
ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು
ಮಂಗಳೂರು(ಮಾ.16): ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಯ ಸುದ್ದಿಗೆ ತೆರಳಿದ್ದ ಮಾಧ್ಯಮಗಳಿಗೆ ಅವಾಜ್ ಹಾಕಿದ್ದಾರೆ.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ದ.ಕ ಬಿಜೆಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಮೆರೆದಿದ್ದು, ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಅನುಚಿತ ವರ್ತನೆ ತೋರಿದ್ದಾರೆ. ಮಾಧ್ಯಮದವರು ಇಲ್ಲಿ ಬರುವುದು ಯಾಕೆ?, ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ಎಂದು ದರ್ಪ ತೋರಿದ್ದಾರೆ.
ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ನಡೆದ ಘಟನೆ ಇದಾಗಿದ್ದು, ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶಿಸಿದ್ದಾರೆ. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಬಿಜೆಪಿ ನಾಯಕರು ಕ್ಷಮೆಯಾಚಿಸಿದ್ದಾರೆ. ಆದರೆ ಪುತ್ತಿಲ ಪರಿವಾರದ ಕಾರ್ಯಕರ್ತರ ದರ್ಪ ಮುಂದುವರೆದ ಕಾರಣ ಮಾಧ್ಯಮದವರು ಕಾರ್ಯಕ್ರಮ ಬಹಿಷ್ಕರಿಸಿ ಹೊರ ನಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.