ಡಾ.ಬಿ.ಆರ್. ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ದವಾಗಿದ್ದರು; ಅಜ್ಜಂಪೀರ್ ಖಾದ್ರಿ

By Sathish Kumar KH  |  First Published Nov 12, 2024, 12:22 PM IST

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧತೆ ನಡೆಸಿದ್ದರು ಆದರೆ ಕೊನೆಗೆ ಬೌದ್ಧ ಧರ್ಮವನ್ನೇ ಆರಿಸಿಕೊಂಡರು ಎಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರೆಲ್ಲ ಮುಸ್ಲಿಮರಾಗುತ್ತಿದ್ದರು ಎಂದು ಅವರು ಅಭಿಪ್ರಾಯಪಟ್ಟರು.


ಹಾವೇರಿ (ನ.12): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ದತೆ ಮಾಡಿಕೊಂಡಿದ್ದರು. ಅಂಬೇಡ್ಕರ್ ಅವರು ಮುಸ್ಲಿಂ ಧರ್ಮ ಸ್ವೀಕರಿಸಲು ಎಲ್ಲ ಸಿದ್ದತೆ ಆಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಬೌದ್ದ ಧರ್ಮ ಸ್ವೀಕರಿಸಿದರು ಎಂದು ನಾನು ಓದಿ ತಿಳಿದುಕೊಂಡಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಕಾಂಗ್ರೆಸ್‌ನಿಂದ ಆಯೋಜನೆ ಮಾಡಲಾಗಿದ್ದ ಆದಿ ಜಾಂಬವ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ, ಅಂಬೇಡ್ಕರ್ ಅವರ ಮುಸ್ಲಿಂ ಧರ್ಮ ಸ್ವೀಕರಿಸಲು ಎಲ್ಲ ಸಿದ್ದತೆ ಆಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬೌದ್ದ ಧರ್ಮ ಸ್ವೀಕರಿಸಿದರು ಎಂದು ನಾನು ಓದಿ ತಿಳಿದುಕೊಂಡಿದ್ದೇನೆ. ಒಂದು ವೇಳೆ ಅಂಬೇಡ್ಕರ್ ಬೌದ್ದ ಧರ್ಮ ಸ್ವೀಕರಿಸದೇ ಹೋಗಿದ್ದರೆ ದಲಿತರೆಲ್ಲ ಮುಸ್ಲೀಮರಾಗುತ್ತಿದ್ದರು ಎಂದು ಹೇಳಿಕೆಯನ್ನು ನೀಡಿದ್ದಾರೆ.

Latest Videos

undefined

ಇದನ್ನೂ ಓದಿ: ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ: ಸರ್ಕಾರದ ಸ್ಪಷ್ಟನೆ

ರಾಜ್ಯ ಸರ್ಕಾರದ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ.ಜಿ. ಪರಮೇಶ್ವರ್ ಹೋಗಿ ಫೀರ್ ಸಾಹೇಬ್ ಆಗುತ್ತಿದ್ದರು. ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಿದ್ದರೆ ಎಲ್.ಹನುಮಂತಯ್ಯ ಹೋಗಿ ಹಸನ್ ಸಾಬ್ ಆಗುತ್ತಿದ್ದರು. ಮಂಜುನಾಥ್ ತಿಮ್ಮಾಪುರ್ ಹೋಗಿ  ಬಾಬೂಸಾಬ್ ಆಗುತ್ತಿದ್ದರು. ಆದರೆ, ಈಗಲೂ ಎಲ್ಲೆಲ್ಲಿ ದಲಿತ ಕೇರಿ ಇದೆಯೋ ಅಲ್ಲೆಲ್ಲ ಪಕ್ಕದಲ್ಲೇ ಮುಸ್ಲೀಂ ದರ್ಗಾ ಇದೆ. ದಲಿತರಿಗೂ ಮುಸ್ಲಿಮರಿಗೂ ಇರುವ ಬಾಂಧವ್ಯ ಹಾಗೆ ಇದೆ ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅಂಬೇಡ್ಕರ್ ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ದವಾಗಿದ್ದರು ಎಂದು ಹೇಳಿ ತಮ್ಮ ಅಜ್ಞಾನದ ಪ್ರದರ್ಶನ ಮಾಡಿದ್ದಾರೆ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಇಸ್ಲಾಂ ಅಂದರೆ ಅಸಹಿಷ್ಣುತೆಯಿಂದ ಕೂಡಿದೆ, ಮಹಿಳೆಯರನ್ನು ಗುಲಾಮರ ರೀತಿ ನಡೆಸಿಕೊಳ್ಳಲಾಗುತ್ತದೆ. ಬುರ್ಖಾ ಗುಲಾಮಗಿರಿಯ ಪ್ರತೀಕ ಎಂದು ಅಂಬೇಡ್ಕರ್ ಅವರೇ ವಿಶ್ಲೇಷಣೆ ಮಾಡಿದ್ದಾರೆ. ಅಂಬೇಡ್ಕರ್ ಅವರ ಥಾಟ್ಸ್ ಅಫ್ ಪಾಕಿಸ್ತಾನ್ ಪುಸ್ತಕವನ್ನು ಅಜ್ಜಂಪೀರ್ ಖಾದ್ರಿ ಓದಲಿ. ಬಕಾಸುರ ಮತ್ತು ಭಸ್ಮಾಸುರ ಎರಡೂ ಸೇರಿದರೆ ಏನಾಗುತ್ತದೋ ಅದು ಇಂದು ಕಾಂಗ್ರೆಸ್ ಅಗಿದೆ. ಅದಕ್ಕೆ ಜಮೀರ್ ಅಹಮದ್ ತರಹದವರು ಈ ರೀತಿ ಎಲ್ಲಾ ಹೇಳಿಕೆ ಕೊಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು.

click me!