ದೇಶ, ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ಹೊಂದಾಣಿಕೆ ರಾಜಕಾರಣ: ಜನಾರ್ದನ ರೆಡ್ಡಿ

By Kannadaprabha News  |  First Published Apr 22, 2023, 11:30 PM IST

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನಿಟ್ಟಿನಲ್ಲಿ ವಿಶ್ವಗುರು ಬಸವಣ್ಣನವರ ತತ್ವದರ್ಶಗಳಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ಅಥಣಿ ಮತಕ್ಷೇತ್ರದಲ್ಲಿ ಪೊಲೀಸ್‌ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ನಿರ್ವಹಿಸಿ ಅಪಾರ ಜನ ಬೆಂಬಲಗಳಿಸಿರುವ ಬಸವರಾಜ ಬಿಸನಕೊಪ್ಪ ಸಿಪಿಐ ಹುದ್ದೆಗೆ ರಾಜೀನಾಮೆ ಸಲ್ಲಿಸಿ ನಿಮ್ಮೆಲ್ಲರ ಸೇವೆಗೆ ಸಿದ್ಧರಾಗಿ ಬಂದಿದ್ದಾರೆ. ಅವರಿಗೆ ನೀವೆಲ್ಲರೂ ಆಶೀರ್ವಾದ ಮಾಡಬೇಕು: ಜನಾರ್ದನ ರೆಡ್ಡಿ 


ಅಥಣಿ(ಏ.22): ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡು ಆಡಳಿತ ನಡೆಸುತ್ತಿವೆ. ಇವುಗಳಿಂದ ರಾಜ್ಯದಲ್ಲಿ ನಿರೀಕ್ಷೆಯ ಪ್ರಮಾಣದ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಬೃಹತ್‌ ರೋಡ್‌ ಶೋ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಕನ್ನಡ ನಾಡಿನ ಪ್ರತಿಯೊಂದು ಕ್ಷೇತ್ರವು ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿಕೃತ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ಮಾತನಾಡಿ, ಜನಸೇವೆಯನ್ನು ಬಯಸಿ ನಾನು ಸಿಪಿಐ ಹುದ್ದೆಗೆ ರಾಜೀನಾಮೆ ಸಲ್ಲಿಸಿ ರಾಜಕೀಯ ಪ್ರವೇಶ ಮಾಡಿದ್ದೇನೆ. ಅಥಣಿ ಅಭಿವೃದ್ಧಿಗಾಗಿ ಮತ್ತು ಜನಾರ್ದನ ರೆಡ್ಡಿ ಅವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯಂತೆ ಬಸವಣ್ಣನವರ ತತ್ವ ಆದರ್ಶಗಳಂತೆ ಕೆಲಸ ಮಾಡುತ್ತಿವೆ ಎಂದು ಭರವಸೆ ನೀಡಿದರು.

Tap to resize

Latest Videos

ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಕಿವಿಗೊಡಬೇಡಿ: ರಮೇಶ ಜಾರಕಿಹೊಳಿ

ಈ ಸಂದರ್ಭದಲ್ಲಿ ಪಕ್ಷದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡರು ಹಾಗೂ ನ್ಯಾಯವಾದಿ ಮಿತೇಶ ಪಟ್ಟಣ, ಡಾ.ಜಗದೀಶ ಮಿರಜಕರ, ವಿಜಯ ಹುದ್ದಾರ, ರಾಜು ಜಮಖಂಡಿಕರ, ಲಕ್ಷ್ಮಣ ಅವರಾದಿ, ರಾವಸಾಬ್‌ ಹೊಸಮನಿ, ಸದಾಶಿವ ಜನವಾಡ, ಶೇಖರ ಹುಲ್ಯಾಳ, ಚಿದಾನಂದ ಶೇಗುಣಸಿ, ಹಣಮಂತ ಕೊಳಗೇರಿ, ಗುರುಪಾದ ಗುಡ್ಡಾಪುರ, ಸಂತೋಷ ಪಾಟೀಲ, ಸಂತೋಷ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ನಿಟ್ಟಿನಲ್ಲಿ ವಿಶ್ವಗುರು ಬಸವಣ್ಣನವರ ತತ್ವದರ್ಶಗಳಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ಅಥಣಿ ಮತಕ್ಷೇತ್ರದಲ್ಲಿ ಪೊಲೀಸ್‌ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ನಿರ್ವಹಿಸಿ ಅಪಾರ ಜನ ಬೆಂಬಲಗಳಿಸಿರುವ ಬಸವರಾಜ ಬಿಸನಕೊಪ್ಪ ಸಿಪಿಐ ಹುದ್ದೆಗೆ ರಾಜೀನಾಮೆ ಸಲ್ಲಿಸಿ ನಿಮ್ಮೆಲ್ಲರ ಸೇವೆಗೆ ಸಿದ್ಧರಾಗಿ ಬಂದಿದ್ದಾರೆ. ಅವರಿಗೆ ನೀವೆಲ್ಲರೂ ಆಶೀರ್ವಾದ ಮಾಡಬೇಕು. ಬರುವ ಮೇ.10ರಂದು ನಡೆಯುವ ಚುನಾವಣೆಯಲ್ಲಿ ಫುಟ್ಬಾಲ್‌ ಗುರುತಿಗೆ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಬೇಕು ಅಂತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 

