ಸ್ವಾಸ್ಥ್ಯ ಕದಡುವ ಎಲ್ಲ ಸಂಘಟನೆ ನಿಷೇಧ: ಪರಮೇಶ್ವರ್‌

Published : May 03, 2023, 02:00 AM IST
ಸ್ವಾಸ್ಥ್ಯ ಕದಡುವ ಎಲ್ಲ ಸಂಘಟನೆ ನಿಷೇಧ: ಪರಮೇಶ್ವರ್‌

ಸಾರಾಂಶ

ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ ಬದ್ಧವಾಗಿದೆ. ಬಜರಂಗದಳ ಮತ್ತು ಪಿಎಫ್‌ಐ ಅಷ್ಟೇ ಅಲ್ಲದೆ ಸಮಾಜದ ಸ್ವಾಸ್ಥ್ಯ ಕದಡುವ ಎಲ್ಲ ರೀತಿಯ ಸಂಘಟನೆಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ: ಡಾ. ಜಿ.ಪರಮೇಶ್ವರ್‌ 

ಬೆಂಗಳೂರು(ಮೇ.03): ರಾಜ್ಯದಲ್ಲಿ ಶಾಂತಿ ಕದಡುವ ಸಂಘ-ಸಂಸ್ಥೆಗಳನ್ನು ನಿಯಂತ್ರಣ ಮಾಡುವ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ಮಾಡಲು ನಾವು ಎಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ ಬದ್ಧವಾಗಿದೆ. ಬಜರಂಗದಳ ಮತ್ತು ಪಿಎಫ್‌ಐ ಅಷ್ಟೇ ಅಲ್ಲದೆ ಸಮಾಜದ ಸ್ವಾಸ್ಥ್ಯ ಕದಡುವ ಎಲ್ಲ ರೀತಿಯ ಸಂಘಟನೆಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ. ಅಂತಹ ಸಂಘಟನೆಗಳ ನಿಷೇಧವನ್ನೂ ಮಾಡಲಾಗುವುದು. ಕರ್ನಾಟಕ ಶಾಂತವಾಗಿರಬೇಕು. ಎಲ್ಲರೂ ಸಮಾನತೆಯಿಂದ ಜೀವಿಸಬೇಕು ಎಂಬುದು ನಮ್ಮ ಉದ್ದೇಶ. ಆ ದೃಷ್ಟಿಯನ್ನಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕೊರಟಗೆರೆ: ಪ್ರಚಾರ ವೇಳೆ ಪರಂ ತಲೆಗೆ ಗಾಯ

ಪ್ರಣಾಳಿಕೆಯಲ್ಲಿ ಪ್ರತಿಯೊಂದು ಕ್ಷೇತ್ರವನ್ನೂ ಗಣನೆಗೆ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಪ್ರವಾಸ ಕೈಗೊಂಡು, ಎಲ್ಲ ಸಮುದಾಯದವರನ್ನು ಭೇಟಿ ಮಾಡಿ, ಅವರ ಸಮಸ್ಯೆ ಅರಿತು ಪ್ರಣಾಳಿಕೆ ರಚಿಸಿದ್ದೇವೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಸೇರಿ ಇನ್ನಿತರ ರಾಜ್ಯಗಳಲ್ಲಿ ಕಾಂಗ್ರೆಸ್‌ ಸರ್ಕಾರ ಅನುಷ್ಠಾನಗೊಳಿಸಿದ ಕಾರ್ಯಕ್ರಮಗಳನ್ನು ಅಧ್ಯಯನ ನಡೆಸಿ ಅವನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಅಗತ್ಯವಿರುವ ಅಂಶಗಳನ್ನು ತಿಳಿಸಲಾಗಿದೆ. ಮುಂದಿನ 25 ವರ್ಷಗಳ ದೃಷ್ಟಿಯಲ್ಲಿಟ್ಟುಕೊಂಡು ಪ್ರಣಾಳಿಕೆಯನ್ನು ರಚಿಸಲಾಗಿದೆ. ಯುವಕರು, ಮಹಿಳೆಯರು ಸೇರಿ ಎಲ್ಲ ವರ್ಗದವರಿಗೂ ಆದ್ಯತೆ ನೀಡಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಯೋಜನೆಗಳನ್ನು ಸೇರಿಸಲಾಗಿದೆ ಎಂದು ವಿವರಿಸಿದರು.

ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ತನಿಖೆಯನ್ನು ಪ್ರಣಾಳಿಕೆಯಲ್ಲಿ ತರುವ ಅವಶ್ಯಕತೆಯಿಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಭ್ರಷ್ಟಾಚಾರ ನಿಯಂತ್ರಣ ಮಾಡುವುದಕ್ಕೆ ಯಾವುದೇ ಕಠಿಣ ನಿಯಮ ಜಾರಿಗೆ ತರಲು ನಾವು ಸಿದ್ಧರಿದ್ದೇವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದು ಮಾಡುವುದರಿಂದ ಕೇಂದ್ರ ಸರ್ಕಾರದೊಂದಿಗೆ ತಿಕ್ಕಾಟವಾಗಬಹುದು. ಶಿಕ್ಷಣ ಎನ್ನುವುದು ಬಹಳ ಮುಖ್ಯವಾದ ವಿಚಾರ. ಹೀಗಾಗಿ ಎನ್‌ಇಪಿ ತಿರಸ್ಕಾರ ಮಾಡಿ ನಮ್ಮದೇ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.

ಸದಾಶಿವ ಆಯೋಗದ ವರದಿಯನ್ನು ಸದನದ ಮುಂದೆ ಇಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯ ಮಾಡುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಿದ್ಧಪಡಿಸಲಾದ ಜಾತಿ ಗಣತಿ ವರದಿಯನ್ನೂ ಜಾರಿ ಮಾಡುತ್ತೇವೆ. ಈ ಹಿಂದಿನ ನಮ್ಮ ಸರ್ಕಾರ ನೀಡಿದ ಉತ್ತಮ ಕಾರ್ಯಕ್ರಮಗಳನ್ನು ಅಳವಡಿಸಿ ಸಾಮಾಜಿಕ ನ್ಯಾಯದ ಅಡಿಪಾಯದಲ್ಲಿ ಎಲ್ಲ ಸಮುದಾಯಗಳ ಅಭಿವೃದ್ಧಿಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!