ಫ್ರೀ ವಿದ್ಯುತ್ ಕೊಡ್ತೇವೆ ಅಂತಾ ಹೇಳಿ ಅಧಿಕಾರಕ್ಕೆ ಬಂದು ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಯದ್ವತದ್ವಾ ಏರಿಕೆ ಮಾಡಿದೆ ಎಂದು ಸಂಸದ ಪ್ರತಾಪ ಸಿಂಹ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು (ಜೂ.19) ಫ್ರೀ ವಿದ್ಯುತ್ ಕೊಡ್ತೇವೆ ಅಂತಾ ಹೇಳಿ ಅಧಿಕಾರಕ್ಕೆ ಬಂದು ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಯದ್ವತದ್ವಾ ಏರಿಕೆ ಮಾಡಿದೆ ಎಂದು ಸಂಸದ ಪ್ರತಾಪ ಸಿಂಹ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜನರಿಗೆ ಉಚಿತ ಕೊಡ್ತೇವೆ ಎಂದು ಸುಳ್ಳು ಹೇಳಿ ಈಗ ಕರೆಂಟು ಶಾಕ್ ಕೊಡ್ತಿದೆ. ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಸರ್ಕಾರದಿಂದ ಕೈಗಾರಿಕೆಗಳಿಗೆ ಬರೆ ಹಾಕುವ ಕೆಲಸ ನಡೆಯುತ್ತಿದೆ ಎಂದರು.
200 ಯುನಿಟ್ ಫ್ರೀ ಅಂತಾ ಹೇಳಿದ್ದಿರಿ. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ವಾ? ನಿಮ್ಮದು ದೋಖಾ ಸರಕಾರ ಎಂಬುದು ಸಾಬೀತುಪಡಿಸಿದ್ದೀರಿ. ರಾಜ್ಯದ ಜನರು ಕೈಗಾರಿಕೋದ್ಯಮಿಗಳು ಕರೆ ಕೊಟ್ಟ ಕರ್ನಾಟಕ ಬಂದ್ ಗೆ ಕೈ ಜೋಡಿಸುವಂತೆ ಕರೆ ನೀಡಿದರು.
ಅನ್ನಭಾಗ್ಯ ಯೋಜನೆಗೆ ಮತ್ತೆ ಹಿನ್ನಡೆ: ಅಕ್ಕಿ ಸರಬರಾಜು ಸಾಧ್ಯವಿಲ್ಲವೆಂದ ತೆಲಂಗಾಣ ಸರ್ಕಾರ
ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳು ಹೇಗೆ ಎಂದರೆ, ಒಂಥರಾ ಗಂಡನ ದರೋಡೆ ಮಾಡಿ, ಪತ್ನಿಗೆ ಕೊಟ್ಟಹಾಗೆ. ಗಂಡನ ಜೇಬಿಗೆ ಕತ್ತರಿ ಹಾಕಿ ಪತ್ನಿಗೆ ಕೊಡುವುದರಲ್ಲಿ ಏನೂ ಅರ್ಥ ಇದೆ ಹೇಳಿ? ಪ್ರಶ್ನಿಸಿದರು.
ಯಾರದೋ ದುಡ್ಡು ಕಾಂಗ್ರೆಸ್ ಜಾತ್ರೆನಾ?
ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಬಿಜೆಪಿ ಒತ್ತಡ ತರಲಿ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಂಸದರು. 5 ಕೆಜಿ ಅಕ್ಕಿ ಕೊಡುವುದು ಕೇಂದ್ರ ಸರಕಾರ ಅಂತಾ ಪ್ರಥಮ ಬಾರಿಗೆ ಸತ್ಯ ಹೇಳಿದ್ದಕ್ಕೆ ಸಿದ್ದರಾಮಯ್ಯನವರಿಗೆ ಧನ್ಯವಾದ. ಮೋದಿಯವರು ಕೊಡುವ ಐದು ಕೆಜಿ ಗೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ 10 ಕೆಜಿ ಸೇರಿಸಿ 15ಕೆ ಜಿ ರಾಜ್ಯದ ಜನರಿಗೆ ಕೊಡಬೇಕು ನೀವು. ಆದರೆ ಕೇಂದ್ರ ಸರ್ಕಾರ ಕೊಡುವ ಅಕ್ಕಿಮೇಲೆ ತಮ್ಮ ಹೆಸರು ಹಾಕಿಸಿಕೊಳ್ಳುವುದು ಸರಿನಾ? ಯಾರಾದೋ ದುಡ್ಡು ಕಾಂಗ್ರೆಸ್ ಜಾತ್ರೆ ನಾ? ಮೋದಿ ಸರಕಾರದ ಅಕ್ಕಿ ಸಿದ್ರಾಮಣ್ಣನ ಜಾತ್ರೆ ನಾ? ಇದೊಳ್ಳೆ ತಮಾಷೆಯಾಗಿದೆ ನೋಡಿ. ಮೋದಿ ಅವರು ಅಕ್ಕಿ ಕೊಡಬೇಕು. ನೀವು ಚುನಾವಣೆ ಗೆದ್ದು ಬರಬೇಕಾ? ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಿ. ಅಕ್ಕಿ ಖರೀದಿ ಆಗದಿದ್ದರೆ
ಗಂಡನ ಅಕೌಂಟ್ ಗೆ ಅಕ್ಕಿಯ ಹಣ ಹಾಕಿ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ಅನ್ನಭಾಗ್ಯಕ್ಕೆ ರಾಜ್ಯದ ರೈತರಿಂದಲೇ ಭತ್ತ, ರಾಗಿ, ಜೋಳ ಖರೀದಿಸಿ: ಕುರುಬೂರು ಶಾಂತಕುಮಾರ್
ಎಲ್ಲ ಕಡೆ ಫ್ರೀ ಅಕ್ಕಿ ಕೊಡೋಕಾಗುತ್ತಾ?
