ಅಮಿತ್ ಶಾ ರಾಜ್ಯಕ್ಕೆ ಆಗಮನ ವೇಳೆ ವಿಮಾನ ನಿಲ್ದಾಣದಲ್ಲಿ ಕಿತ್ತಾಡಿಕೊಂಡ ಪ್ರತಾಪ್ ಸಿಂಹ- ಪ್ರೀತಮ್ ಗೌಡ

Published : Feb 11, 2024, 11:42 AM ISTUpdated : Feb 11, 2024, 11:50 AM IST
ಅಮಿತ್ ಶಾ ರಾಜ್ಯಕ್ಕೆ ಆಗಮನ ವೇಳೆ  ವಿಮಾನ ನಿಲ್ದಾಣದಲ್ಲಿ ಕಿತ್ತಾಡಿಕೊಂಡ ಪ್ರತಾಪ್ ಸಿಂಹ- ಪ್ರೀತಮ್ ಗೌಡ

ಸಾರಾಂಶ

ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮನ ವೇಳೆ ಮೈಸೂರು - ಕೊಡಗು ಸಂಸದ ಪ್ರತಾಪ್‌ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ  ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ  ಘಟನೆ ನಡೆದಿದೆ.

ಮೈಸೂರು (ಫೆ.11): ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮನ ವೇಳೆ ಮೈಸೂರು - ಕೊಡಗು ಸಂಸದ ಪ್ರತಾಪ್‌ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ  ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ  ಘಟನೆ ನಡೆದಿದ್ದು, ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಬಗ್ಗೆ ಸೂಚನೆ, ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಮನವಿ ವೇಳೆ  ಮಾಜಿ ಶಾಸಕ ಪ್ರೀತಮ್ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಪ್ರತಾಪ್ ಸಿಂಹ ಇದೆಲ್ಲವನ್ನೂ ಹಾಸನದಲ್ಲಿ ಇಟ್ಕೋ, ನಮ್ಮಲ್ಲಿ ನಡೆಯಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೀತಂ ಗೌಡ ಸುಮ್ಮನಾಗದೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಇಬ್ಬರ ನಡುವಿನ ಮಾತಿನ ಚಕಮಕಿಯನ್ನು ಸ್ಥಳೀಯ ನಾಯಕರು ಸುಮ್ಮನಾಗಿಸಿದರು.

ಯುಪಿಎ ಸರ್ಕಾರ 10 ವರ್ಷದ ದುರಾಡಳಿತ ನಡೆಸಿತ್ತು: ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಸುತ್ತೂರು ಜಾತ್ರೆ ವೇದಿಕೆಯಲ್ಲಿ ಮೈತ್ರಿ ನಾಯಕರು:
ಇನ್ನು ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಜೊತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ವೇದಿಕೆ ಹಂಚಿಕೊಳ್ಳಲಿದ್ದಾರೆ. ನಾಯಕರು ಸುತ್ತೂರು ಜಾತ್ರಾಮಹೋತ್ಸವದಲ್ಲಿ  ಭಾಗಿಯಾಗಲಿದ್ದು, ಮೈತ್ರಿ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೆ ವೇದಿಕೆ ಹಂಚಿಕೊಳ್ಳುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕುಮಾರಸ್ವಾಮಿ ಹಾಗೂ ವಿಜಯೇಂದ್ರರಿಗೆ 5 ನಿಮಿಷ ಭಾಷಣಕ್ಕೆ ಅವಕಾಶ ನೀಡಲಾಗಿದೆ. ಅಮಿತ್ ಶಾ ಹೊರತು ಕೇವಲ ಇಬ್ಬರು ನಾಯಕರುಗಳಿಗೆ ಭಾಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮ ಮುಗಿದ ಬಳಿಕ ಅಮಿತ್ ಶಾ ಜೊತೆ ಭೋಜನ ಕೂಟ ಕೂಡ ಇರಲಿದೆ.

ಈಶ್ವರಪ್ಪ, ಅನಂತಕುಮಾರ್ ಹೆಗಡೆಗೆ ಗುಂಡಿಕ್ಕಲಿ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಸುತ್ತೂರು ಕಾರ್ಯಕ್ರಮದಲ್ಲಿ ಅಮಿತ್ ಶಾ ಜೊತೆಗೆ ಶ್ರೀಮತಿ ಸೊನಾಲ್ ಶಾ, ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಹೆಚ್ ಡಿ ಕುಮಾರಸ್ವಾಮಿ, ಆರ್ ಅಶೋಕ್, ಬಿವೈ ವಿಜಯೇಂದ್ರ, ಪ್ರಭಾಕರ ಖೋರೆ ಭಾಗಿಯಾಗಲಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