Anganawadi Worker's Problem: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಸಂತೋಷ್ ಲಾಡ್

Kannadaprabha News   | Kannada Prabha
Published : Jun 22, 2025, 08:41 AM IST
Santosh lad

ಸಾರಾಂಶ

ಮಕ್ಕಳ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ಧಾರವಾಡ (ಜೂ.22): ಮಕ್ಕಳ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಘಟಕದ ವತಿಯಿಂದ 3ನೇ ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಮಹಿಳೆಯರಿಗೆ ಸಮಾನತೆ ಕೊಟ್ಟವರು ಜಗಜ್ಯೋತಿ ಬಸವೇಶ್ವರರು, ಡಾ. ಬಿ.ಆರ್. ಅಂಬೇಡ್ಕರ. ಇವರು ಸಮಾನತೆ ನೀಡಿದ್ದರಿಂದಲೇ ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಮುಂದುವರೆದು ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ಸಂವಿಧಾನ ಜಾರಿಗೆ ಬಂದ ನಂತರ ಮಹಿಳಾ ಸಮಾನತೆ ಬಂದಿದೆ. ಈ ಮೊದಲು ಮಹಿಳೆಯರಿಗೆ ಆಸ್ತಿ ಹಕ್ಕು ಸೇರಿದಂತೆ ಎಲ್ಲ ಹಕ್ಕಿನಿಂದ ವಂಚಿತರಾಗಿದ್ದರು. ಆದರೆ, ನಂತರದಲ್ಲಿ ಮಹಿಳೆಯರಿಗೆ ಪ್ರತಿಯೊಂದು ಹಕ್ಕು ದೊರೆಯುವಂತೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತಂದು ಅವರನ್ನು ಆರ್ಥಿಕವಾಗಿಯೂ ಸ್ವಾವಲಂಬಿಯನ್ನಾಗಿ ಮಾಡುತ್ತಿದೆ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಪಕ್ಷಾತೀತವಾಗಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ನಾನೂ ಸಹ ಪ್ರಯತ್ನಿಸುತ್ತೇನೆ. ಕೋವಿಡ್‌ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸಿದ್ದೀರಿ. ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇವೆ ಎಂದರು.

ಎಐಪಿಟಿಎಫ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಬಲಿಷ್ಠವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಸಂತಸದ ವಿಷಯ. ನಿಮ್ಮ ಸಂಘಟನೆಯೊಂದಿಗೆ ನಾವಿದ್ದು, ನಿಮ್ಮೆಲ್ಲ ಸಮಸ್ಯೆಗೆ ಸ್ಪಂದಿಸುತ್ತೇವೆ. ಗುತ್ತಿಗೆ ನೌಕರರಿಗೆ ನೀಡಿದ ವೈದ್ಯಕೀಯ ಸೌಲಭ್ಯವನ್ನು ನಿಮಗೂ ನೀಡಲು ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದರು.

ಸಂಘದ ಜಿಲ್ಲಾಧ್ಯಕ್ಷೆ ರತ್ನಾ ಶಿರೂರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಸವಿತಾ ಅಂಗಡಿ, ಎಫ್.ಬಿ. ಕಣವಿ, ಎಂ. ಜಯಮ್ಮ, ಶಂಕರ ಹಲಗತ್ತಿ, ಆರ್.ಎಫ್. ಕವಳಿಕಾಯಿ, ಎಚ್.ಎಚ್. ಕುಕನೂರ, ಕಮಲಾ ಬೈಲೂರ, ಎನ್.ಎಫ್. ಸಮುದ್ರಿ, ಚಿನ್ನಕ್ಕ ಅಂಗಡಿ, ಕಸ್ತೂರಿ ಬೇಂದ್ರೆ, ಭಾರತಿ ಹಳೇಮನಿ, ನಾಗಮ್ಮ ಒಣರೊಟ್ಟಿ, ನಿರ್ಮಲಾ ಕುಲಕರ್ಣಿ, ಶಿವಲೀಲಾ ನಡೂರಮಠ, ವಿಜಯಲಕ್ಷ್ಮಿ ಹಿರೇಮಠ, ಮಂಜುಳಾ ಯಡ್ರಾವಿ, ಲತಾ ಗೋಡಕೆ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌ನ ಲೋಕಾಯುಕ್ತರ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!