
ವಿಧಾನ ಪರಿಷತ್ತು: ವಿಧಾನಮಂಡಲದ ಉಭಯ ಸದನಗಳಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ನಾಗೇಂದ್ರ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿರುವುದು ಮತ್ತಷ್ಟು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
ಬಿಜೆಪಿ ಸದಸ್ಯ ಶಶಿಲ್ ನಮೋಶಿ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಸಚಿವ ನಾಗೇಂದ್ರ, 2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಇದೇ ಸಚಿವಾಲಯದ ಅಧೀನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಅಂತಾ ರಾಮಾಯಣದ ಮೇಲೆ ನಾಗೇಂದ್ರ ಪ್ರಮಾಣ ಮಾಡಲಿ: ಶ್ರೀರಾಮುಲು
ಸಚಿವಾಲಯದ ಕಾರ್ಯನಿರ್ವಹಣೆಗೆ ಒಟ್ಟು 16 ಹುದ್ದೆಗಳನ್ನು ಸರ್ಕಾರ ಮೀಸಲಿಟ್ಟಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಸಂಬಂಧಿತ ಆಡಳಿತಾತ್ಮಕ ಕಾರ್ಯಗಳನ್ನು ಈ ಸಚಿವಾಲಯದ ಮೂಲಕ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನಾಗೇಂದ್ರ ತಲೆದಂಡಕ್ಕೆ ಬಿಜೆಪಿ ಬಿಗ್ ಪ್ಲಾನ್! ಬಳ್ಳಾರಿ ಪಾದಯಾತ್ರೆ ದಿನಾಂಕ, ಆರಂಭ ಸ್ಥಳದ ಬಗ್ಗೆ ಶೀಘ್ರ ಘೋಷಣೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.