ರಾಜಸ್ಥಾನದಿಂದ ರಾಜ್ಯಸಭೆಗೆ ಅಣ್ಣಾಮಲೈ ನಾಮ ನಿರ್ದೇಶನ

By Sathish Kumar KHFirst Published Jul 15, 2023, 10:51 PM IST
Highlights

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು 73 ಸ್ಥಾನಗಳನ್ನು ಹೊಂದಿರುವ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ. 

ನವದೆಹಲಿ (ಜು.15): ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು 73 ಸ್ಥಾನಗಳನ್ನು ಹೊಂದಿರುವ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ. 

ಅಣ್ಣಾಮಲೈ ಅವರು ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಅವರು ಸೇವೆಗೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಿದ್ದರು. ಅವರು ತಮಿಳುನಾಡಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದಾಗಿನಿಂದ, ಬಿಜೆಪಿ ಹೆಚ್ಚು ಆಕ್ರಮಣಕಾರಿಯಾಗಿದೆ. ಜೊತೆಗೆ ಹಲವಾರು ಜನ ಕೇಂದ್ರಿತ ಸಮಸ್ಯೆಗಳನ್ನು ಸರ್ಕಾರದ ಮುಂದೆ ತರುತ್ಥಾ ಬಿಜೆಪಿಯನ್ನು ತಮಿಳುನಾಡಿನಲ್ಲಿ ಪರಿಣಾಮಕಾರಿಯಾಗಿ ಸಂಘಟಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಅವಕಾಶ ಸಿಗದಿದ್ದರೂ, ರಾಜಸ್ಥಾನದಿಂದ ನೇರವಾಗಿ ರಾಜ್ಯಸಭೆಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

Latest Videos

ರಾಜ್ಯಪಾಲರು ರಾಜಕೀಯ ಮಾತನಾಡಬಾರದು: ತಮಿಳುನಾಡು ಗವರ್ನರ್‌ ವಿರುದ್ಧ ಅಣ್ಣಾಮಲೈ ಕಿಡಿ

ಜು.28ಕ್ಕೆ ಎನ್‌ ಮನ್‌ ಮಕ್ಕಳ್‌ ಪಾದಯಾತ್ರೆ:  ಮುಂದಿನ ವಾರ ದಕ್ಷಿಣ ಆಫ್ರಿಕಾದ ಬ್ರಿಕ್ಸ್‌ನಲ್ಲಿ ನಡೆಯಲಿರುವ ನೀತಿ ಚರ್ಚೆಯಲ್ಲಿ ಭಾಗವಹಿಸುವ ನಾಲ್ಕು ಸದಸ್ಯರ ಬಿಜೆಪಿ ನಿಯೋಗದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನು ಹೆಸರಿಸಲಾಗಿದೆ. ಲಂಡನ್‌ನಲ್ಲಿ ರಾಷ್ಟ್ರೀಯ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅಣ್ಣಾಮಲೈ ಭಾಷಣಕಾರರೂ ಆಗಿದ್ದರು.  ಅಣ್ಣಾಮಲೈ ಜುಲೈ 28 ರಿಂದ ತಮಿಳುನಾಡಿನಾದ್ಯಂತ 'ಎನ್ ಮನ್ ಎನ್ ಮಕ್ಕಳ್' ಹೆಸರಿನಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. 'ಪಾದಯಾತ್ರೆ'ಯನ್ನು ರಾಮೇಶ್ವರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ.

ಸರ್ಕಾರದ ವಿರುದ್ಧ ಗಂಭೀರ ಆರೋಪ:  ಚೆನ್ನೈ ಮೂಲದ ಚಿಂತಕರ ಚಾವಡಿ ಕಾರ್ಯಕ್ರಮದಲ್ಲಿ ನೀತಿ ಮತ್ತು ಅಭಿವೃದ್ಧಿ ಅಧ್ಯಯನ ಕೇಂದ್ರದ ನಿರ್ದೇಶಕ ಸಿ.ರಾಜೀವ್ ಐಎಎನ್‌ಎಸ್‌ನೊಂದಿಗೆ ಮಾತನಾಡುತ್ತಾ, ಕೆ.ಅಣ್ಣಾಮಲೈ ಅವರು ಬಿಜೆಪಿಯ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷರಾದ ನಂತರ ಪಕ್ಷವು ಬಲಗೊಂಡಿದೆ. ಆಡಳಿತಾರೂಢ ಡಿಎಂಕೆ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಸೇರಿದಂತೆ ಆಕ್ರಮಣಕಾರಿ ಮತ್ತು ಹಲವಾರು ಜನ-ಕೇಂದ್ರಿತ ಸಮಸ್ಯೆಗಳನ್ನು ಎತ್ತಿದ್ದಾರೆ ಎಂದು ಹೇಳಿದ್ದರು. 

Party Rounds: ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಬಹುತೇಕ ಫೈನಲ್‌?

ತಮಿಳುನಾಡಲ್ಲಿ ಬಿಜೆಪಿ ಭವಿಷ್ಯಕ್ಕೆ ಭದ್ರ ಬುನಾದಿ:  ಇನ್ನು ಅಣ್ಣಾಮಲೈ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದರೆ ರಾಜ್ಯದಲ್ಲಿ ಬಿಜೆಪಿಯ ಭವಿಷ್ಯಕ್ಕೆ ದೊಡ್ಡ ಉತ್ತೇಜನ ಸಿಗಲಿದೆ ಎಂಬುದು ಕೇಂದ್ರ ಬಿಜೆಪಿ ಹೈಕಮಾಂಡ್‌ನ ಚಿಂತನೆಯಾಗಿದೆ. ಈಗಾಗಲೇ ನಿರ್ಮಲಾ ಸೀತಾರಾಮನ್‌ ಅವರನ್ನು ಕೂಡ ತಮಿಳುನಾಡಿನಿಂದ ಲೋಕಸಭೆ ಅಥವಾ ರಾಜ್ಯಸಭೆಗೆ ಆಯ್ಕೆ ಮಾಡಲು ಸಾಧ್ಯವಿಲ್ಲದ್ದರಿಂದ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ಪ್ರಸ್ತುತ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಹಣಕಾಸು ಸಚಿವರಾಗಿದ್ದಾರೆ.

click me!