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಎಲ್ಲಾ ಕಡೆ ಚುನಾವಣೆ ಇದೆ. ಅಲ್ಲೂ ನೀವು ಫ್ರೀ ಅಕ್ಕಿ ಘೋಷಣೆ ಮಾಡಿದರೆ ಅಕ್ಕಿ ಕೋಡೋಕೆ ಆಗುತ್ತಾ? ಮೋದಿ ಅವರ ಕೈಯಲ್ಲಿ ಅಷ್ಟು ಪ್ರಮಾಣದ ಅಕ್ಕಿ ಕೊಡೋಕೆ ಆಗಿದ್ದರೆ ನಾವೇ ಕೊಡ್ತಿದ್ವಿ. ಅಕ್ಕಿಯನ್ನು ತಯಾರಿಸೋಕೆ ಆಗಲ್ಲ. ಬೆಳೆಯಬೇಕು. ಈ ಬಾರಿ ಮುಂಗಾರು ಕೈಕೊಟ್ಟಿದೆ. ಬರ ಬಂದರೆ, ಜಲಪ್ರಳಯವಾದರೆ ಅಂತ ಪ್ರದೇಶಗಳಿಗೆ ಅಕ್ಕಿ ಕೊಡಬೇಕಾದರೆ ಕೇಂದ್ರ ಏನ್ ಮಾಡಬೇಕು ಎಂದು ಪ್ರಶ್ನಿಸಿದರು.
ಸಚಿವ ಎಂ.ಬಿ.ಪಾಟೀಲ್‌ಗೆ ತಿರುಗೇಟು:
ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಎಂ.ಬಿ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದರು, ಎಂ.ಬಿ. ಪಾಟೀಲ್ ಗೆ ಈಗ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ ಎಂದು ತಿರುಗೇಟು ನೀಡಿದರು.
ಕುಳಿತ ಕಡೆ ಕಂತೆಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಅಂತಾ ವಿಲವಿಲ ಒದ್ದಾಡುತ್ತಿದ್ದಾರೆ. ಎಂ.ಬಿ. ಪಾಟೀಲ್ ಗೆ ಬರೀ ಚಿಲ್ಲರೆ , ನೋಟು ಅದಕ್ಕಾಗಿ ಚಿಲ್ಲರೆ ಮಾತುಗಳನ್ನಾಡುತ್ತಾರೆ. ಸಿದ್ದರಾಮಯ್ಯರನ್ನು ಓಲೈಕೆ ಮಾಡುವುದೇ ತಮ್ಮ ಖಾತೆ ಜವಾಬ್ದಾರಿ ಅಂತಾ ಪಾಟೀಲ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡೋದೆ ನಿಮ್ಮ ಕೆಲಸನಾ ಎಂ.ಬಿ. ಪಾಟೀಲ್?
ಮಹದೇವಪ್ಪ, ಎಂ.ಬಿ. ಪಾಟೀಲ್ ಇಬ್ಬರೂ ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಎಂದು ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ರಿಗೆ ಅಧಿಕಾರ ಬಿಟ್ಟು ಕೊಡುವ ಇರಾದೆ ಇಲ್ಲ. ಸಿದ್ದರಾಮಯ್ಯ ತಮ್ಮ
ಚೇಲಾ ಪಡೆ ಮೂಲಕ ತಾವೂ ಪೂರ್ಣ ಅವಧಿಗೆ ಸಿಎಂ ಅಂತಾ ಹೇಳಿಸುತ್ತಿದ್ದಾರೆ ಅಷ್ಟೆ. ಸಿದ್ದರಾಮಯ್ಯ ಗೆ ತಾವೇ ಪೂರ್ಣಾವಧಿ ಸಿಎಂ ಅಂತಾ ನೇರವಾಗಿ ಹೇಳುವ ಧೈರ್ಯವಿಲ್ಲ. ಅವರಿಗೆ ಪುಕ್ಕಲತನ. ಚುನಾವಣೆ ಗೆಲ್ಲಲು ಡಿಕೆ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಧಾರಾಳಾ ಮನಸ್ಸಿನಿಂದ ಸಿದ್ದರಾಮಯ್ಯರನ್ನ ಎರಡನೇ ಬಾರಿ ಸಿಎಂ ಮಾಡಿದೆ. ಆದರೆ ಸಿದ್ದರಾಮಯ್ಯ ಗೆ ಅಂತಹ
ಧಾರಳ, ಉದಾರತನದ ಮನಸ್ಸು ಇಲ್ಲ ಎಂದರು.