ಮಾಜಿ ಸಚಿವ ಎ. ಮಂಜು ಅವರು ಅಧಿಕೃತವಾಗಿ ತಾವು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯನ್ನು ಘೋಷಣೆ ಮಾಡಿಕೊಂಡಿದ್ದಾರೆ.
ಹಾಸನ (ಮಾ.07): ಮಾಜಿ ಸಚಿವ ಎ. ಮಂಜು ಅವರು ಅಧಿಕೃತವಾಗಿ ತಾವು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಈಗಾಗಲೇ ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಹೆಸರು ಘೋಷಣೆ ಮಾಡಲಾಗಿತ್ತು. ಈಗ ಬಿಜೆಪಿಯನ್ನು ತೊರೆದು ಅಧಿಕೃತವಾಗಿ ಜೆಡಿಎಸ್ ಸೇರುವ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ.
ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ತೊರೆಯುವ ಬಗ್ಗೆ ಚಿಂತನೆ ಮಾಡುತ್ತಿರುವುದು ಹಳೆಯ ವುಚಾರವಾಗಿದೆ. ಈಗಾಗಲೇ ಎ. ಮಂಜು ಅವರಿಗೆ ಟಿಕೆಟ್ ಜೆಡಿಎಸ್ ಟಿಕೆಟ್ ಹಂಚಿಕೆ ಮಾಡಲಾಗಿದ್ದು, ಆದರೂ ಬಿಜೆಪಿ ತೊರೆದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ ಆಗಿರಲಿಲ್ಲ. ಇನ್ನು ವಿಧಾನಸಭಾ ಚುನಾವಣೆಗೆ ಕೇವಲ 2 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಇಂದು ಸ್ವಗ್ರಾಮ ಅರಕಲಗೂಡು ತಾಲ್ಲೂಕಿನ, ಹನ್ಯಾಳು ಗ್ರಾಮದಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿದ ಎ.ಮಂಜು ಅವರು ಎಲ್ಲರ ಸಮ್ಮುಖದಲ್ಲಿ ನಾನು ಜೆಡಿಎಸ್‌ನಿಂದ ಸ್ಪರ್ಧಿಸುತ್ತೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
Karnataka election: ಬಿಜೆಪಿಯವರು ಜನರ ಹಣವನ್ನು ದೋಚುವ ದರೋಡೆಕೋರರು: ಎಚ್‌ಡಿಕೆ ವಾಗ್ದಾಳಿ
ಕಾರ್ಯಕರ್ತರಿಂದ ಆಣೆ ಪ್ರಮಾಣ ಮಾಡಿಸಿದ ಎ ಮಂಜು: ನಂತರ ಸಭೆಯಲ್ಲಿದ್ದ ಎಲ್ಲ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಆಣೆ, ಪ್ರಮಾಣವನ್ನು ಮಾಡಿಸಿದ್ದಾರೆ. ಇಂದಿನಿಂದ ನಾವು ಎಲ್ಲರೂ ಜೆಡಿಎಸ್ ಪರವಾಗಿ ಪಕ್ಷಕ್ಕೆ ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿಕೊಂಡು ಎ.ಮಂಜು ಅವರನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿಸಿಕೊಂಡಿದ್ದಾರೆ. ನಿಮ್ಮ ಊರುಗಳಲ್ಲಿ ನಾವೆಲ್ಲರೂ ಕೂಡ ಜೆಡಿಎಸ್ ಸೇರಿದ್ದು, ಮಂಜಣ್ಣನನ್ನು ಗೆಲ್ಲಿಸಿಕೊಳ್ಳುತ್ತೇವೆ. ನಾವೆಲ್ಲರೂ ಇನ್ನುಮುಂದೆ ಜೆಡಿಎಸ್ ಪಕ್ಷಕ್ಕೆ ದುಡಿಯುತ್ತೇವೆ ಎಂದು ಸಾವಿರಾಋಉ ಕಾರ್ಯಕರ್ತರು ಕೈಗಳನ್ನು ಮುಂದೆ ಚಾಚಿ ಆಣೆಯನ್ನು ಮಾಡಿದ್ದಾರೆ.
