
ಕೊಯಮತ್ತೂರು: ಈ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ, ತಮಗೆ ವಹಿಸಲಾಗಿದ್ದ 6 ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹೊಣೆಯಿಂದ ದಿಢೀರ್ ಹಿಂದೆ ಸರಿದಿದ್ದಾರೆ. ಅವರು ಸ್ಪರ್ಧಿಸುತ್ತಾರೆ ಎನ್ನಲಾದ ಸಿಂಗನಲ್ಲೂರು ಕ್ಷೇತ್ರವೂ ಇದರಲ್ಲಿ ಸೇರಿರುವುದು ಗಮನಾರ್ಹ.
ಮಂಗಳವಾರ ಈ ಕುರಿತು ಹೇಳಿಕೆ ನೀಡಿದ ಅವರು, ‘ನನ್ನ ತಂದೆಗೆ ಅನಾರೋಗ್ಯದ ಕಾರಣ ಅವರನ್ನು ನೋಡಿಕೊಳ್ಳಲು ಕೊಯಮತ್ತೂರಿನಲ್ಲಿಯೇ ಉಳಿದುಕೊಂಡಿದ್ದೇನೆ. ಅದು ನನ್ನ ಮೊದಲ ಕರ್ತವ್ಯ. ಆದ್ದರಿಂದ, ನನಗೆ ಚುನಾವಣಾ ಕೆಲಸಗಳನ್ನು ಮಾಡಲು ಅಥವಾ ಹೆಚ್ಚು ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಇದನ್ನು ರಾಜ್ಯಾಧ್ಯಕ್ಷ ನೈನಾರ್ ನಾಗೇಂತಿರನ್ ಅವರಿಗೆ ತಿಳಿಸಿದ್ದೇನೆ. ಪಕ್ಷವು ಈ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ಮರು ನಿಯೋಜಿಸಲಿದೆ’ ಎಂದಿದ್ದಾರೆ.
ಬಿಜೆಪಿಯು ತಾನು ಸ್ಪರ್ಧೆ ಮಾಡಲಿರುವ 41 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.