ಸಿದ್ದರಾಮಯ್ಯರಿಂದ ಹಿಂದೂ ವಿರೋಧಿ ಬಜೆಟ್‌; ದೇಗುಲ ಅನುದಾನ ಕಡಿತ, ವಕ್ಫ್‌ ಅನುದಾನ ಹೆಚ್ಚಳ : ಆರ್ ಅಶೋಕ್

By Kannadaprabha NewsFirst Published Feb 23, 2024, 10:28 AM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಹಿಂದೂ ದೇವಾಲಯ, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ನೀಡಿಕೆಯಲ್ಲಿ ಬಹಳ ಅನ್ಯಾಯ ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ವಕ್ಫ್‌ಬೋರ್ಡ್‌ಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಹಾಗಾಗಿ ಇದು ಹಿಂದೂ ವಿರೋಧಿ ಬಜೆಟ್‌ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ವಿಧಾನಸಭೆ (ಫೆ.23) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಹಿಂದೂ ದೇವಾಲಯ, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ನೀಡಿಕೆಯಲ್ಲಿ ಬಹಳ ಅನ್ಯಾಯ ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ವಕ್ಫ್‌ಬೋರ್ಡ್‌ಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಹಾಗಾಗಿ ಇದು ಹಿಂದೂ ವಿರೋಧಿ ಬಜೆಟ್‌ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಆಯವ್ಯಯ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದಾಗ ದೇವಾಲಯ ಮತ್ತು ಧಾರ್ಮಿಕ ಸಂಸ್ಥೆಗಳಿಗೆ 274 ಕೋಟಿ ರು. ಅನುದಾನ ನೀಡಿತ್ತು. ಜೊತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ, ಮಠ ಹಾಗೂ ದೇವಾಲಯಗಳಿಗೆ 2022-23 ರಲ್ಲಿ 154.80 ಕೋಟಿ ರು. ಖರ್ಚು ಮಾಡಿತ್ತು. ಈಗಿನ ಕಾಂಗ್ರೆಸ್‌ ಸರ್ಕಾರ ಕೇವಲ 17 ಕೋಟಿ ರು. ಮೀಸಲಿಟ್ಟಿದೆ. ಇದರಿಂದ ಶೇ.90 ರಷ್ಟು ಅನುದಾನ ಕಡಿತವಾಗಿದೆ. ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ 24.7 ಕೋಟಿ ರು. ಖರ್ಚು ಮಾಡಿದ್ದರೆ, ಕಾಂಗ್ರೆಸ್‌ ಕೇವಲ 10 ಕೋಟಿ ರು. ನೀಡಿದೆ. ಅದೇ, ವಕ್ಫ್‌ ಮಂಡಳಿಗೆ ಬಜೆಟ್‌ನಲ್ಲಿ 100 ಕೋಟಿ ರು. ನೀಡಲಾಗಿದೆ. ನಮ್ಮ ಹೆಸರಲ್ಲಿ ರಾಮ, ಶಿವ ಇದ್ದಾನೆ ಎನ್ನುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇದೇನಾ ಹಿಂದುಗಳಿಗೆ ನೀಡುವ ನ್ಯಾಯ ಎಂದರು.

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್? ಯತೀಂದ್ರ ಯಾರ ಜೊತೆ ಮತಾಡಿದ್ದು? ವಿಡಿಯೋದಲ್ಲಿ ಏನಿದೆ?

 

ಅನುದಾನ ಖರ್ಚಾಗಿಲ್ಲ:

ಕಳೆದ ಬಾರಿಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ನೀಡಿದ್ದ ಅನುದಾನಲ್ಲಿ ಶೇ. 54 ರಷ್ಟು ಮಾತ್ರ ಖರ್ಚು ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 1.5 ಲಕ್ಷ ಕೋಟಿ ಸಾಲ ಮಾಡಿದ್ದು, ಈ ಹಣವನ್ನು ಬಂಡವಾಳ ವೆಚ್ಚಕ್ಕೆ ಬಳಸದೆ ಕಂದಾಯ ವೆಚ್ಚಕ್ಕೆ ಬಳಸುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದಂತಾಗಿದೆ ಎಂದರು.

ಕೇಂದ್ರ ಪುರಸ್ಕೃತ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ 2.21 ಲಕ್ಷ ಕೋಟಿ ರು. ಅನುದಾನ ಬಂದಿದ್ದರೂ ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೂರುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಗ್ಯಾರಂಟಿ ಪಡೆದ ಫಲಾನುಭವಿಗಳ ಸಮೀಕ್ಷೆಗೆ ಮುಂದಾದ ಸರ್ಕಾರ; 12 ಕೋಟಿ ರೂ. ಖರ್ಚು ಮಾಡಲು ನಿರ್ಧಾರ

click me!