ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿ.ಕೆ.ಶಿವಕುಮಾರ್

Published : Aug 22, 2025, 05:51 AM IST
DK Shivakumar

ಸಾರಾಂಶ

ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು.

ವಿಧಾನ ಪರಿಷತ್ತು (ಆ.22): ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆಯನ್ನು ಒಮ್ಮೆ ಆಂಧ್ರಪ್ರದೇಶ, ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು ಎಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿಚಾರವಾಗಿ ಶುಕ್ರವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು. ಆದರೆ ಎರಡು ರಾಜ್ಯದವರು ದೂರವಾಣಿ ಕರೆ ಮಾಡಿ ನಿಲ್ಲಿಸಿದರು. ಕೇಂದ್ರ ಸಚಿವರನ್ನು ನಾನು, ಮುಖ್ಯಮಂತ್ರಿಯವರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು ಎಂದರು. ಈ ಯೋಜನೆಗೆ ₹2 ಲಕ್ಷ‌‌ ಕೋಟಿ ಬೇಕಾಗುತ್ತದೆ.‌ ಇದು ಸಾಧ್ಯವಾಗುತ್ತದೆಯೇ? ಇದಕ್ಕೆ ಏನಾದರೊಂದು ಪರಿಹಾರ ಕಂಡುಹಿಡಿಯಲು ಒಂದು ಹಂತಕ್ಕೆ ಬಂದಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳು ಅಲ್ಲಿನ ರೈತರನ್ನು ಒಪ್ಪಿಸಿದರೆ ಸರ್ಕಾರ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು.

2 ಲಕ್ಷ‌ ಕೋಟಿ ಬೇಕು: ಸುಪ್ರೀಂ ಕೊರ್ಟಿನಿಂದ ಎಕರೆಗೆ 8- 10 ಕೋಟಿ ರು. ಪರಿಹಾರ ನೀಡಿ ಎಂದು ಆದೇಶವಾಗಿದೆ. ಇಷ್ಟು ಪರಿಹಾರ ಮೊತ್ತ ಬೆಂಗಳೂರಿನಲ್ಲಿಯೇ ಇಲ್ಲ. ಸ್ವಾಧೀನ ಭೂಮಿಗೆ ನ್ಯಾಯಾಲಯಗಳಲ್ಲಿ ಆದ ಹೆಚ್ಚುವರಿ ಪರಿಹಾರದ ಸರಾಸರಿಯಂತೆ ಪರಿಗಣಿಸಿದರೆ ಯೋಜನೆ (3) ಜಾರಿಗೆ‌ 2 ಲಕ್ಷ‌‌ ಕೋಟಿ ರು. ಬೇಕಾಗುತ್ತದೆ.‌ ಇದು ಸಾಧ್ಯವಾಗುತ್ತದೆಯೇ? ಇದಕ್ಕಾಗಿ ಕಂದಾಯ ಇಲಾಖೆಯಿಂದ ನೀರಾವರಿ ಇಲಾಖೆಗೆ ಭೂಮಿ ಹಸ್ತಾಂತರ ಕುರಿತ ವಿಚಾರವನ್ನು ಸಚಿವ ಸಂಪುಟದ ಮುಂದಿಡಲಾಗಿದೆ.

ಈ ಯೋಜನೆ ವಿಚಾರದಲ್ಲಿ ದೊಡ್ಡ ಹಗರಣವೇ ನಡೆಯುತ್ತಿದೆ. ಭೂಮಿ ಪರಿಹಾರ ವಿಚಾರದಲ್ಲಿ ವಕೀಲರು ಹಣ ಮಾಡುತ್ತಿದ್ದಾರೆಯೇ ವಿನಃ ರೈತರಿಗೆ ಪರಿಹಾರ ದೊರೆಯುವುದಿಲ್ಲ.‌ ಆದ ಕಾರಣ ಪರಿಷತ್ ಸದಸ್ಯರಾದ ಪೂಜಾರ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಅಲ್ಲಿನ ರೈತರನ್ನು ಸಮಾಧಾನ ಪಡಿಸಿದರೆ ಹದಿನೈದು ದಿನಗಳಲ್ಲಿ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