Aravind Limbavali Row: ಲಿಂಬಾವಳಿ ವಜಾಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

By Kannadaprabha NewsFirst Published Sep 5, 2022, 11:13 AM IST
Highlights

ಮಳೆ ಹಾನಿ ವೀಕ್ಷಣೆ ಸಂದರ್ಭದಲ್ಲಿ ಮಹಿಳೆಯ ಜತೆ ದರ್ಪ ಪ್ರದರ್ಶಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು (ಸೆ.5) : ಮಳೆ ಹಾನಿ ವೀಕ್ಷಣೆ ಸಂದರ್ಭದಲ್ಲಿ ಮಹಿಳೆಯ ಜತೆ ದರ್ಪ ಪ್ರದರ್ಶಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅರವಿಂದ ಲಿಂಬಾವಳಿ ಅವರ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಪುಷ್ಪಾ ಅಮರನಾಥ್‌ ಸೇರಿ ಹಲವರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಅವಳನ್ನ ರೇಪ್ ಮಾಡಿದ್ದೀನಾ..? ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಪ್ರತಿಭಟನೆ(Protest)ವೇಳೆ ಮಾತನಾಡಿದ ಪುಷ್ಪಾ ಅಮರನಾಥ್‌(Pushpa Amaranath), ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ ಲಿಂಬಾವಳಿ(Arvind Limbavali) ವಿರುದ್ಧ ಕ್ರಮ ಜರುಗಿಸಿಲ್ಲ. ಬಿಜೆಪಿ(BJP)ಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಒತ್ತಾಯಿಸಿದರು. ಲಿಂಬಾವಳಿ ಅವರು ಮಹಿಳೆಯನ್ನು ಅವಮಾನಿಸಿದ್ದಲ್ಲದೆ ತಮ್ಮ ವರ್ತನೆಯನ್ನು ಸಮರ್ಥನೆ ಮಾಡುತ್ತಾ ‘ನಾನೇನು ರೇಪ್‌ ಮಾಡಿದ್ನಾ’ ಎಂದು ಉದ್ದಟತನದಿಂದ ಮಾತನಾಡಿದ್ದಾರೆ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಇದೇ ವೇಳೆ ದೆಹಲಿ(Dehli)ಯಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್‌ ಹೋರಾಟಕ್ಕೆ ಬೆಂಬಲವಾಗಿ ಮಹಿಳಾ ಕಾರ್ಯಕರ್ತರು ಬೆಲೆ ಏರಿಕೆ ವಿರುದ್ಧವೂ ಪ್ರತಿಭಟನೆ ನಡೆಸಿದರು. ಗ್ಯಾಸ್‌ ಸಿಲಿಂಡರ್‌ ಪ್ರತಿಕೃತಿ ಪ್ರದರ್ಶಿಸುತ್ತಾ ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Aravind Limbavali Row: ಮಹಿಳಾ ಆಯೋಗಕ್ಕೆ ದೂರು, ಕಾನೂನು ಸಮರಕ್ಕೆ ಮುಂದಾದ ಮೇರಿ

ಎರಡು ಬಣವಾಗಿ ಪ್ರತಿಭಟನೆ: ಅರವಿಂದ ಲಿಂಬಾವಳಿ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತರು ಎರಡು ಬಣಗಳಾಗಿ ಪ್ರತಿಭಟನೆಗೆ ಮುಂದಾಗಿದ್ದು, ಚರ್ಚೆಗೆ ಕಾರಣವಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್‌ ಅವರು ಸುಮಾರು 20 ಮಂದಿ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಈ ವೇಳೆ ಮಹಿಳಾ ಕಾಂಗ್ರೆಸ್‌ ಮುಖಂಡರಾದ ಜಯಶ್ರೀ ಗೌಡ ಅವರು 60ಕ್ಕೂ ಹೆಚ್ಚು ಮಂದಿಯನ್ನು ಕರೆತಂದಿದ್ದರು. ಎರಡೂ ತಂಡ ಒಟ್ಟಾಗಿ ಪ್ರತಿಭಟನೆ ನಡೆಸುವ ಬದಲು ಸುಮಾರು ಅರ್ಧ ಗಂಟೆಯಷ್ಟುಕಾಲ ಪ್ರತ್ಯೇಕವಾಗೇ ಇದ್ದರು. ಬಳಿಕ ಎಚ್ಚೆತ್ತು ಒಟ್ಟಾಗಿ ಪ್ರತಿಭಟನೆ ನಡೆಸಿದರು.

click me!