ನಾಮಪತ್ರ ಸಲ್ಲಿಸಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಎಲ್ಲ ಯುವಶಕ್ತಿಗೆ, ಪಕ್ಷದ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ, ರೈತರಿಗೆ, ಸೈನಿಕರಿಗೆ ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಬರುವ ಮೇ.10ರಂದು ನಡೆಯುವ ಚುನಾವಣೆಯಲ್ಲಿ ನಮ್ಮ ಪಕ್ಷದ ಗುರುತು ಫುಟ್ಬಾಲ್‌ ಚಿಹ್ನೆಗೆ ತಮ್ಮ ಅತ್ಯಮೂಲ್ಯವಾದ ಮತಗಳನ್ನು ನೀಡುವ ಮೂಲಕ ನನ್ನನ್ನ ಗೆಲ್ಲಿಸಬೇಕು. ನನ್ನ ಉಸಿರಿರುವವರಿಗೆ ನಿಮ್ಮೆಲ್ಲರ ಪ್ರೀತಿಗೆ ಪಾತ್ರರಾಗಿ ಸೇವೆ ಸಲ್ಲಿಸುತ್ತೇನೆ ಅಂತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿಕೃತ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ತಿಳಿಸಿದ್ದಾರೆ. 

ಸೊಕ್ಕಿನ ಮನುಷ್ಯ ಸೋಲು ಕಾಣಬೇಕು; ಲಕ್ಷ್ಮಣ ಸವದಿ ವಿರುದ್ಧ ಗುಡುಗಿದ ಸಾಹುಕಾರ!

ಯುವ ಮತದಾರರ ಶಕ್ತಿ ಪ್ರದರ್ಶನದೊಂದಿಗೆ ಬೃಹತ್‌ ರೋಡ್‌ ಶೋ

ರಾಜ್ಯದಲ್ಲಿ ಮೇ.10 ರಂದು ಜರುಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಅಥಣಿ ಪಟ್ಟಣದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ತಮ್ಮ ಪಕ್ಷದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜೊತೆಗೆ ಮತಕ್ಷೇತ್ರದ ಸಾವಿರಾರು ಯುವ ಮತದಾರರ ಶಕ್ತಿ ಪ್ರದರ್ಶನ ಮಾಡುವ ಮೂಲಕ ಬೃಹತ್‌ ರೋಡ್‌ ಶೋ ನಡೆಸಿ ಚುನಾವಣಾ ಅಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಯುವಕರು ಬೈಕ್‌ರಾರ‍ಯಲಿ ನಡೆಸುವ ಮೂಲಕ ಬೃಹತ್‌ ಮೆರವಣಿಗೆ ಯಶಸ್ವಿಗೊಳಿಸಿದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಾಲಯದಿಂದ ಆರಂಭವಾದ ಮೆರವಣಿಗೆ ಟಿಪ್ಪು ಸರ್ಕಲ್‌, ಶಿವಯೋಗಿ ಸರ್ಕಲ್, ಅಂಬೇಡ್ಕರ್‌ ಸರ್ಕಲ್‌ ಮತ್ತು ಕ್ರಾಂತಿವೀರಣ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಸಮಾರೋಪಗೊಂಡಿತು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!