ನಿಖಿಲ್ ಸೋಲಿನ ಬಗ್ಗೆ ಮೊದಲ ಬಾರಿಗೆ ತಾಯಿ ಅನಿತಾ ಮಾತು

By Sathish Kumar KH  |  First Published Nov 25, 2024, 6:10 PM IST

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ತಾಯಿ ಅನಿತಾ ಕುಮಾರಸ್ವಾಮಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಸೋಲು-ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ನಿಖಿಲ್ ಒಳ್ಳೆಯ ಮಗ, ಪತಿ, ತಂದೆ ಎಂದು ಹೇಳಿದ್ದಾರೆ.


ಬೆಂಗಳೂರು (ನ.25): ಚನ್ನಪಟ್ಟಣ ಉಪ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಿಂದ ಸ್ಥಳೀಯ ನಾಯಕ ಸಿ.ಪಿ. ಯೋಗೇಶ್ವರ ಅರ ವಿರುದ್ಧ ಸೋಲನುಭವಿಸಿದ ನಿಖಿಲ್ ಕುಮಾರಸ್ವಾಮಿ ಪರವಾಗಿ ಇದೇ ಮೊದಲ ಬಾರಿಗೆ ಅವರ ತಾಯಿ ಅನಿಕಾ ಕುಮಾರಸ್ವಾಮಿ ಮಾತನಾಡಿದ್ದಾರೆ. ಈ ಮೂಲಕ ಟೀಕೆಮಾಡುತ್ತಿದ್ದ ಎಲ್ಲ ನಾಯಕರಿಗೆ ತಿರುಗೇಟು ಕೊಡುವ ಪ್ರಯತ್ನ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, 'ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.

Latest Videos

undefined

ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ. ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.

ಇದನ್ನೂ ಓದಿ: ಶಿವಮೊಗ್ಗ ನಗರಕ್ಕೆ ವಿಮಾನದಲ್ಲಿ ಬಂದು ಇಂದಿರಾ ಕ್ಯಾಂಟೀನ್ ಊಟ ಮಾಡಿಹೋದ ಮಿನಿಸ್ಟರ್ ರಹೀಂ ಖಾನ್!

'ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು. ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು. ಧನ್ಯವಾದಗಳು -ಶ್ರೀಮತಿ ಅನಿತಾ ಕುಮಾರಸ್ವಾಮಿ' ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಗೌಡರಿಗೆ ವಯಸ್ಸಾಗಿದ್ದು ಜೆಡಿಎಸ್ ಪಕ್ಷ ಮುನ್ನಡೆಸೋಕಾಗ್ತಿಲ್ಲ, ಪರ್ಯಾಯ ನಾಯಕರೂ ಇಲ್ಲ; ಸಿಪಿವೈ

click me!