ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಪಡೆಯಲು ರಾಜ್ಯ ಕಾಂಗ್ರೆಸ್ ಇಂತಿಷ್ಟು ಡೊನೇಶ್ ಪಾವತಿ ನಿಯಮ ಜಾರಿ ಯಶಸ್ವಿಯಾಗಿತ್ತು. ಇದೀಗ ಇದೇ ನಿಮಯವನ್ನು ಲೋಕಸಭಾ ಚುನಾವಣೆಯಲ್ಲೂ ಅನುಸರಿಸುತ್ತಾ? ಆಂಧ್ರಪ್ರದೇಶ ಕಾಂಗ್ರೆಸ್ ಲೋಕಸಭಾ ಚುನಾವಣೆ ಟಿಕೆಟ್‌ಗೆ ಡೊನೇಶ್ ದರ ಫಿಕ್ಸ್ ಮಾಡಿದೆ.
ವಿಶಾಖಪಟ್ಟಣಂ(ಜ.24) ಲೋಕಸಭಾ ಚುನಾವಣೆಗೆ ತಿಂಗಳು ಮಾತ್ರ ಬಾಕಿ. ತಯಾರಿಗಳು ನಡೆಯುತ್ತಿದೆ. ಮೈತ್ರಿಯಲ್ಲಿ ಬಿರುಕು ಮೂಡಿದರೂ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ ಯಾತ್ರೆ ಮೂಲಕ ಹೊಸ ಉತ್ಸಾಹದಲ್ಲಿ ಅಖಾಡಕ್ಕಿಳಿಯಲು ಸಜ್ಜಾಗಿದೆ. ಲೋಕಸಭಾ ಚುನಾವಣೆ ಟಿಕೆಟ್ ಪಡೆಯಲು ಅಭ್ಯರ್ಥಿಗಳು ಪಕ್ಷಕ್ಕೆ ಇಂತಿಷ್ಟು ದೇಣಿಗೆ ನೀಡಬೇಕು ಅನ್ನೋ ನಿಯಮವನ್ನು ಪಕ್ಷ ದೇಶಾದ್ಯಂತ ಜಾರಿಗೊಳಿಸುತ್ತಾ? ಅನ್ನೋ ಕುತೂಹಲ ಇದೀಗ ಹೆಚ್ಚಾಗಿದೆ. ಕಾರಣ ಆಂಧ್ರ ಪ್ರದೇಶ ಕಾಂಗ್ರೆಸ್ ಲೋಕಸಭಾ ಚುನಾವಣೆ ಟಿಕೆಟ್‌ಗೆ ಡೊನೇಶನ್ ಫಿಕ್ಸ್ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಅನುಸರಿಸಿದ ಇದೇ ನಿಯಮ ಇದೀಗ ಲೋಕಸಭೆ ಚುನಾವಣೆಯಲ್ಲಿ ಜಾರಿಗೆ ಬರಲಿದೆ ಅನ್ನೋ ಚರ್ಚೆ ಜೋರಾಗಿದೆ.
ಆಂಧ್ರ ಪ್ರದೇಶದಲ್ಲಿ ಲೋಕಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್‌ಗೆ ಅಭ್ಯರ್ಥಿಗಳು 25,000 ರೂಪಾಯಿ ಹಣವನ್ನು ಪಕ್ಷಕ್ಕೆ ದೇಣಿಗೆ ನೀಡಬೇಕು. ಇನ್ನು ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ 15,000 ರೂಪಾಯಿ ದೇಣಿಗೆ ನೀಡುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಪಕ್ಷವನ್ನು ಆರ್ಥಿಕವಾಗಿ ಬಲಪಡಿಸಲು ಕಾಂಗ್ರೆಸ್ ಮೆಘಾಪ್ಲಾನ್ ಮಾಡಿದೆ.
ಇಂಡಿಯಾ ಮೈತ್ರಿ ಚೂರು ಚೂರು, ಪಂಜಾಬ್‌ನಲ್ಲಿ ಮೈತ್ರಿ ಇಲ್ಲ ಏಕಾಂಗಿ ಹೋರಾಟ ಘೋಷಿಸಿದ ಆಪ್!
ಲೋಕಸಭಾ ಚುನಾವಣೆ ಟಿಕೆಟ್ ಅಕಾಂಕ್ಷಿಗಳು ದೇಣಿಗೆ ಪಾವತಿಸಿ ಅರ್ಜಿ ಸಲ್ಲಿಕೆ ಮಾಡಲು ಸೂಚಿಸಲಾಗಿದೆ. ಮುಂದಿನ ಎರಡು ವಾರದಲ್ಲಿ ಅಕಾಂಕ್ಷಿಗಳು ದೇಣಿಗೆಯೊಂದಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಅರ್ಜಿಗಳನ್ನು ಆಂಧ್ರಪ್ರದೇಶ ಕಾಂಗ್ರೆಸ್ ಪರೀಶೀಲನೆ ನಡೆಸಿ ಪಟ್ಟಿ ತಯಾರಿಸಲಿದೆ. ಈ ಪಟ್ಟಿಯನ್ನು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಲಾಗುತ್ತದೆ. ಸ್ಕ್ರೀನಿಂಗ್ ಕಮಿಟಿ ಹಾಗೂ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದ್ದಾರೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಉಸ್ತುವಾರಿ ಮಾಣಿಕಂ ಠಾಗೋರ್ ಹೇಳಿದ್ದಾರೆ.
ಆಂಧ್ರ ಪ್ರದೇಶ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಈಗಲೇ ತಯಾರಿ ಮಾಡಿಕೊಳ್ಳುತ್ತಿದೆ. ಆದರೆ ಇಂಡಿಯಾ ಮೈತ್ರಿ ಒಕ್ಕೂಟದ ಪ್ರಮುಖ ಎರಡು ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಏಕಾಂಗಿಯಾಗಿ ಹೋರಾಡುವುದಾಗಿ ಹೇಳಿದೆ. ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮರಕ್ಕೂ ಮುನ್ನವೇ ಕಾಂಗ್ರೆಸ್‌ಗೆ ತಲೆನೋವು ಹೆಚ್ಚಾಗಿದೆ.
ಲೋಕಸಮರಕ್ಕೂ ಮುನ್ನ ಮೈತ್ರಿ ಠುಸ್, ಬಂಗಾಳದಲ್ಲಿ ಏಕಾಂಗಿ ಹೋರಾಟ ಘೋಷಿಸಿದ ಮಮತಾ!