ಮಾ.16ರಂದು ಪಕ್ಷ ಸೇರ್ಪಡೆ ಕಾರ್ಯಕ್ರಮ:
ಈ ಸಭೆಯಲ್ಲಿ ಕಾರ್ಯಕರ್ತರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎ.ಮಂಜುವಿಗೆ ಜೈಕಾರ ಕೂಗಿದರು. ಇತ್ತೀಚೆಗಷ್ಟೇ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಎ.ಮಂಜುಗೆ ಟಿಕೆಟ್ ಕೊಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದರು. ಇನ್ನು ಮಾರ್ಚ್ 16 ಕ್ಕೆ ಅರಕಲಗೂಡಿನಲ್ಲಿ ನಡೆಯಲಿರೊ ಪಂಚರತ್ನ ಯಾತ್ರೆ ಯಶಸ್ವಿಗೊಳಿಸೊ ಮೂಲಕ ಪಕ್ಷಕ್ಕೆ ಭರ್ಜರಿ ಸೇರ್ಪಡೆ ಆಗುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಈ ಮೂಲಕ ಇಂದು ತಮ್ಮ ಬೆಂಬಲಿಗರ ಸಭೆಯಲ್ಲಿ ಅಧಿಕೃತವಾಗಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡು ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲು ಸಜ್ಜಾಗಿದ್ದಾರೆ.
ಜೆಡಿಎಸ್ಗೆ ಕೊಟ್ಟ ಮತ ವೇಸ್ಟ್, ದುಡ್ಡಿದೆ ಅಂತ ಪಂಚರತ್ನ ಯಾತ್ರೆ ಮಾಡ್ತಿದ್ದಾರೆ: ಸಿದ್ದರಾಮಯ್ಯ
ಕಾಂಗ್ರೆಸ್ ಸೇರ್ಪಡೆಗೂ ಸಿದ್ಧವಿದ್ದ ಎ ಮಂಜು: ರಾಜಕೀಯದಲ್ಲಿ ಯಾವುದೇ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಮತ್ತು ರಾಜಕೀಯದಲ್ಲಿ ಮಿತ್ರ ಅಥವಾ ಶತ್ರು ಕೂಡ ಇಲ್ಲ. ಜೆಡಿಎಸ್ ನಾಯಕರು ಆಹ್ವಾನ ನೀಡದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದೆ. ಮಾಜಿ ಸಚಿವ ಎಚ್.ಡಿ.ದೇವೇಗೌಡ ಅವರೊಂದಿಗೆ ನನಗೆ ತಂದೆ ಮತ್ತು ಮಗನ ಸಂಬಂಧವಿದೆ ಎಂದು ಹೇಳಿದ್ದರು.
ಮಂಜು ಚುನಾವಣಾ ಸ್ಪರ್ಧೆಗಳ ಮಾಹಿತಿ: 1999ರಲ್ಲಿ ಎ ಮಂಜು ಬಿಜೆಪಿ ಟಿಕೆಟ್‌ನಲ್ಲಿ ಅರಕಲಗೂಡು ಕ್ಷೇತ್ರದಿಂದ ಗೆದ್ದಿದ್ದರು. ನಂತರ ಅವರು 2008ರಲ್ಲಿ ಕಾಂಗ್ರೆಸ್ ಸೇರಿ ಅರಕಲಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಗೆದ್ದಿದ್ದ ಅವರು ಮೀನುಗಾರಿಕೆ ಮತ್ತು ಪಶುಸಂಗೋಪನೆ ಸಚಿವರಾಗಿದ್ದರು. ನಂತರ ಬಿಜೆಪಿ ಸೇರಿ 2019ರ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದರು. ಕೊಡಗಿನಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.