ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಹಿಂದಿನ ಬಿಜೆಪಿ ಸರ್ಕಾರದ ಸುಮಾರು 20 ಜನ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರೈತರು, ಅವರ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಬಿಜೆಪಿ.
ಬೆಳಗಾವಿ(ಆ.08): ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ದಲಿತಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ ಮತ್ತು ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನವನ್ನು ಬೇರೆ ಕಾರ್ಯಗಳಿಗೆ ವರ್ಗ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರಾರಯಲಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಹಿಂದಿನ ಬಿಜೆಪಿ ಸರ್ಕಾರದ ಸುಮಾರು 20 ಜನ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರೈತರು, ಅವರ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ಕಲ್ಯಾಣ ಯೋಜನೆಗಳನ್ನು ಮುಂದುವರಿಸಬೇಕು ಮತ್ತು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುದಾನ ಕಡಿತಗೊಳಿಸಬಾರದು ಎಂದು ಒತ್ತಾಯಿಸಿದರು.
ದೇಶಕ್ಕಾಗಿ 27 ವರ್ಷ ಸೇವೆಗೈದ ಸೈನಿಕನಿಗೆ 18 ವರ್ಷದಿಂದ ಜಮೀನು ಕೊಡದ ಕರ್ನಾಟಕ ಸರ್ಕಾರ
ದಲಿತರಿಗೆ ವಿಶೇಷ ಯೋಜನೆ ರೂಪಿಸಿ ಸಾವಿರಾರು ಕೋಟಿ ರುಪಾಯಿ ಅನುದಾನ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಅನುದಾನವನ್ನು ಮೆಟ್ರೋ, ರೈಲು, ಕೆರೆಗಳ ಹೂಳೆತ್ತಲು ಮತ್ತು ಲೋಕೋಪಯೋಗಿ ಇಲಾಖೆಯ ರಸ್ತೆಗಳನ್ನು ಮಾಡಲು ಹಣ ನೀಡಿ ದಲಿತರನ್ನು ವಂಚಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಮೇಲೆ ಗೂಬೆ ಕುರಿಸಿತ್ತಿದ್ದವರು ಇದೀಗ ಬಿಟ್ಟಿಗ್ಯಾರಂಟಿಗಳಿಗಾಗಿ .11 ಸಾವಿರ ಕೋಟಿಗಿಂತ ಹೆಚ್ಚು ಹಣವನ್ನು ಬಳಕೆ ಮಾಡಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕರಾದ ನಿಖಿಲ್ ಕತ್ತಿ, ಶಶಿಕಲಾ ಜೊಲ್ಲೆ, ಮಹಾನಗರ ಬಿಜೆಪಿ ಅಧ್ಯಕ್ಷ ಅನಿಲ ಬೆನಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಉಜ್ವಲಾ ಬಡವಾಣೆ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ರವಿ ಕೊಡಗಾನೂರ, ಶರದ್ ಪಾಟೀಲ, ಲೀನಾ ಟೋಪಣ್ಣವರ, ಶಿಲ್ಪಾ ಕೇಕರೆ, ಸವಿತಾ ಕರಡಿ, ಶೀಲಾ ಗಡ್ಕರಿ ಸೇರಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.