ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಶೀಘ್ರದಲ್ಲೇ ಬಡ್ತಿ ಭಾಗ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

Published : Sep 16, 2025, 02:03 PM IST
Lakshmi Hebbalkar

ಸಾರಾಂಶ

ಸಿಎಂ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಹೆಚ್ಚಿನ ಅನುದಾನ ಬಂದಿದೆ ಹಾಗೂ ರಾಜ್ಯದಲ್ಲಿ ಇರೋ ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಘೋಷಣೆ ಮಾಡಿದರು.

ಬೆಳಗಾವಿ (ಸೆ.16): ರಾಜ್ಯದಲ್ಲಿ ಇರೋ ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಘೋಷಣೆ ಮಾಡಿದರು. ಬೆಳಗಾವಿಯಲ್ಲಿ ನಡೆದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಹೆಚ್ಚಿನ ಅನುದಾನ ಬಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೆ 30 ಸಾವಿರ ಕೋಟಿ ಅನುದಾನ ಕೊಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಇಲಾಖೆಯಿಂದ ಗೃಹ ಲಕ್ಷ್ಮೀ ಯೋಜನೆಯಡಿ 2 ಸಾವಿರ ಕೊಡ್ತಿದ್ದೇವೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ ಎಂದರು.

ಮಹಿಳೆಯರು, ಮಕ್ಕಳ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ಕೊಟ್ಟಿದೆ. ನಮ್ಮ ಇಲಾಖೆ ಮೇಲೆ ಆರೋಗ್ಯವಂತ ಸಮಾಜ ನಿರ್ಮಿಸುವ ಜವಾಬ್ದಾರಿಯಿದೆ. ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಪೋಷಣೆ ಅಭಿಯಾನ ನಡೆಯುತ್ತಿದೆ. ಅಪೌಷ್ಟಿಕತೆ ಮಕ್ಕಳನ್ನ ಪೌಷ್ಟಿಕ ಮಕ್ಕಳಾಗಿ ಸಬಲಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಸುಭದ್ರವಾದ ಭಾರತ ನಿರ್ಮಿಸುವ ಕೆಲಸ ಮಾಡಬೇಕಿದೆ. ಅಂಗನವಾಡಿ ಕಾರ್ಯಕರ್ತೆಯರು ತಾಯಿ ಸ್ಥಾನದಲ್ಲಿ ನಿಂತುಕೊಂಡು ಕೆಲಸ ಮಾಡ್ತಿದ್ದಾರೆ. ನಾವು ಗೌರವ ಧನ ಕೊಡ್ತಿದ್ದೇವೆ ಅನ್ನೋ ಭಾವನೆ ಇಲ್ಲ. ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ , ಮಹಿಳೆಯರ ಮೇಲೆ ನಡೆಯುತ್ತಿರೋ ದೌರ್ಜನ್ಯ ತಡೆಯಬೇಕಿದೆ ಎಂದು ತಿಳಿಸಿದರು.

ದೌರ್ಜನ್ಯಕ್ಕೆ ಒಳಗಾದವರು ನೇರವಾಗಿ ನನಗೆ ಕರೆ ಮಾಡಿ. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿ ನಿರ್ಮಾಣಕ್ಕೆ ಶ್ರಮಿಸಬೇಕಿದೆ. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿಗೆ 25 ಸಾವಿರ ಬಹುಮಾನ‌ ಕೊಡ್ತಿವಿ ಎಂದು ರಾಜ್ಯದ ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟರಲ್ಲದೇ 400 ಜನ‌ ಅಂಗನವಾಡಿ ಕಾರ್ಯಕರ್ತರಿಗೆ ಸೂಪರ್ ವೈಸರ್ ಆಗಿ ಬಡ್ತಿ ಕೊಡ್ತಿವಿ. ಸೂಪರ್ ವೈಸರ್ ಆಗಿ ಇರೋರಿಗೂ ಅಸಿಸ್ಟೆಂಟ್ ಸಿಡಿಒ‌‌ ಆಗಿ ಬಡ್ತಿ ಕೊಡ್ತಿವಿ. ಈ ಬಗ್ಗೆ ಈಗ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ಭಾಗ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಕೋಮು ಸೌಹಾರ್ದ ಕದಡುವ ಬಿಜೆಪಿ

ರಾಜ್ಯ ಸರ್ಕಾರದ ಜನಪ್ರಿಯತೆ ಸಹಿಸದ ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರವನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದರು.ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಆರೋಪ ಮಾಡಲು ಬೇರೆ ವಿಷಯಗಳಿಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಜಾರಿಯಾದರೂ ನಾಲ್ಕು ತಿಂಗಳಿಗಷ್ಟೇ ಎಂದು ಸುಳ್ಳು ಪ್ರಚಾರ ಮಾಡಲಾಯಿತು. ಆದರೆ ನಮ್ಮ ಸರ್ಕಾರ ಜನತೆಗೆ ಸಾಕಷ್ಟು ಅನುಕೂಲಗಳನ್ನು ಒದಗಿಸಿದೆ.

ಇದನ್ನು ಸಹಿಸದ ಬಿಜೆಪಿ ನಾಯಕರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.ಮಾಜಿ ಸಚಿವ ಸಿ.ಟಿ. ರವಿ ವಿರುದ್ಧ ದಾಖಲಾದ ಎಫ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ, ಯಾರೇ ದ್ವೇಷಪೂರಿತ ಭಾಷಣ ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಶಾಂತಿ ಕದಡಿದರೆ ಖಂಡಿತ ಎಫ್‌ಐಆರ್ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