ರಾಜ್ಯಕ್ಕೆ ಉಸ್ತುವಾರಿ ಅರುಣ್ ಸಿಂಗ್: ಬಿಜೆಪಿಯಲ್ಲಿ ಗರಿಗೆದರಿದ ಸಂಪುಟ ಕಸರತ್ತು..!

By Suvarna NewsFirst Published Jan 1, 2021, 4:26 PM IST
Highlights

ಬೆಳಗಾವಿ ಕೋರ್‌ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೀಗ ಶಿವಮೊಗ್ಗ ಕೋರ್‌ ಕಮಿಟಿ ಸಭೆ ಭಾರೀ ಕುತೂಹಲ ಮೂಡಿಸಿದೆ.

ಬೆಂಗಳೂರು, (ಜ. 01): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಗೆಲುವು ಸಾಧಿಸಿದ ಜೋಷ್‌ನಲ್ಲಿರುವ ರಾಜ್ಯ ಬಿಜೆಪಿ ಮುಖಂಡರು ಇದೀಗ ಸಂಪುಟ ವಿಸ್ತರಣೆಯ ಕುತೂಹಲದಲ್ಲಿದ್ದಾರೆ. 

ಹೌದು.. ನಾಳೆ (ಶನಿವಾರ) ಕೋರ್ ಕಮಿಟಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಚಾರದ ಚರ್ಚೆಗಳು ಗರಿಗೆದರಿವೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು (ಶುಕ್ರವಾರ) ಸಂಜೆಯೇ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಅವರು ದೆಹಲಿಯಿಂದ ಏನು ಸಂದೇಶ ತರುತ್ತಾರೆ ಎನ್ನುವ ಕುತೂಹಲ ಕೆರಳಿಸಿದೆ.

ಶುಕ್ರವಾರ ಸಂಜೆ 5:45ರ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಹೊರಡುವ ಅರುಣ್ ಸಿಂಗ್ ರಾತ್ರಿ ಕುಮಾರಕೃಪ ಗೆಸ್ಟ್ ಹೌಸ್​ನಲ್ಲಿ ಉಳಿದುಕೊಳ್ಳಲಿದ್ದಾರೆ. ಬೆಳಗ್ಗೆ ಇಲ್ಲಿಂದ ರಸ್ತೆ ಮೂಲಕ ಶಿವಮೊಗ್ಗಕ್ಕೆ ತೆರಳಿ ಶನಿವಾರ ಮಧ್ಯಾಹ್ನ 1 ಗಂಟೆಗೆ ತಲುಪಲಿದ್ದಾರೆ. ಅಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. 

ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಯತ್ನಾಳ್: ಹೈಕಮಾಂಡ್‌ಗೆ ದೂರು ನೀಡಲು ಸಿದ್ಧ 

ಸಂಜೆ 6ಕ್ಕೆ ಗ್ರಾಮ ಸೇವಕ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ರಾತ್ರಿ 8ಕ್ಕೆ ಶಿವಮೊಗ್ಗದಲ್ಲಿ ನಡೆಯುವ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.  ಇದರಿಂದ ಸಚಿವಾಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಜ. 3, ಭಾನುವಾರ ಬೆಳಗ್ಗೆ 10:30ರಿಂದ ಸಂಜೆ 5ರವರೆಗೆ ಅವರು ಶಿವಮೊಗ್ಗದ ಪಿಇಎಸ್ ಕಾಲೇಜಿನಲ್ಲಿ ನಡೆಯುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಿದ್ದಾರೆ. ಸಭೆ ಮುಗಿದ ಬಳಿಕ ರಸ್ತೆ ಮೂಲಕವೇ ಬೆಂಗಳೂರಿಗೆ ವಾಪಸ್ ಬಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ರಾತ್ರಿ ಉಳಿದುಕೊಂಡು ಸೋಮವಾರ ಬೆಳಗ್ಗೆ 8:20ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

click me!