾದವ್ ಇಂದು (ಏ.25) ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ 2000, 2004 ಹಾಗೂ 2009 ರಲ್ಲಿ ಸಂಸದರಾಗಿ ಕನೌಜ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2012ರಲ್ಲಿ ಮುಖ್ಯಮಂತ್ರಿಯಾದಾಗ ಲೋಕಸಭಾ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಪತ್ನಿ ಡಿಂಪಲ್ ಯಾದವ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಬಿಜೆಪಿಯ ಸುಬ್ರತ್ ಪಾಠಕ್ ವಿರುದ್ಧ ಡಿಂಪಲ್ ಸೋತಿದ್ದರು. ಕನೌಜ್ ಕ್ಷೇತ್ರದಲ್ಲಿ ಮೇ. 13ರಂದು ಮತದಾನ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.