ಡಿಕೆಶಿ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ; ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು!

Kannadaprabha News   | Kannada Prabha
Published : Jun 09, 2026, 11:05 AM IST
Zameer ahmed khan

ಸಾರಾಂಶ

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ಮತ್ತು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಆಗ್ರಹಿಸಿ ಹೊಸಪೇಟೆ ಹಾಗೂ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ನಡೆದಿವೆ. ತಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಜಮೀರ್ ಅವರ ಅಭಿಮಾನಿಗಳು ಮತ್ತು ರೈತ ಸಂಘಟನೆಗಳು ಎಚ್ಚರಿಕೆ.

ಹೊಸಪೇಟೆ/ಶಿವಮೊಗ್ಗ: ಮಾಜಿ ಸಚಿವ, ಮುಸ್ಲಿಂ ಸಮುದಾಯದ ಮುಖಂಡ, ಶಾಸಕ ಜಮೀರ್ ಅಹಮದ್(Zameer ahmed khan) ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ(DCM) ಹುದ್ದೆ ನೀಡುವಂತೆ ಆಗ್ರಹಿಸಿ ಹೊಸಪೇಟೆ ಹಾಗೂ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಹೊಸಪೇಟೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ, ಶಿರಾಳಕೊಪ್ಪದಲ್ಲಿ ಜಮೀರ್ ಅಹಮದ್ ಅಭಿಮಾನಿ ಬಳಗದಿಂದ ಪ್ರತಿಭಟನೆ ನಡೆಯಿತು. ಶಿರಾಳಕೊಪ್ಪದ ಬಸ್ ನಿಲ್ದಾಣದ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಜಮೀರ್‌ಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ರೈತರ ಅನೇಕ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೈಕ್‌ ಮತ್ತು ಅವರ ವಿದ್ಯಾಭ್ಯಾಸಕ್ಕೆ ಖರ್ಚು ವೆಚ್ಚ ನೀಡಿದ್ದಾರೆ. ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ನಂತರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮ್ಮಿಂದ ದೆಹಲಿ ಕಸಿದುಕೊಳ್ತೇವೆ' ಎಂದಿದ್ದ ಮಮತಾ ಬ್ಯಾನರ್ಜಿಗೆ ಶಾಕ್ ಕೊಟ್ಟ ಶಾ! ಟಿಎಂಸಿ 20 ಸಂಸದರು ಬಿಜೆಪಿಗೆ ಬೆಂಬಲ!
No ID no Entry: ಬಾರ್‌, ಪಬ್‌ಗಳಿಗೆ ಗುರುತಿನ ಚೀಟಿ ಇಲ್ಲದಿದ್ರೆ ಪ್ರವೇಶವಿಲ್ಲ